ಮಂಗಳೂರು : ಸೇನಾ ಹೆಲಿಕಾಪ್ಟರ್ ದುರಂತಕ್ಕೀಡಾಗಿ ಮೃತಪಟ್ಟ ಸಿಡಿಎಸ್ ಜನರಲ್ ಬಿಪಿನ್ ರಾವತ್ ನಿಧನದ ಸಂದರ್ಭದಲ್ಲಿ ಅವಹೇಳನಕಾರಿಯಾಗಿ ಕಮೆಂಟ್ ಹಾಕಿದ ಮೂವರು ವಿರುದ್ಧ ಮಂಗಳೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ನವೆಂಬರ್ 8 ರಂದು ಸೇನಾ ಹೆಲಿಕಾಪ್ಟರ್ ದುರಂತವಾಗಿ ಸೇನಾಧಿಕಾರಿಗಳು ಸಾವನ್ನಪ್ಪಿದ್ದರು. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಲಾಗಿದೆ ಎಂದು ದೂರು ಬಂದಿದೆ. ಈ ಹಿನ್ನೆಲೆಯಲ್ಲಿ ಮೂವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ಬಿಪಿನ್ ರಾವತ್ ಮತ್ತು ಅಜಿತ್ ಧೋವಲ್ ಅವರ ಬಗ್ಗೆ ಅವಹೇಳನಕಾರಿ ಕಮೆಂಟ್ ಮಾಡಲಾಗಿದೆ. ಈ ಫೇಸ್‌ಬುಕ್ ಪೋಸ್ಟ್‌ನ ಖಾತೆದಾರರ ಬಗ್ಗೆ ಪರಿಶೀಲನೆ ಮಾಡಲಾಗುತ್ತಿದೆ. ಇದು ನೈಜ ಖಾತೆಯೋ ಇಲ್ಲ ಫೇಕ್ ಅಕೌಂಟ್ ಎಂಬ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ಅವರು ತಿಳಿಸಿದರು.