ETV Bharat / city

ಪುತ್ತೂರಿನ ಸರ್ಕಾರಿ ಆಸ್ಪತ್ರೆ ಬಳಿ ಆಕ್ಸಿಜನ್ ಪ್ಲಾಂಟ್​ ನಿರ್ಮಾಣ: ಕಟೀಲ್​ ಶಿಲಾನ್ಯಾಸ - nalin kumar katil

450ಎಲ್‌ಎಪಿ ಉತ್ಪಾದನಾ ಸಾಮರ್ಥ್ಯದ ಸಿಲಿಂಡರ್ ಆಕ್ಸಿಜನ್ ಪ್ಲಾಂಟ್​ ​ಗೆ ಪುತ್ತೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಶಿಲಾನ್ಯಾಸ ನೆರವೇರಿಸಿದರು.

nalin
nalin
author img

By

Published : May 19, 2021, 8:51 PM IST

ಪುತ್ತೂರು: ಕ್ಯಾಂಪ್ಕೋ ಸಂಸ್ಥೆಯ ಸಹಭಾಗಿತ್ವದಲ್ಲಿ ಸುಮಾರು ರೂ.1 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ 450ಎಲ್‌ಎಪಿ ಉತ್ಪಾದನಾ ಸಾಮರ್ಥ್ಯದ ಸಿಲಿಂಡರ್ ಆಕ್ಸಿಜನ್ ಪ್ಲಾಂಟ್​ಗೆ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪುತ್ತೂರು ಸರ್ಕಾರಿ ಆಸ್ಪತ್ರೆಯ ಬಳಿ ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಸಂಜೀವ ಮಠಂದೂರು, ಕೋವಿಡ್ ಸಾಂಕ್ರಾಮಿಕ ತಡೆಯುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಸಮರೋಪಾದಿಯಾಗಿ ಕೆಲಸ ನಡೆಯುತ್ತಿದೆ. ಈ ನಡುವೆ ಪುತ್ತೂರಿನಲ್ಲಿ ಕೊರೊನಾಕ್ಕೆ ಸಂಬಂಧಿಸಿದಂತೆ ಆಮ್ಲಜನಕ ಕೊರತೆ ನೀಗಿಸುವ ನಿಟ್ಟಿನಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಬೇಡಿಕೆಯಂತೆ ಜಿಲ್ಲಾಧಿಕಾರಿಗಳು ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆಯೊಂದಿಗೆ ಮಾತುಕತೆ ನಡೆಸಿ, ಇಲ್ಲಿಗೆ ನೂತನ ಆಕ್ಸಿಜನ್ ಪ್ಲಾಂಟ್​ ನಿರ್ಮಾಣವಾಗುವಂತೆ ಮಾಡಿದ್ದಾರೆ. ಇಂದು ಪುತ್ತೂರಿಗೆ ಅಚ್ಚೇ ದಿನ್ ಆಗಿದೆ. ಕ್ಯಾಂಪ್ಕೋ ಸಂಸ್ಥೆಯು ಪುತ್ತೂರಿಗೆ ಹಲವಾರು ದೊಡ್ಡ ಮಟ್ಟದ ಕೊಡುಗೆಗಳನ್ನು ಈ ಹಿಂದೆಯೂ ನೀಡುತ್ತಾ ಬಂದಿದೆ. ಇದೀಗ ಆಕ್ಸಿಜನ್ ಪ್ಲಾಂಟ್​ ನಿರ್ಮಾಣದಿಂದ ಪುತ್ತೂರಿನ ಸುತ್ತ ಮುತ್ತಲ ತಾಲೂಕುಗಳಾದ ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕುಗಳಿಗೆ ಸಹಾಯವಾಗಲಿದೆ ಎಂದರು.

ಪುತ್ತೂರಿನ ಸರ್ಕಾರಿ ಆಸ್ಪತ್ರೆಯನ್ನು 300 ಬೆಡ್‌ನ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸುವ ಬಗ್ಗೆ ಕೆಲಸ ಕಾರ್ಯಗಳು ನಡೆಯುತ್ತಿದ್ದು, ಆಕ್ಸಿಜನ್ ಪ್ಲಾಂಟ್​ ನಿರ್ಮಾಣದಿಂದ ಮುಂದೆಯೂ ಉಪಯೋಗವಾಗಲಿದೆ. ಇದರೊಂದಿಗೆ ಪುತ್ತೂರಿನಲ್ಲಿರುವ ಶವಾಗಾರದ ಸಮಸ್ಯೆಯನ್ನೂ ಮುಂದಿನ ಎರಡು ದಿನಗಳ ಒಳಗಾಗಿ ಪರಿಹರಿಸಲಾಗುವುದು. ಇದಕ್ಕಾಗಿ ಯೋಜನೆ ಸಿದ್ಧಗೊಂಡಿದೆ ಎಂದರು.

ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೂಡ್ಗಿ ಮಾತನಾಡಿ ಕ್ಯಾಂಪ್ಕೋ ಸಂಸ್ಥೆಯ ಕೇಂದ್ರ ಕಚೇರಿ ಮಂಗಳೂರಿನಲ್ಲಿದ್ದರೂ ಸಂಸ್ಥೆಯ ಹೃದಯ ಪುತ್ತೂರಿನಲ್ಲಿದೆ. ಸಂಸ್ಥೆಯಿಂದ ಆಕ್ಸಿಜನ್ ಫ್ಲಾಂಟ್ ನಿರ್ಮಿಸಲು ಇಲ್ಲಿನ ಶಾಸಕರ ಮುತುವರ್ಜಿಯೇ ಕಾರಣವಾಗಿವೆ. ಅವರ ಆಗ್ರಹದಂತೆ ಹೆಚ್ಚಿನ ಅನುದಾನವನ್ನು ಪ್ಲಾಂಟ್ ನಿರ್ಮಾಣಕ್ಕಾಗಿ ನೀಡಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಪುತ್ತೂರು ನಗರಸಭಾ ಅಧ್ಯಕ್ಷ ಕೆ. ಜೀವಂಧರ್ ಜೈನ್, ತಾಪಂ ಅಧ್ಯಕ್ಷ ಕೆ. ರಾಧಾಕೃಷ್ಣ ಆಳ್ವ, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲ ಅದ್ಯಕ್ಷ ಪಿ.ಜಿ. ಜಗನ್ನಿವಾಸ್ ರಾವ್, ಪುಡಾ ಅಧ್ಯಕ್ಷ ಭಾಮಿ ಅಶೋಕ ಶೆಣೈ, ತಾಲೂಕು ಆರೋಗ್ಯಾಧಿಕಾರಿ ಅಶೋಕ್ ಕುಮಾರ್ ರೈ, ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಆಶಾ ಪುತ್ತೂರಾಯ, ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು, ಕ್ಯಾಂಪ್ಕೋ ಸಂಸ್ಥೆಯ ಮಾಜಿ ಅಧ್ಯಕ್ಷ ಎಸ್.ಆರ್ ಸತೀಶ್ಚಂದ್ರ, ತಹಶೀಲ್ದಾರ್ ರಮೇಶ್ ಬಾಬು, ಕ್ಯಾಂಪ್ಕೋ ಸಂಸ್ಥೆಯ ನಿರ್ದೇಶಕರು ಮತ್ತಿತರರು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.