ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 30ವರೆಗೆ ರಾತ್ರಿ ಕರ್ಫ್ಯೂ ಮತ್ತು ವಾರಾಂತ್ಯ ಕರ್ಫ್ಯೂ ವಿಸ್ತರಣೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ.ಕೆ.ವಿ ಆದೇಶ ಹೊರಡಿಸಿದ್ದಾರೆ.
ಈ ಹಿಂದೆ ಹೊರಡಿಸಲಾಗಿದ್ದ ವಾರಾಂತ್ಯ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಆದೇಶ ಸೋಮವಾರಕ್ಕೆ ಕೊನೆಗೊಂಡಿದೆ. ಇದೀಗ ಆಗಸ್ಟ್ 30ರವರೆಗೆ ಕರ್ಫ್ಯೂ0 ಮುಂದುವರಿಸಲಾಗಿದೆ.
ಜಿಲ್ಲೆಯಲ್ಲಿರುವ ಎಲ್ಲಾ ಪಬ್ ಮತ್ತು ಬಾರ್ ಆ್ಯಂಡ್ ರೆಸ್ಟೋರೆಂಟ್ಗಳನ್ನು ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 7 ಗಂಟೆಯೊಳಗೆ ಮುಚ್ಚಲು ಆದೇಶಿಸಲಾಗಿದೆ.
ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ರಾತ್ರಿ ಕರ್ಫ್ಯೂ ಇದ್ದು, ಆಗಸ್ಟ್ 30ವರೆಗೆ ವಾರಾಂತ್ಯ ಕರ್ಫ್ಯೂ ಮುಂದುವರಿಯಲಿದೆ ಎಂದು ಆದೇಶಿಸಲಾಗಿದೆ.
ಇದನ್ನೂ ಓದಿ: ಬೆಳಗಾವಿಯಲ್ಲೂ ಬಿಜೆಪಿ ಧ್ವಜ ಹಾರಿಸುತ್ತೇವೆ: ನಳಿನ್ ಕುಮಾರ್ ಕಟೀಲ್