ETV Bharat / city

ನಾಮಪತ್ರ ಸಲ್ಲಿಕೆ ಹಿನ್ನೆಲೆ: ಹುಟ್ಟೂರಿನ ದೇಗುಲಕ್ಕೆ ಶೋಭಾ ಭೇಟಿ

ಪ್ರತಿ ಬಾರಿಯಂತೆ ಈ ಬಾರಿಯೂ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ನಾಮಪತ್ರ ಸಲ್ಲಿಕೆಗೆ ಮೊದಲು ತಮ್ಮ ಹುಟ್ಟೂರಿನ ದೇವಸ್ಥಾನ ಶ್ರೀ ಕಪಿಲೇಶ್ವರದಲ್ಲಿ ಪ್ರಾರ್ಥನೆ ಸಲ್ಲಿಸಿದರು.

ಕಪಿಲೇಶ್ವರದಲ್ಲಿ ಪ್ರಾರ್ಥನೆ ಸಲ್ಲಿಸುತ್ತಿರುವ ಶೋಭಾ ಕರಂದ್ಲಾಜೆ
author img

By

Published : Mar 21, 2019, 7:53 AM IST

ಪುತ್ತೂರು: ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಹಿನ್ನೆಲೆ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ತಮ್ಮ ಹುಟ್ಟೂರಿನ ದೇವಸ್ಥಾನ ಶ್ರೀ ಕಪಿಲೇಶ್ವರದಲ್ಲಿ ಪ್ರಾರ್ಥನೆ ಸಲ್ಲಿಸಿದರು.

ಪ್ರತಿ ಚುನಾವಣೆಯಲ್ಲೂ ಶೋಭಾ ತಮ್ಮ ಹುಟ್ಟೂರಾದ ಪುತ್ತೂರು ತಾಲೂಕಿನ ಚಾರ್ವಾಕ ಗ್ರಾಮದ ಶ್ರೀ ಕಪಿಲೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ನಂತರವೇ ನಾಮಪತ್ರ ಸಲ್ಲಿಸುತ್ತಾ ಬಂದಿದ್ದಾರೆ. ಈ ಹಿನ್ನೆಲೆಯಲ್ಲಿ ಶೋಭಾ ತಮ್ಮ ತಾಯಿ ಪೂವಕ್ಕ, ಸಹೋದರ ಲಕ್ಷ್ಮಣ ಕರಂದ್ಲಾಜೆ ಹಾಗೂ ಹಲವು ಬಿಜೆಪಿ ಕಾರ್ಯಕರ್ತರೊಂದಿಗೆ ದೇವಸ್ಥಾನಕ್ಕೆ ಬಂದು ಪ್ರಾರ್ಥನೆ ಸಲ್ಲಿಸಿದರು.

ಬಳಿಕ ಕುಂಬ್ಲಾಡಿ ಶ್ರೀ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲೂ ಪ್ರಾರ್ಥನೆ ಸಲ್ಲಿಸಿದರು. ಮಾ. 26 ರಂದು ಶೋಭಾ ಕರಂದ್ಲಾಜೆ ಉಡುಪಿ ಜಿಲ್ಲಾಧಿಕಾರಿಯವರ ಕಚೇರಿಗೆ ಸಾವಿರಾರು ಬಿಜೆಪಿ ಕಾರ್ಯಕರ್ತರೊಂದಿಗೆ ಮೆರವಣಿಗೆಯ ಮೂಲಕ ಸಾಗಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ. ಹಾಗಾಗಿ ಈ ಬಾರಿ ಸಂಸದೆಗೆ ಟಿಕೆಟ್ ನಿರಾಕರಿಸಲಾಗಿದೆ ಎಂದು ಎಂದಿದ್ದ ಉಹಾಪೋಹಗಳಿಗೆ ತೆರೆ ಬಿದ್ದಂತಾಗಿದೆ.

Mangaluru File name_Shobha Karandlaje Reporter_Vishwanath Panjimogaru ಚುನಾವಣಾ ನಾಮಪತ್ರ ಸಲ್ಲಿಕೆ ಹಿನ್ನೆಲೆ: ಶೋಭಾ ಹುಟ್ಟೂರಿನ ದೇವಳಕ್ಕೆ ಭೇಟಿ ಪುತ್ತೂರು: ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಇಂದು ತನ್ನ ಹುಟ್ಟೂರಿನ ದೇವಸ್ಥಾನ ಶ್ರೀ ಕಪಿಲೇಶ್ವರದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಪ್ರತಿ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸುವ ಮೊದಲು ಶೋಭಾ ತನ್ನ ಹುಟ್ಟೂರಾದ ಪುತ್ತೂರು ತಾಲೂಕಿನ ಚಾರ್ವಾಕ ಗ್ರಾಮದ ಶ್ರೀ ಕಪಿಲೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ನಂತರವೇ ನಾಮಪತ್ರ ಸಲ್ಲಿಸುವುದು ಹಿಂದಿನಿಂದಲೂ ಪಾಲಿಸಿಕೊಂಡು ಬಂದ ವಾಡಿಕೆ. ಈ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 7 ಗಂಟೆಯ ಪೂಜಾ ಸಮಯಕ್ಕೆ ಶೋಭಾ ಕರಂದ್ಲಾಜೆ ತನ್ನ ತಾಯಿ ಪೂವಕ್ಕ, ಸಹೋದರ ಲಕ್ಷ್ಮಣ ಕರಂದ್ಲಾಜೆ ಸಹಿತ ಹಲವು ಬಿಜೆಪಿ ಕಾರ್ಯಕರ್ತರೊಂದಿಗೆ ದೇವಸ್ಥಾನಕ್ಕೆ ಬಂದು ಪ್ರಾರ್ಥನೆ ಸಲ್ಲಿಸಿದರು. ಬಳಿಕ ಕುಂಬ್ಲಾಡಿ ಶ್ರೀ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲೂ ಪ್ರಾರ್ಥನೆ ಸಲ್ಲಿಸಿದರು. ಮಾ.26ರಂದು ಶೋಭಾ ಕರಂದ್ಲಾಜೆ ಉಡುಪಿ ಜಿಲ್ಲಾಧಿಕಾರಿಯವರ ಕಚೇರಿಗೆ ಸಾವಿರಾರು ಬಿಜೆಪಿ ಕಾರ್ಯಕರ್ತರೊಂದಿಗೆ ಮೆರವಣಿಗೆಯ ಮೂಲಕ ಸಾಗಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ. ಹಾಗಾಗಿ ಈ ಬಾರಿ ಸಂಸದೆಗೆ ಟಿಕೆಟ್ ನಿರಾಕರಿಸಲಾಗಿದೆ ಎಂದು ಎದ್ದಿದ್ದ ಉಹಾಪೋಹಗಳಿಗೆ ತೆರೆ ಬಿದ್ದಂತಾಗಿದೆ. Reporter_Vishwanath Panjimogaru
ETV Bharat Logo

Copyright © 2024 Ushodaya Enterprises Pvt. Ltd., All Rights Reserved.