ETV Bharat / city

ಮಂಗಳೂರು ಸೆಂಟ್ರಲ್ ಮಾರ್ಕೆಟ್ ಸ್ತಬ್ಧ... ಚಿಲ್ಲರೆ ಮಾರಾಟಗಾರರಿಗೆ ಮಾತ್ರ ಪ್ರವೇಶಕ್ಕೆ ಅನುವು - ಮಂಗಳೂರು ಸೆಂಟ್ರಲ್ ಮಾರ್ಕೆಟ್ ಸ್ತಬ್ಧ

ಮಂಗಳೂರಿನ ಹೃದಯ ಭಾಗದಲ್ಲಿರುವ ಹಂಪನಕಟ್ಟೆಯ ಸೆಂಟ್ರಲ್ ಮಾರುಕಟ್ಟೆ ಇಂದು ಜನರಿಲ್ಲದೆ ಬಿಕೋ ಎನ್ನುತ್ತಿತ್ತು. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ಹಿನ್ನೆಲೆಯಲ್ಲಿ ಇಂದಿನಿಂದ ಮುಂದಿನ ಆದೇಶದವರೆಗೆ ಮಂಗಳೂರಿನ ಸೆಂಟ್ರಲ್ ಮಾರುಕಟ್ಟೆಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಸಾರ್ವಜನಿಕರಿಗೆ ಮಾರುಕಟ್ಟೆ ಪ್ರವೇಶ ಮಾಡಲು ಅವಕಾಶ ಇಲ್ಲದಿರೋದರಿಂದ ಅವರ ಪರಿಸರದಲ್ಲಿನ ಅಂಗಡಿಗಳಲ್ಲಿ ಮುಂಜಾನೆ 6ರಿಂದ 12 ರವರೆಗೆ ಅಗತ್ಯದ ಸಾಮಗ್ರಿಗಳನ್ನು ಖರೀದಿ ಮಾಡುವಂತೆ ಅವಕಾಶ ಕಲ್ಪಿಸಲಾಗಿದೆ.

Mangalore central market
ಮಂಗಳೂರು ಸೆಂಟ್ರಲ್ ಮಾರ್ಕೆಟ್
author img

By

Published : Mar 26, 2020, 12:58 PM IST

ಮಂಗಳೂರು: ಸದಾ ಜನಜಂಗುಳಿಯಿಂದ ಗಿಜಿಗಿಡುತ್ತಿದ್ದ ಮಂಗಳೂರಿನ ಹಂಪನಕಟ್ಟೆಯಲ್ಲಿರುವ ಸೆಂಟ್ರಲ್ ಮಾರುಕಟ್ಟೆ ಇಂದು ಜನರಿಲ್ಲದೆ ಬಿಕೋ ಎನ್ನುತ್ತಿತ್ತು. ಎಲ್ಲ ಅಂಗಡಿಗಳು ಮುಚ್ಚಿದ ಸ್ಥಿತಿಯಲ್ಲಿದ್ದು, ತರಕಾರಿ, ಹಣ್ಣು - ಹಂಪಲುಗಳ ಮಾರುಕಟ್ಟೆಯಲ್ಲಿಯೂ ಕೆಲವೇ ಕೆಲವು ಅಂಗಡಿಗಳು ಮಾತ್ರ ತೆರೆದಿವೆ. ಮಾರುಕಟ್ಟೆಯಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ಹಿನ್ನೆಲೆಯಲ್ಲಿ ಇಂದಿನಿಂದ ಮುಂದಿನ ಆದೇಶದವರೆಗೆ ಮಂಗಳೂರಿನ ಸೆಂಟ್ರಲ್ ಮಾರುಕಟ್ಟೆಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಕೇವಲ ಚಿಲ್ಲರೆ ವ್ಯಾಪಾರಿಗಳಿಗೆ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿತ್ತು. ಕೆಲವೇ ಕೆಲವು ಅಂಗಡಿಗಳು ಕಾರ್ಯಾಚರಣೆ ಮಾಡುತ್ತಿದ್ದರೂ, ಖರೀದಿದಾರರ ಬೇಡಿಕೆಗೆ ಅನುಗುಣವಾಗಿ ತರಕಾರಿ, ಹಣ್ಣು-ಹಂಪಲುಗಳು ದೊರಕುತ್ತಿರಲಿಲ್ಲ.

ಮಂಗಳೂರು ಸೆಂಟ್ರಲ್ ಮಾರ್ಕೆಟ್

ಅಲ್ಲದೆ ಚಿಲ್ಲರೆ ವ್ಯಾಪಾರಸ್ಥರಿಗೂ ಮುಂಜಾನೆ 6 ಗಂಟೆಯಿಂದ ಬೆಳಗ್ಗೆ 10 ಗಂಟೆಯವರೆಗೆ ಮಾತ್ರ ಮಾರುಕಟ್ಟೆ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಆ ಬಳಿಕ ಯಾವುದೇ ಕಾರಣಕ್ಕೂ ಮಾರುಕಟ್ಟೆ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಬ್ಯಾರಿಕೇಡ್ ಅಳವಡಿಸಿ ಯಾವುದೇ ಇತರ ವಾಹನಗಳು ಮಾರುಕಟ್ಟೆ ಪ್ರವೇಶ ಮಾಡದಂತೆ ತಡೆಯುತ್ತಿದ್ದಾರೆ.

ಸಾರ್ವಜನಿಕರಿಗೆ ಮಾರುಕಟ್ಟೆ ಪ್ರವೇಶ ಮಾಡಲು ಅವಕಾಶ ಇಲ್ಲದಿರೋದರಿಂದ ಅವರ ಪರಿಸರದಲ್ಲಿನ ಅಂಗಡಿಗಳಲ್ಲಿ ಮುಂಜಾನೆ 6ರಿಂದ 12 ರವರೆಗೆ ಅಗತ್ಯದ ಸಾಮಗ್ರಿಗಳನ್ನು ಖರೀದಿ ಮಾಡುವಂತೆ ಅವಕಾಶ ಕಲ್ಪಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.