ETV Bharat / city

ಆರ್​ಟಿಪಿಸಿಆರ್ ವರದಿ ಇದ್ದರೆ ಮಾತ್ರ ರಾಜ್ಯಕ್ಕೆ ಪ್ರವೇಶ: ತಲಪಾಡಿಯಲ್ಲಿ ಕೇರಳಿಗರ ರಂಪಾಟ - Opening of Health Officers' Inspection Center

ಕೇರಳದಲ್ಲಿ ಕೋವಿಡ್​-19 ಸೋಂಕಿತರ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ತಲಪಾಡಿಯಲ್ಲಿ ಆರೋಗ್ಯ ಅಧಿಕಾರಿಗಳ ಪರಿಶೀಲನಾ ಕೇಂದ್ರ ಇಂದಿನಿಂದ ಮತ್ತೆ ಕಾರ್ಯಾರಂಭಗೊಂಡಿದ್ದು, ಆರ್​ಟಿಪಿಸಿಆರ್ ವರದಿ ಇದ್ದವರಿಗೆ ಮಾತ್ರ ರಾಜ್ಯಕ್ಕೆ ಪ್ರವೇಶ ನೀಡಲಾಗುತ್ತಿದೆ.

ತಲಪಾಡಿಯಲ್ಲಿ ಆರೋಗ್ಯ ಅಧಿಕಾರಿಗಳ ಪರಿಶೀಲನಾ ಕೇಂದ್ರ ಕಾರ್ಯರಂಭ

author img

By

Published : Feb 22, 2021, 1:31 PM IST

ಉಳ್ಳಾಲ: ಕೇರಳದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಗಡಿಭಾಗ ತಲಪಾಡಿಯಲ್ಲಿ ಆರೋಗ್ಯ ಅಧಿಕಾರಿಗಳ ಪರಿಶೀಲನಾ ಕೇಂದ್ರ ಇಂದಿನಿಂದ ಮತ್ತೆ ಆರಂಭಗೊಂಡಿದ್ದು, ಆರ್​ಟಿಪಿಸಿಆರ್ ವರದಿ ಇದ್ದರೆ ಮಾತ್ರ ನಾಳೆಯಿಂದ ಕರ್ನಾಟಕ ಪ್ರವೇಶಕ್ಕೆ ಅವಕಾಶ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಲಪಾಡಿಯಲ್ಲಿ ಆರೋಗ್ಯ ಅಧಿಕಾರಿಗಳ ಪರಿಶೀಲನಾ ಕೇಂದ್ರ ಕಾರ್ಯರಂಭ

ಜಿಲ್ಲಾ ಆರೋಗ್ಯ ಅಧಿಕಾರಿ ರಾಮಕೃಷ್ಣ ಬಾಯರಿ, ತಹಶೀಲ್ದಾರ್ ಗುರುಪ್ರಸಾದ್ ನೇತೃತ್ವದ ತಂಡ ತಲಪಾಡಿ ಗಡಿಭಾಗದಲ್ಲಿ ನಿಂತು ಕೇರಳದಿಂದ ಬರುವವರನ್ನು ತಡೆದು ಟೆಸ್ಟ್ ವರದಿ ನೀಡುವಂತೆ ಸೂಚಿಸಿದರು. ನಾಳೆಯಿಂದ ಕಡ್ಡಾಯವಾಗಿ ಆರ್​ಟಿಪಿಸಿಆರ್ ವರದಿ ತರುವಂತೆ ಸೂಚಿಸಿದರು. ವರದಿ ಇಲ್ಲದಿದ್ದಲ್ಲಿ ಮಂಗಳೂರಿಗೆ ಪ್ರವೇಶವಿರುವುದಿಲ್ಲ ಎಂದು ಎಚ್ಚರಿಸಿದರು.

ನ್ಯಾಯಾಲಯದ ಮೆಟ್ಟಿಲೇರುತ್ತೇವೆ:

ಕೇಂದ್ರ ಸರ್ಕಾರ ಜನವರಿ ತಿಂಗಳಲ್ಲಿ ಜಾರಿಗೊಳಿಸಿರುವ ಆದೇಶದಲ್ಲಿ ಅಂತಾರಾಜ್ಯ ಗಡಿಗಳಲ್ಲಿ ಯಾವುದೇ ವಾಹನಗಳಿಗೆ ತಡೆಯೊಡ್ಡಬಾರದು ಎಂದು ಸ್ಪಷ್ಟವಾಗಿ ತಿಳಿಸಿದೆ. ಆದರೆ ಕೇಂದ್ರದ ಆದೇಶವನ್ನು ರಾಜ್ಯ ಸರ್ಕಾರ ಪಾಲಿಸದಿರುವುದು ದುರದೃಷ್ಟಕರ. ಈ ಆದೇಶವನ್ನು ಮುಂದಿಟ್ಟುಕೊಂಡು ನ್ಯಾಯಾಲಯದ ಮೆಟ್ಟಿಲೇರುತ್ತೇವೆ. ಭಾನುವಾರ ಉತ್ತರಪ್ರದೇಶದ ಮುಖ್ಯಮಂತ್ರಿ ಬರುವ ಸಂದರ್ಭದಲ್ಲಿ ಯಾವುದೇ ಕಾನೂನುಗಳನ್ನು ಜಾರಿ ಮಾಡಿಸಿಲ್ಲ, ಇದೀಗ ಏಕಾಏಕಿ ಜನರ ಮೇಲೆ ದಬ್ಬಾಳಿಕೆ ನಡೆಸುತ್ತಿರುವುದು ರಾಜಕೀಯ ಷಡ್ಯಂತ್ರ ಎಂದು ಕಾಸರಗೋಡು ಜಿ.ಪಂ. ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಹರ್ಷಾದ್ ವರ್ಕಾಡಿ ಆರೋಪಿಸಿದರು.

ಕೇರಳದಿಂದ ಬರುವ ವಾಹನಗಳಿಗೆ ಅವಕಾಶ ಮಾಡಿಕೊಡದ ಹಿನ್ನೆಲೆಯಲ್ಲಿ ಮಂಗಳೂರಿನಿಂದ ಕೇರಳಕ್ಕೆ ತೆರಳುವ ವಾಹನಗಳನ್ನು ಗಡಿನಾಡು ಪ್ರದೇಶದ ಮಂದಿ ರಾಷ್ಟ್ರೀಯ ಹೆದ್ದಾರಿಯಲ್ಲಿ ತಡೆದು ಕೆಲ ಕಾಲ ಕೇರಳಿಗರು ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ದ.ಕ ಜಿಲ್ಲಾಧಿಕಾರಿ ವಿರುದ್ಧ ಘೋಷಣೆಗಳನ್ನು ಕೂಗಿ ರಸ್ತೆ ಮೇಲೆ ಮಲಗಿ ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ಪ್ರತಿಭಟನಾ ಸ್ಥಳಕ್ಕೆ ಮಂಜೇಶ್ವರ ಸಿ.ಐ ಅರುಣ್ ದಾಸ್ ಭೇಟಿ ನೀಡಿ, ಕಾಸರಗೋಡು ಜಿಲ್ಲಾಡಳಿತದ ಜತೆಗೆ ಮಾತುಕತೆ ನಡೆಸುವ ವಿಶ್ವಾಸವನ್ನು ವ್ಯಕ್ತಪಡಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.