ETV Bharat / city

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರೂಪದ ಬೃಹತ್ ಶಿಲಾಯುಗದ ಸಮಾಧಿ ಪತ್ತೆ! - ಪುರಾತತ್ವಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಟಿ.ಮುರುಗೇಶಿ

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಶಿಲಾಯುಗದ ಸಮಾಧಿ ಪತ್ತೆಯಾಗಿದ್ದು, ಗುಹೆ ರೀತಿಯಲ್ಲಿರುವ ಸಮಾಧಿ ಮಧ್ಯಭಾಗದಲ್ಲಿ ಅಗ್ನಿಕುಂಡ ಹೋಲುವ ಒಂದು ಗುಂಡಿ ಕಂಡು ಬಂದಿದ್ದು, ಸಮಾಧಿಯ ವಿಶೇಷ ಲಕ್ಷಣವಾಗಿದೆ.

Paleolithic age grave found in dakshina kannada
ಕಡಬ ತಾಲೂಕಿನಲ್ಲಿ ಅಪರೂಪದ ಬೃಹತ್ ಶಿಲಾಯುಗದ ಸಮಾಧಿ ಪತ್ತೆ!
author img

By

Published : Apr 26, 2022, 1:41 PM IST

ದಕ್ಷಿಣ ಕನ್ನಡ: ಅಪರೂಪದ ಗುಹಾ ಸಮಾಧಿಯೊಂದು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ, ರಾಮಕುಂಜ ಗ್ರಾಮದ ಆತೂರು-ಕುಂಡಾಜೆಯ ಸರ್ಕಾರಿ ಗೇರುಬೀಜದ ತೋಟದಲ್ಲಿ ಕಂಡು ಬಂದಿದೆ ಎಂದು ಶಿರ್ವದ ಮುಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜಿನ ಇತಿಹಾಸ ಮತ್ತು ಪುರಾತತ್ವಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಟಿ.ಮುರುಗೇಶಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಕಡಬದಲ್ಲಿ ಕಂಡು ಬಂದ ಈ ಸಮಾಧಿ ಒಂದು ಅಪರೂಪದ ಹೊಸ ಮಾದರಿಯಾಗಿದೆ ಎನ್ನಲಾಗಿದೆ. ಗುಹೆಯ ಮಧ್ಯಭಾಗದಲ್ಲಿ ಅಗ್ನಿಕುಂಡ ಹೋಲುವ ಒಂದು ಗುಂಡಿ ಕಂಡು ಬಂದಿದ್ದು, ಇದೂ ಸಹ ಒಂದು ವಿಶೇಷ ಅಂಶವಾಗಿದೆ.

ಸಮಾಧಿಯನ್ನು ಪೂರ್ವೋತ್ತರ ದಿಕ್ಕಿಗೆ ಅಭಿಮುಖವಾಗಿ ರಚಿಸಲಾಗಿದೆ. ಗುಹೆಯ ಒಳಭಾಗದಲ್ಲಿ ಅತ್ಯಲ್ಪ ಪ್ರಮಾಣದ ಕೆಂಪು, ಕಪ್ಪು ಬಣ್ಣದ ಮಡಕೆಯ ಚಿಕ್ಕ, ಚಿಕ್ಕ ಚೂರುಗಳು ಕಂಡು ಬಂದಿವೆ. ಬಹುಶಃ ಸಮಾಧಿಯ ಅವಶೇಷಗಳನ್ನು ನಿಧಿಗಳ್ಳರು ದೋಚಿರುವಂತೆ ಕಂಡು ಬರುತ್ತದೆ. ಗುಹಾ ಸಮಾಧಿಗಳು, ಶಿಲಾಯುಗ ಕಾಲದಲ್ಲಿ ರಚಿಸಲಾದ ಸಮಾಧಿಗಳಾಗಿದ್ದು, ಸಮಾಧಿಯ ಮಧ್ಯಭಾಗದಲ್ಲಿ ಸುಮಾರು ಎರಡರಿಂದ ಮೂರು ಅಡಿ ವ್ಯಾಸದ ರಂಧ್ರವನ್ನು ಸುಮಾರು ಒಂದು ಮೀಟರ್ ಆಳದವರೆಗೆ ಸಿಲಿಂಡರ್ ಆಕಾರದಲ್ಲಿ ಕೆಂಪು ಮುರಕಲ್ಲಿನ ಭೂಪಾತಳಿಯಲ್ಲಿ ಕೊರೆಯಲಾಗಿದೆ. ಇದರ ಕೆಳಭಾಗದಲ್ಲಿ ಅರ್ಧಗೋಳಾಕೃತಿಯ ಗುಹೆಯನ್ನು ಅಗತ್ಯವಾದ ಆಳ ಹಾಗೂ ಸುತ್ತಳತೆಯೊಂದಿಗೆ ಅಗೆದು ರಚಿಸಲಾಗಿದ್ದು, ಇದು ಬಹುತೇಕ ಬೌದ್ಧ ಧರ್ಮದ ಸ್ಥೂಪಗಳ ರಚನೆಯನ್ನು ಹೋಲುತ್ತದೆ.

Paleolithic age grave found in dakshina kannada
ಬೃಹತ್ ಶಿಲಾಯುಗದ ಸಮಾಧಿ

ಕರ್ನಾಟಕದ ಕರಾವಳಿಯಲ್ಲಿ ಇಂತಹ ರಚನೆಗಳು ಸಾಮಾನ್ಯವಾಗಿ ಕಂಡು ಬರುತ್ತವೆ. ಕೇರಳದಲ್ಲಿ, ಗುಹಾ ಸಮಾಧಿಗಳ ಪಾರ್ಶ್ವದಲ್ಲಿ ಒಂದು ಪ್ರವೇಶದ್ವಾರ ಇರುತ್ತದೆ. ಈ ಪ್ರವೇಶದ್ವಾರವನ್ನು ಆಯತಾಕಾರದಲ್ಲಿ ಬಾಗಿಲ ರೀತಿಯಲ್ಲಿ ರಚಿಸಲಾಗಿರುತ್ತದೆ. ಆದರೆ, ಎರಡೂ ಕಡೆ ಸಮಾಧಿಯ ಮಧ್ಯಭಾಗದಲ್ಲಿ ಎರಡು ಅಥವಾ ಮೂರು ಅಡಿಯ ವ್ಯಾಸದ ರಂಧ್ರ ಸಾಮಾನ್ಯವಾಗಿ ಕಂಡು ಬರುತ್ತದೆ.

ಅಂದಿನ ಕಾಲದಲ್ಲಿ ಸಾಮಾನ್ಯವಾಗಿ, ಬೃಹತ್ ಶಿಲಾಯುಗದ ಸಮಾಧಿಗಳ ಇರುವನ್ನು ಗುರುತಿಸಲು, ಸಮಾಧಿಯ ಮೇಲೆ ಅಥವಾ ಸಮಾಧಿಯ ಸಮೀಪದಲ್ಲಿ, ದೊಡ್ಡ, ದೊಡ್ಡ ಕಲ್ಲಿನ ಕಂಭಗಳನ್ನು ನಿಲ್ಲಿಸುತ್ತಿದ್ದರು. ಇಲ್ಲವೇ, ಸಮಾಧಿಯ ಮೇಲ್ಭಾಗದಲ್ಲಿ ದೊಡ್ಡ, ದೊಡ್ಡ ಕಾಡು ಕಲ್ಲುಗಳ ಶಿಲಾ ವರ್ತುಲವನ್ನು ರಚಿಸುತ್ತಿದ್ದರು. ಕೆಲವು ಕಡೆ ಸಮಾಧಿಯ ಮೇಲೆ ಕಲ್ಲುಗಳ ರಾಶಿಯನ್ನು ಹೇರಿ, ಕಲ್ಗುಪ್ಪೆಗಳನ್ನು ನಿರ್ಮಿಸಿ ಸಮಾಧಿಗಳ ಇರುವನ್ನು ತಿಳಿಸಲಾಗುತ್ತಿತ್ತು.

ಆದರೆ, ಇಲ್ಲಿ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ಒಂದು ದೊಡ್ಡ ವೃತ್ತವನ್ನು ಕೆಂಪು ಮುರಕಲ್ಲಿನ ಮೇಲೆ ರಚಿಸಿ, ಸಮಾಧಿಯನ್ನು ಗುರುತಿಸಿರುವುದು ಕಡಬದ ಗುಹಾ ಸಮಾಧಿಯ ವಿಶೇಷತೆಯಾಗಿದೆ. ಆ ವೃತ್ತದ ಕೆಳಭಾಗದಲ್ಲಿ ಆ ವೃತ್ತದ ವಿಸ್ತಾರಕ್ಕೆ ಅನುಗುಣವಾಗಿ ಗುಹೆಯನ್ನು ರಚಿಸಲಾಗಿದೆ. ಆ ವೃತ್ತದ ವಿಸ್ತಾರ ಸುಮಾರು ಏಳು ಅಡಿಯಾಗಿದ್ದು, ಕೆಳಗಿನ ಗುಹೆಯೂ ಏಳು ಅಡಿ ವಿಸ್ತಾರವಾಗಿದೆ. ಕೇರಳ ಮತ್ತು ಕರ್ನಾಟಕದ ಗುಹಾ ಸಮಾಧಿಗಳಲ್ಲಿ ಸಾಮಾನ್ಯವಾಗಿ ಕಂಡು ಬರುವ ರಂಧ್ರ ಕೂಡ ಇಲ್ಲಿ ಕಂಡುಬಂದ ಗುಹಾ ಸಮಾಧಿಯಲ್ಲಿಲ್ಲ ಎನ್ನಲಾಗಿದೆ.

ಇದನ್ನೂ ಓದಿ: ಅಸ್ಟಿಸೆಂಟ್ ಪ್ರೊಫೆಸರ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ತನಿಖೆ ಚುರುಕುಗೊಳಿಸಿದ ಖಾಕಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.