ETV Bharat / city

ಗೋಡೆಯಲ್ಲಿ 'ಬಿರುಕು'..ಛಾವಣಿಯಲ್ಲಿ 'ಹಂಚು' ಇಲ್ಲ..ಪುತ್ತೂರಿನ ಈ ಶಾಲೆಗೆ ಹೋಗೊದೇ ಡೇಂಜರ್​! - Dakshina kannada People demand for Bhakta Kodi govt school repair

53 ವರ್ಷಗಳ ಇತಿಹಾಸ ಹೊಂದಿರುವ ಪುತ್ತೂರಿನ ಭಕ್ತಕೋಡಿ ಸರ್ಕಾರಿ ಶಾಲೆ ಹಿರಿಯ ಪ್ರಾಥಮಿಕ ಶಾಲೆ ಇದೀಗ ಕುಸಿದು ಬೀಳುವ ಹಂತದಲ್ಲಿದೆ.

Bhakta Kodi Govt School in Dakshina Kannada

author img

By

Published : Jan 8, 2022, 10:27 AM IST

Updated : Jan 9, 2022, 10:59 AM IST

ದಕ್ಷಿಣ ಕನ್ನಡ: ಜಿಲ್ಲೆಯ ಪುತ್ತೂರಿನ ಭಕ್ತಕೋಡಿ ಸರ್ಕಾರಿ ಶಾಲೆ ಅಪಾಯಕ್ಕೆ ಆಹ್ವಾನ ನೀಡುವಂತಿದೆ. ಇಂದೋ - ನಾಳೆಯೋ ಧರೆಗುರುಳಲು ಸಿದ್ಧವಾಗಿ ನಿಂತ ಕಟ್ಟಡದಲ್ಲೇ ಮಕ್ಕಳು ಪಾಠ ಕೇಳಬೇಕಾದ ಸ್ಥಿತಿಯಿದೆ. ಆದರೆ, ಶಾಲೆಯ ಪರಿಸ್ಥಿತಿ ಬಗ್ಗೆ ಶಿಕ್ಷಣ ಅಧಿಕಾರಿಗಳಾಗಲಿ ಅಥವಾ ಜನಪ್ರತಿನಿಧಿಗಳಾಗಲಿ ಗಮನಹರಿಸುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ.

ಅಪಾಯಕ್ಕೆ ಆಹ್ವಾನ ನೀಡುವಂತಿರುವ ಪುತ್ತೂರಿನ ಭಕ್ತಕೋಡಿ ಸರ್ಕಾರಿ ಶಾಲೆ: ದುರಸ್ತಿಗೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗದಲ್ಲಿರುವ ಈ ಶಾಲೆಗೆ ಬಡ ಕುಟುಂಬಗಳ ಮಕ್ಕಳು ವಿದ್ಯಾಭ್ಯಾಸಕ್ಕಾಗಿ ಬರುತ್ತಿದ್ದು, ಜೀವ ಕೈಯಲ್ಲಿ ಹಿಡಿದು ತರಗತಿ ಕೇಳಬೇಕಾದ ಸ್ಥಿತಿಯಲ್ಲಿದ್ದಾರೆ. ಹೆಚ್ಚಿನ ಸಂಖ್ಯೆಯ ಮಕ್ಕಳನ್ನು ಹೊಂದಿರುವ ಈ ಶಾಲೆಯ ದುಃಸ್ಥಿತಿಯನ್ನು ಶಿಕ್ಷಣ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಗಮನಕ್ಕೂ ತಂದಿದ್ದರೂ, ಯಾರೊಬ್ಬರೂ ಈ ಶಾಲೆಯತ್ತ ಮುಖವೆತ್ತಿ ನೋಡಿಲ್ಲ ಎನ್ನಲಾಗ್ತಿದೆ.

ಗುಣಮಟ್ಟದ ಶಿಕ್ಷಣ ನೀಡುವ ಸರ್ಕಾರಿ ಶಾಲೆ ಎಂಬ ಹೆಗ್ಗಳಿಕೆ:

53 ವರ್ಷಗಳ ಇತಿಹಾಸ ಹೊಂದಿರುವ ಪುತ್ತೂರಿನ ಭಕ್ತಕೋಡಿ ಸರ್ಕಾರಿ ಶಾಲೆ ಹಿರಿಯ ಪ್ರಾಥಮಿಕ ಶಾಲೆ ಇದೀಗ ಕುಸಿದು ಬೀಳುವ ಹಂತದಲ್ಲಿದೆ. ಗ್ರಾಮೀಣ ಭಾಗದಲ್ಲಿರುವ ಈ ಶಾಲೆಯಲ್ಲಿ ವರ್ಷದಿಂದ ವರ್ಷಕ್ಕೆ ಮಕ್ಕಳ ಸಂಖ್ಯೆಯೂ ಹೆಚ್ಚಾಗುತ್ತಿದ್ದು, ಗುಣಮಟ್ಟದ ಶಿಕ್ಷಣ ನೀಡುವ ಸರ್ಕಾರಿ ಶಾಲೆ ಎಂಬ ಹೆಸರು ಇದಕ್ಕಿದೆ. ಆದರೆ, ಈ ಶಾಲೆಯ ಕಟ್ಟಡ ಮಾತ್ರ ಕುಸಿದು ಬೀಳುವ ಸ್ಥಿತಿಯಲ್ಲಿದೆ.

ಶಾಲೆಯ ಛಾವಣಿಗೆ ಹಾಕಿದ ಮರದ ರೀಪುಗಳು ಮುರಿದು ಬೀಳುವ ಸಾಧ್ಯತೆಯಿದೆ. ಕಟ್ಟಡದ ನಾಲ್ಕು ಗೋಡಗಳ ನಡುವೆ ಭಾರಿ ಗಾತ್ರದ ಬಿರುಕು ಕಾಣಿಸಿಕೊಂಡಿದ್ದು, ನಾಲ್ಕು ಗೋಡೆಗಳಿಗೂ ಪರಸ್ಪರ ಸಂಬಂಧವೇ ಇಲ್ಲದಂತಾಗಿದೆ. ಈ ಕಟ್ಟಡದಲ್ಲಿ ನಾಲ್ಕು ತರಗತಿಗಳು ನಿತ್ಯ ನಡೆಯುತ್ತಿದ್ದು, ಒಟ್ಟು 130 ಮಕ್ಕಳು ಇಲ್ಲಿ ಕಲಿಯುತ್ತಿದ್ದಾರೆ.

ಮಳೆಗಾಲದಲ್ಲಿ ಈ ಶಾಲೆಯ ಎಲ್ಲ ತರಗತಿಯಲ್ಲಿ ಮಳೆ ನೀರು ಸೋರುವ ಕಾರಣ ತರಗತಿಯಲ್ಲಿ ಮಕ್ಕಳ ಜೊತೆಗೆ ಛಾವಣಿಯಿಂದ ಬೀಳುವ ನೀರು ಸಂಗ್ರಹಿಸಲು ದೊಡ್ಡ ಗಾತ್ರದ ಪಾತ್ರೆಗಳನ್ನು ಇಡಬೇಕಾಗುತ್ತದೆ ಎನ್ನುತ್ತಾರೆ ಶಾಲೆಯ ಶಿಕ್ಷಕರು.

ಶಾಲೆಯ ದುಃಸ್ಥಿತಿಯ ಬಗ್ಗೆ ಸಾರ್ವಜನಿಕರು ಈಗಾಗಲೇ ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಆ ಮೂಲಕ ಶಾಸಕರ ಗಮನಕ್ಕೂ ತಂದಿದ್ದಾರೆ. ಕಳೆದ 4 ವರ್ಷಗಳಿಂದ ಈ ಶಾಲೆಯ ದುಃಸ್ಥಿತಿ ಮತ್ತಷ್ಟು ಹೆಚ್ಚಾಗಿದ್ದು, ಪುಟ್ಟ ಮಕ್ಕಳನ್ನು ಸೇರಿಸಿ ತರಗತಿ ಮಾಡುವುದಾದರೂ ಹೇಗೆ ಎಂದು ಶಾಲೆಯ ಸಿಬ್ಬಂದಿ ಹಾಗೂ ಸಾರ್ವಜನಿಕರು ಪ್ರಶ್ನಿಸಿದ್ದಾರೆ. ದುಃಸ್ಥಿತಿಯಲ್ಲಿರುವ ಈ ಕಟ್ಟಡದಲ್ಲಿ ಅನಾಹುತ ಸಂಭವಿಸಿದಲ್ಲಿ ನೂರಾರು ಮಕ್ಕಳಿಗೆ ಸಮಸ್ಯೆಯಾಗುವ ಸಾಧ್ಯತೆಯಿದೆ. ಹೀಗಾಗಿ ಸಂಬಂಧಪಟ್ಟವರು ಕೂಡಲೇ ಈ ಬಗ್ಗೆ ಗಮನ ಹರಿಸಬೇಕಿದೆ.

ಇದನ್ನೂ ಓದಿ: ಕೊರಗಜ್ಜನ ವೇಷ ಹಾಕಿ ವಿಕೃತಿ ಮೆರೆದ ವರ: ಆರೋಪಿಗಳ ವಿರುದ್ಧ ದೂರು ದಾಖಲು

Last Updated : Jan 9, 2022, 10:59 AM IST

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.