ETV Bharat / city

ದಕ್ಷಿಣ ಕನ್ನಡ-ಕಾಸರಗೋಡು ಮಧ್ಯೆ ಸಂಚಾರಕ್ಕೆ ಗ್ರೀನ್ ಸಿಗ್ನಲ್

ಉದ್ಯೋಗಿಗಳು, ವಿದ್ಯಾರ್ಥಿಗಳು, ಆರೋಗ್ಯ ಸೇವಕರು ಮತ್ತು ಸರ್ಕಾರಿ ನೌಕರರಿಗೆ ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಮಧ್ಯೆ ನಿತ್ಯ ಸಂಚಾರಕ್ಕೆ ಗ್ರೀನ್ ಸಿಗ್ನಲ್​ ನೀಡಿ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಆದೇಶ ಹೊರಡಿಸಿದ್ದಾರೆ.

Permission for traffic between Dakshinakanda and Kasaragod
ದಕ್ಷಿಣಕನ್ನಡ,ಕಾಸರಗೋಡು ಮಧ್ಯೆ ಸಂಚಾರಕ್ಕೆ ಗ್ರೀನ್ ಸಿಗ್ನಲ್
author img

By

Published : Jun 3, 2020, 10:17 PM IST

ಮಂಗಳೂರು: ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಮಧ್ಯೆ ನಿತ್ಯ ಸಂಚಾರಕ್ಕೆ ಗ್ರೀನ್ ಸಿಗ್ನಲ್​ ನೀಡಿ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಆದೇಶ ಹೊರಡಿಸಿದ್ದಾರೆ.

Permission for traffic between Dakshinakanda and Kasaragod
ದಕ್ಷಿಣ ಕನ್ನಡ, ಕಾಸರಗೋಡು ಮಧ್ಯೆ ಸಂಚಾರಕ್ಕೆ ಗ್ರೀನ್ ಸಿಗ್ನಲ್

ಜನರ ನಿತ್ಯ ಸಂಚಾರಕ್ಕಾಗಿ ಒಂದಷ್ಟು ನೀತಿ ನಿಯಮಗಳನ್ನು ಜಾರಿಗೊಳಿಸಿ, ಪಾಸ್ ಬಳಸಿ ನಿತ್ಯ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ. ಆದರೆ ಉದ್ಯೋಗಿಗಳು, ವಿದ್ಯಾರ್ಥಿಗಳು, ಆರೋಗ್ಯ ಸೇವಕರು ಮತ್ತು ಸರ್ಕಾರಿ ನೌಕರರಿಗಷ್ಟೇ ಅವಕಾಶ ನೀಡಲಾಗಿದೆ‌. ಈ ಮೂಲಕ ಕಾಸರಗೋಡಿನಲ್ಲಿರುವ ಗಡಿನಾಡ ಕನ್ನಡಿಗರಿಗೆ ಉದ್ಯೋಗ ನಿಮಿತ್ತ ಸಂಚಾರಕ್ಕೆ ಅವಕಾಶ ನೀಡಲಾಗಿದ್ದು, ಉಭಯ ಜಿಲ್ಲೆಗಳ ಮಧ್ಯೆ ಒಪ್ಪಂದದ ಮೇರೆಗೆ ಈ ಅವಕಾಶ ನೀಡಲಾಗಿದೆ.

http://bit.ly/Dkdpermit ವೆಬ್​​ಸೈಟ್​ನಲ್ಲಿ ರಿಜಿಸ್ಟರ್ ಮಾಡಿ ಪಾಸ್ ಪಡೆಯಲು ಸೂಚನೆ ನೀಡಲಾಗಿದೆ‌. ಪಾಸ್​ಗೆ ಅರ್ಜಿ ಸಲ್ಲಿಸಲು ಆಧಾರ್, ಉದ್ಯೋಗ ವಿಳಾಸ ಮಾಹಿತಿ ಸಲ್ಲಿಸಬೇಕು. ಉದ್ಯೋಗ ಹೊರತುಪಡಿಸಿ ಅನ್ಯ ಕಾರ್ಯಕ್ಕೆ ಪಾಸ್ ಬಳಸಿದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ. ತಲಪಾಡಿ ಚೆಕ್ ​ಪೋಸ್ಟ್​ನಲ್ಲಿ ನಿತ್ಯ ಥರ್ಮಲ್ ಸ್ಕ್ರೀನಿಂಗ್​ ಮತ್ತು ಆರೋಗ್ಯ ತಪಾಸಣೆ ಕಡ್ಡಾಯವಾಗಿದ್ದು, ಇ-ಪಾಸ್ ತೋರಿಸಿ ಉಭಯ ಜಿಲ್ಲೆಗಳ ನಡುವೆ ಪ್ರಯಾಣ ಬೆಳೆಸಬಹುದು ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.