ಮಂಗಳೂರು: ನಗರದಲ್ಲಿ 4.80 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ಕಾಲೇಜು ಕಟ್ಟಡ ಶಿಲಾನ್ಯಾಸಕ್ಕೆ ಆಗಮಿಸಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಸಿಎಫ್ಐ ಸಂಘಟನೆಯ ಕಾರ್ಯಕರ್ತರು 'ಗೋ ಬ್ಯಾಕ್' ಘೋಷಣೆ ಕೂಗಿದ್ದು, ಕಾರ್ಯಕ್ರಮಕ್ಕೆ ನುಗ್ಗಲು ಯತ್ನಿಸಿದ್ದಾರೆ. ಮಂಗಳೂರು ನಗರದ ಹಂಪನಕಟ್ಟೆ ಬಳಿಯ ಪದವಿ ಪೂರ್ವ ಕಾಲೇಜು ಕಟ್ಟಡ ಶಿಲಾನ್ಯಾಸಕ್ಕೆ ಸಚಿವ ಬಿ.ಸಿ.ನಾಗೇಶ್ ಆಗಮಿಸಿದ್ದ ವೇಳೆ ಈ ಘಟನೆ ನಡೆದಿದೆ.
ಶಿಲಾನ್ಯಾಸಕ್ಕೆ ಸಚಿವ ಬಿ.ಸಿ.ನಾಗೇಶ್ ಆಗಮಿಸಿದ್ದ ವೇಳೆ ಸಿಎಫ್ಐ ಕಾರ್ಯಕರ್ತರು ಶಿಕ್ಷಣ ಸಚಿವರಿಗೆ ಗೋ ಬ್ಯಾಕ್ ಘೋಷಣೆ ಕೂಗಿ ಕಾರ್ಯಕ್ರಮಕ್ಕೆ ನುಗ್ಗಲು ಯತ್ನಿಸಿದ ವೇಳೆ ರಸ್ತೆಯಲ್ಲೇ ಪೊಲೀಸರು ತಡೆದಿದ್ದಾರೆ. ಸಮವಸ್ತ್ರ ಹಂಚಿಕೆಯಲ್ಲಿ ಸಚಿವರಿಂದ ಗೋಲ್ಮಾಲ್ ನಡೆದಿದೆ ಎಂದು ಆರೋಪಿಸಿ ಸಿಎಫ್ಐ ಕಾರ್ಯಕರ್ತರು ಪ್ರತಿಭಟನೆ ನಡೆಸಲು ಯತ್ನಿಸಿದ್ದಾರೆ. ಈ ವೇಳೆ, ಕೆಲವು ಸಿಎಫ್ಐ ಕಾರ್ಯಕರ್ತರನ್ನು ವಶಕ್ಕೆ ತೆಗೆದುಕೊಂಡ ಪೊಲೀಸರು ಮಂಗಳೂರು ಪುರಭವನದ ಆವರಣದಲ್ಲಿ ಕೂಡಿ ಹಾಕಿದ್ದಾರೆ.
ಇದನ್ನೂ ಓದಿ: ಮಂಗಳೂರು ಪ್ರವಾಸ ಮುಂದೂಡಿ ವಿಮಾನ ನಿಲ್ದಾಣದಿಂದ ವಾಪಸ್ ಆದ ಸಿಎಂ