ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಕೊಯ್ಯೂರು ಗ್ರಾಮದ ನಾಲ್ಕನೇ ತರಗತಿಯ ಬಾಲಕಿಗೆ ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ವ್ಯಕ್ತಿ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.
ಡಿ. 11 ರಂದು ಮಧ್ಯಾಹ್ನ 9 ವರ್ಷ ವಯಸ್ಸಿನ 4ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಬಾಲಕಿ ಮನೆಗೆ ಮಧ್ಯಾಹ್ನ 2 ಗಂಟೆ ಸುಮಾರಿಗೆ ಆರೋಪಿಯು ತೆರಳಿ ನಿರ್ಮಾಣ ಹಂತದಲ್ಲಿರುವ ಮನೆಗೆ ಕರೆದುಕೊಂಡು ಹೋಗಿದ್ದಾನೆ. ತನ್ನ ಮೊಬೈಲ್ನಲ್ಲಿದ್ದ ಅಶ್ಲೀಲ ಚಿತ್ರಗಳನ್ನು ತೋರಿಸಿದಾಗ ಬಾಲಕಿ ಹೆದರಿ ಕಿರುಚಿದ್ದಾಳೆ. ಕಿರುಚಿದರೆ ಕೊಲ್ಲುವುದಾಗಿ ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಿ ಕುಟುಂಬಸ್ಥರು ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಈ ಸಂಬಂಧ ವ್ಯಕ್ತಿ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಬಿಸಿನೀರಿನಿಂದ ಸಾವಿಗೀಡಾದ ಮಗು: ಮುಗಿಲು ಮುಟ್ಟಿದ ಪೋಷಕರ ಆಕ್ರಂದನ