ಉಳ್ಳಾಲ : ಕೊರಗಜ್ಜ ಮತ್ತು ಗುಳಿಗಜ್ಜನ ಕಟ್ಟೆಯ ಕಾಣಿಕೆ ಹುಂಡಿಗೆ ಕಿಡಿಗೇಡಿಗಳು ಕಾಂಡೋಮ್ ಹಾಕಿ ವಿಕೃತಿ ಮೆರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸ್ಥಳಕ್ಕೆ ಪೊಲೀಸ್ ಕಮಿಷನರ್ ಭೇಟಿ ನೀಡಿ ಪರಿಶೀಲಿಸಿದರು.
ಉಳ್ಳಾಲದ ಬಸ್ ನಿಲ್ದಾಣದಲ್ಲಿರುವ ಕೊರಗಜ್ಜ ಮತ್ತು ಗುಳಿಗಜ್ಜನ ಕಟ್ಟೆಯ ಕಾಣಿಕೆ ಹುಂಡಿಗೆ ಕಿಡಿಗೇಡಿಗಳು ಕಾಂಡೋಮ್ ಹಾಕಿದ್ದಲ್ಲದೇ, ಸಿಎಂ ಬಿಎಸ್ವೈ ಮತ್ತು ಅವರ ಪುತ್ರ ವಿಜಯೇಂದ್ರ ಭಾವ ಚಿತ್ರಕ್ಕೆ ಶಿಲುಬೆಯಾಕೃತಿ ಚಿತ್ರ ಬಿಡಿಸಿ, ಬಿಜೆಪಿ ನಾಯಕರ ಚಿತ್ರಗಳನ್ನು ವಿರೂಪಗೊಳಿಸುವ ಜೊತೆಗೆ ಅವಹೇಳನಕಾರಿ ಬರಹ ಬರೆದು ವಿಕೃತಿ ಮೆರೆದಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಕಮಿಷನರ್ ಶಶಿಕುಮಾರ್ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳನ್ನು ಶೀಘ್ರದಲ್ಲೇ ಪತ್ತೆ ಮಾಡುವ ಭರವಸೆ ನೀಡಿದರು. ಈ ವೇಳೆ ಮಾತನಾಡಿದ ಕಮಿಷನರ್, ನಾವು ಧಾರ್ಮಿಕ ನಂಬಿಕೆಯನ್ನು ಘಾಸಿ ಗೊಳಿಸುವಂತ ಕೃತ್ಯವನ್ನು ಖಂಡಿಸುತ್ತೇವೆ.
ಎಲ್ಲಾ ಧಾರ್ಮಿಕ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಸಿದ್ರೆ ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ಸಹಕಾರಿಯಾಗುತ್ತದೆ ಎಂದರು. ಇದೇ ಸಂದರ್ಭದಲ್ಲಿ ಉಳ್ಳಾಲದ ಕೊರಗಜ್ಜ ಸೇವಾ ಸಮಿತಿ ಹಾಗೂ ಭಕ್ತರು ಆರೋಪಿಗಳ ಪತ್ತೆಗೆ ಸಾಮೂಹಿಕ ಪ್ರಾರ್ಥನೆ ನಡೆಸಿದರು.
ಇದನ್ನೂ ಓದಿ: ಉಳ್ಳಾಲ: ಕಾಣಿಕೆ ಹುಂಡಿಯಲ್ಲಿ ಕಾಂಡೋಮ್ ಹಾಕಿದ ದುಷ್ಕರ್ಮಿಗಳು