ETV Bharat / city

ನಕ್ಸಲ್ ಪೀಡಿತ ಭಾಗದ 22 ಮಂದಿ ಸೇರಿ 710 ಜನ ಪೊಲೀಸ್ ತರಬೇತಿ ಸ್ಕ್ರೀನಿಂಗ್ ಟೆಸ್ಟ್ ಗೆ ಹಾಜರು

author img

By

Published : Aug 14, 2021, 6:59 AM IST

ದಕ್ಷಿಣ ಕನ್ನಡ ಜಿಲ್ಲೆಯ ಅಭ್ಯರ್ಥಿಗಳಿಗೆ ಪ್ರೋತ್ಸಾಹ ಮತ್ತು ತರಬೇತಿ ನೀಡುವ ಉದ್ದೇಶದಿಂದ ಮಂಗಳೂರು ನಗರ ಪೊಲೀಸರು ಒಂದು ತಿಂಗಳ ತರಬೇತಿ ಕಾರ್ಯಾಗಾರವನ್ನು ಆಯೋಜಿಸಿದ್ದಾರೆ.

Screening test
ಪೊಲೀಸ್ ತರಬೇತಿ ಕಾರ್ಯಾಗಾರದ ಸ್ಕ್ರೀನಿಂಗ್ ಪರೀಕ್ಷೆ

ಮಂಗಳೂರು: ಪೊಲೀಸ್ ಇಲಾಖೆ ಸೇರ್ಪಡೆಗೆ ಉತ್ತೇಜನ ನೀಡುವ ಉದ್ದೇಶದಿಂದ ಮಂಗಳೂರು ನಗರ ಪೊಲೀಸ್ ಕಮಿಷನರ್ ಹಮ್ಮಿಕೊಂಡಿರುವ ಒಂದು ತಿಂಗಳ ತರಬೇತಿ ಕಾರ್ಯಾಗಾರದ ಸ್ಕ್ರೀನಿಂಗ್ ಪರೀಕ್ಷೆಗೆ ನಕ್ಸಲ್ ಪೀಡಿತ ಭಾಗದ 22 ಮಂದಿ ಸೇರಿದಂತೆ 710 ಅಭ್ಯರ್ಥಿಗಳು ಹಾಜರಾಗಿದ್ದಾರೆ.

ಈ ಸ್ಕ್ರೀನಿಂಗ್ ಪರೀಕ್ಷೆಯನ್ನು ನಗರದ ಹಂಪನಕಟ್ಟೆಯ ಮಂಗಳೂರು ವಿವಿ ಕಾಲೇಜಿನಲ್ಲಿ ಶುಕ್ರವಾರ ಸಂಜೆ ನಡೆಸಲಾಯಿತು. ಈ ವೇಳೆ ಕೊರೊನಾ ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಪರೀಕ್ಷೆ ನಡೆಸಲಾಗಿದ್ದು, ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ನಂತರ ಮಾತನಾಡಿದ ಅವರು, ದ.ಕ.ಜಿಲ್ಲೆಯ ಅಭ್ಯರ್ಥಿಗಳ ನಿರಾಸಕ್ತಿಯನ್ನು ಮನಗಂಡು ಈ ವಿನೂತನ ಪ್ರಯೋಗ ಹಮ್ಮಿಕೊಳ್ಳಲಾಗಿದೆ. ಪೊಲೀಸ್ ಹುದ್ದೆಗೆ ಸೇರ್ಪಡೆಗೊಳ್ಳುವ ಜಿಲ್ಲೆಯ ಅಭ್ಯರ್ಥಿಗಳಿಗೆ ಒಂದು ತಿಂಗಳ ಕಾಲ ಉಚಿತ ತರಬೇತಿ ಕಾರ್ಯಾಗಾರವನ್ನು ನಡೆಸುವ ಭರವಸೆ ನೀಡಿ, ಅರ್ಜಿ‌ ಆಹ್ವಾನಿಸಿದ್ದರು. ಇದೀಗ ನಿರೀಕ್ಷೆಗಿಂತಲೂ ಅಧಿಕ ಮಂದಿ ತರಬೇತಿಗೆ ಹಾಜರಾಗಿದ್ದಾರೆ. ಈ ಪರೀಕ್ಷೆಯಲ್ಲಿ ಟಾಪರ್​ಗಳಾದ 200 ಮಂದಿಯನ್ನು ತರಬೇತಿ ಕಾರ್ಯಾಗಾರಕ್ಕೆ ಆಯ್ಕೆ ಮಾಡಲಾಗುತ್ತದೆ ಎಂದು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.