ETV Bharat / city

ಪ್ರವೀಣ್ ನೆಟ್ಟಾರು ಹತ್ಯೆ: ಆ.16ರವರೆಗೆ ಆರೋಪಿಗಳು ಪೊಲೀಸ್ ಕಸ್ಟಡಿಗೆ - Sulya Court

ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಮೂವರು ಆರೋಪಿಗಳನ್ನು ಗುರುವಾರ ಬಂಧಿಸಲಾಗಿದ್ದು, ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.

Praveen Nettaru murder case
ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳು
author img

By

Published : Aug 12, 2022, 6:36 AM IST

ಸುಳ್ಯ: ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಬಿಜೆಪಿಯ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಬಂಧಿಸಲಾದ ಮೂವರು ಆರೋಪಿಗಳಿಗೆ ಆ.16ರವರೆಗೆ ಪೊಲೀಸ್ ಕಸ್ಟಡಿ ವಿಧಿಸಿ ಸುಳ್ಯ ನ್ಯಾಯಾಲಯವು ಆದೇಶ ನೀಡಿದೆ.

ಪ್ರವೀಣ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಾದ ಸುಳ್ಯ ನಿವಾಸಿ ಶಿಯಾಬುದ್ದೀನ್ (33), ರಿಯಾಜ್ ಅಂಕತಡ್ಕ(27), ಎಲಿಮಲೆ ನಿವಾಸಿ ಬಶೀರ್(29) ಎಂಬವರನ್ನು ಬೆಳ್ಳಾರೆಯ ವಿವಿಧ ಕಡೆಗಳಲ್ಲಿ ಮತ್ತು ಪ್ರವೀಣ್ ಅವರ ಅಕ್ಷಯ ಚಿಕನ್ ಸೆಂಟರ್ ಬಳಿ ಕರೆದುಕೊಂಡು ಬಂದು ಸ್ಥಳ ಮಹಜರು ನಡೆಸಿದ ಬಳಿಕ ಪೊಲೀಸರು ಗುರುವಾರ ಸಂಜೆ ಆರೋಪಿಗಳನ್ನು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದರು.

ಹೆಚ್ಚಿನ ತನಿಖೆಗಾಗಿ ಆರೋಪಿಗಳನ್ನು ತಮ್ಮ ಕಸ್ಟಡಿಗೆ ನೀಡುವಂತೆ ಪೊಲೀಸ್ ಅಧಿಕಾರಿಗಳು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು. ಮನವಿ ಪುರಸ್ಕರಿಸಿದ ಮಾನ್ಯ ನ್ಯಾಯಾಲಯವು ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.

ಪುತ್ತೂರು ಡಿವೈಎಸ್‌ಪಿ ಗಾನಾ ಪಿ ಕುಮಾರ್, ಸುಳ್ಯ ವೃತ್ತ ನಿರೀಕ್ಷಕ ನವೀನ್‌ಚಂದ್ರ ಜೋಗಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ಆರೋಪಿಗಳನ್ನು ನ್ಯಾಯಾಲಯಕ್ಕೆ ಕರೆತರಲಾಗಿತ್ತು.

ಇದನ್ನೂ ಓದಿ: ಪ್ರವೀಣ್ ಹತ್ಯೆ ಪ್ರಕರಣ: ಸ್ಥಳ ಮಹಜರು ಮಾಡಿದ ಸುಳ್ಯ ಪೊಲೀಸರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.