ಉಪ್ಪಿನಂಗಡಿ: ಉಪ್ಪಿನಂಗಡಿಯ ಹಿಂದೂ ವರ್ತಕರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವರದಿಯನ್ನು ಉಪ್ಪಿನಂಗಡಿಯ ಎಲ್ಲ ವರ್ತಕರು ಖಂಡಿಸುತ್ತಿದ್ದು, ಇದರ ಬಗ್ಗೆ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕೆಂದು ವರ್ತಕರ ನಿಯೋಗ ಪುತ್ತೂರು ಡಿವೈಎಸ್ಪಿ ಗಾನಾ ಪಿ.ಕುಮಾರ್ ಮತ್ತು ಉಪ್ಪಿನಂಗಡಿ ಸಬ್ ಇನ್ಸ್ಪೆಕ್ಟರ್ ಕುಮಾರ್ ಕಾಂಬ್ಳೆ ಅವರನ್ನು ಭೇಟಿಯಾಗಿ ದೂರು ನೀಡಿ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಉಪ್ಪಿನಂಗಡಿಯಲ್ಲಿ ಎಲ್ಲ ಸಮಾಜದ ಎಲ್ಲ ಮಂದಿಯೂ ನಮ್ಮಲ್ಲಿ ಗ್ರಾಹಕರಾಗಿದ್ದು, ವ್ಯಾಪಾರಿಗಳು ಸೌಹಾರ್ದತೆಯಿಂದ ಧರ್ಮ ಪರಿಪಾಲನೆಯೊಂದಿಗೆ ವ್ಯವಹಾರ ನಡೆಸಿಕೊಂಡು ಬರುತ್ತಿದ್ದೇವೆ. ನಮ್ಮ ವ್ಯಾಪಾರ ಮಳಿಗೆಯ ಹೆಸರನ್ನು ಬಳಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡಿ ಮತೀಯ ಸಂಘರ್ಷವನ್ನು ಮೂಡಿಸಲೆತ್ನಿಸುವವರನ್ನು ಪತ್ತೆ ಹಚ್ಚುವಂತೆ ಮನವಿ ಮಾಡಲಾಗಿದೆ.
ಇಂದು ಬೆಳಗ್ಗೆಯಿಂದ ಉಪ್ಪಿನಂಗಡಿ ಪೇಟೆಯ 32 ಅಂಗಡಿಗಳ ಹೆಸರುಗಳಿರುವ ಒಕ್ಕಣೆಯ ಬರಹಗಳು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯಾದ್ಯಂತ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಉಪ್ಪಿನಂಗಡಿಯ 32 ವರ್ತಕರು ಪುತ್ತೂರು ಡಿವೈಎಸ್ಪಿ ಗಾನಾ ಪಿ.ಕುಮಾರ್ ಅವರನ್ನು ಭೇಟಿ ಮಾಡಿ ದೂರು ನೀಡಿದ್ದಾರೆ.
ಇದನ್ನೂ ಓದಿ: ಮಂಗಳೂರಿನಲ್ಲಿ ಅಂಬೇಡ್ಕರ್ ಫ್ಲೆಕ್ಸ್ಗೆ ಹಾನಿ: ಇಬ್ಬರ ಬಂಧನ!