ETV Bharat / city

ಮೀನುಗಾರಿಕಾ ಬಂದರಿನಲ್ಲಿ ಸಾರ್ವಜನಿಕರಿಗೆ ಮೀನು ಖರೀದಿಗೆ ಅವಕಾಶವಿಲ್ಲ: ದ.ಕ ಜಿಲ್ಲಾಧಿಕಾರಿ

ಮಂಗಳೂರಿನ ಮೀನುಗಾರಿಕಾ ಬಂದರಿನಲ್ಲಿ ಮೀನು ಖರೀದಿ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಒಂದು ವೇಳೆ ನಿಯಮಗಳ ಉಲ್ಲಂಘನೆ ಮಾಡಿದರೆ ಅಂಥವರ ವಿರುದ್ಧ ದಂಡ ವಸೂಲಿ ಮಾಡುವುದರೊಂದಿಗೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಎಚ್ಚರಿಕೆ ನೀಡಿದ್ದಾರೆ.

Mangalore
ಮೀನುಗಾರಿಕಾ ಬಂದರಿನಲ್ಲಿ ಸಾರ್ವಜನಿಕರಿಗೆ ಮೀನು ಖರೀದಿಗೆ ಅವಕಾಶವಿಲ್ಲ: ದ.ಕ ಜಿಲ್ಲಾಧಿಕಾರಿ
author img

By

Published : May 4, 2021, 6:49 AM IST

ಮಂಗಳೂರು: ಮಂಗಳೂರಿನ ಮೀನುಗಾರಿಕಾ ಬಂದರಿನಲ್ಲಿ ಚಿಲ್ಲರೆ ಮೀನು ಮಾರಾಟಗಾರರು ಮೀನು ಮಾರಾಟ ಮಾಡುವುದು ಹಾಗೂ ಸಾರ್ವಜನಿಕರು ಮೀನು ಖರೀದಿ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶಾಸಕರು ಹಾಗೂ ಮೀನುಗಾರಿಕಾ ಇಲಾಖೆಯ ಅಧಿಕಾರಿಗಳ ಜೊತೆ ಹಳೆ ಬಂದರುಗಳಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಪಾಲನೆ ಮಾಡುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಾರ್ವಜನಿಕರು ಮೀನುಗಾರಿಕಾ ಬಂದರಿನಲ್ಲಿ ಕೊರೊನಾ ಮಾರ್ಗಸೂಚಿಗಳನ್ನು ಗಾಳಿಗೆ ತೂರಿ ಮೀನು ಖರೀದಿಗೆ ಗುಂಪುಗೂಡುತ್ತಿದ್ದಾರೆ. ಹೀಗಾಗಿ, ಮೀನುಗಾರಿಕಾ ಬಂದರಿನಲ್ಲಿ ಮೀನು ಖರೀದಿ ಮಾಡುವುದನ್ನು ಸಂಪೂರ್ಣವಾಗಿ ನಿಲ್ಲಿಸಲಾಗಿದೆ. ಒಂದು ವೇಳೆ ನಿಯಮಗಳನ್ನು ಉಲ್ಲಂಘಿಸಿದರೆ ದಂಡ ವಸೂಲಿ ಮಾಡುವುದರೊಂದಿಗೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ. ಸಾರ್ವಜನಿಕರು ಮೀನುಗಳನ್ನು ಸ್ಥಳೀಯ ವ್ಯಾಪ್ತಿಯ ಮೀನು ಮಾರುಕಟ್ಟೆಗಳಲ್ಲಿ ಖರೀದಿಸಬಹುದಾಗಿದೆ. ಅಲ್ಲದೇ, ಸ್ಥಳೀಯ ಮಾರುಕಟ್ಟೆಗಳಲ್ಲಿಯೇ ಕಟ್ಟಿಂಗ್ ಮಾಡುವುದು ಮತ್ತು ಶುಚಿಗೊಳಿಸುವುದು ಅವಶ್ಯ ಎಂದು ಅವರು ತಿಳಿಸಿದರು.

ಇನ್ನು, ಮಂಗಳೂರು ಮೀನುಗಾರಿಕಾ ಬಂದರಿನ ಒಳಗೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹೊರರಾಜ್ಯದಿಂದ ಮೀನು ಬರುವ ಹೋಲ್​ಸೇಲ್ ಮಾರುಕಟ್ಟೆಯಲ್ಲಿ ರಿಟೇಲ್ ಮತ್ತು ಚಿಲ್ಲರೆ ವ್ಯಾಪಾರವನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಈ ಸೂಚನೆಗಳನ್ನು ಉಲ್ಲಂಘನೆ ಮಾಡಿದ್ದಲ್ಲಿ ವಿಪತ್ತು ನಿರ್ವಹಣೆ ಕಲಂ 51ರ ಅಡಿ ಹಾಗೂ ಕರ್ನಾಟಕ ಸಾಂಕ್ರಾಮಿಕ ರೋಗ ಅಧಿನಿಯಮದಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ಬಂದರಿನಲ್ಲಿ ಕೋವಿಡ್ ಮಾರ್ಗಸೂಚಿಗಳು ಸೇರಿದಂತೆ ಚಿಲ್ಲರೆ ಮಾರಾಟ ನಿಷೇಧ ಉಲ್ಲಂಘನೆ ನಿಯಂತ್ರಿಸಲು ಅಧಿಕಾರಿಗಳು ಮುಂದಾಗಬೇಕು. ಉಲ್ಲಂಘಿಸುವವರ ವೀಡಿಯೋ-ಚಿತ್ರಗಳನ್ನು ಸಂಗ್ರಹಿಸಬೇಕು. ಇವುಗಳ ನಿಯಂತ್ರಣಕ್ಕೆ ಹೆಚ್ಚಿನ ಹೋಮ್‍ ಗಾರ್ಡ್ಸ್ ಹಾಗೂ ಪೊಲೀಸರನ್ನು ನೇಮಕ ಮಾಡಬೇಕೆಂದು ಸೂಚನೆ ನೀಡಿದರು.

ಶಾಸಕ ವೇದವ್ಯಾಸ್‍ ಕಾಮತ್ ಮಾತನಾಡಿ, ಸರ್ಕಾರ ಕೊರೊನಾ ಸೋಂಕು ಹರಡುವುದನ್ನು ನಿಯಂತ್ರಿಸಲು ಹೊಸ-ಹೊಸ ಮಾರ್ಗಸೂಚಿಗಳನ್ನು ಜಾರಿಗೆ ತರುತ್ತಿದೆ. ಇದನ್ನು ಪ್ರತಿಯೊಬ್ಬ ನಾಗರಿಕರು ಚಾಚು ತಪ್ಪದೇ ಪಾಲನೆ ಮಾಡಬೇಕು. ಯಾರೂ ಕಾನೂನು ವ್ಯವಸ್ಥೆಗಳ ಪಾಲನೆಯನ್ನು ಕಟ್ಟುನಿಟ್ಟಾಗಿ ಮಾಡುತ್ತಿಲ್ಲವೋ ಅಂತವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಧ್ವನಿವರ್ಧಕಗಳನ್ನು ಬಳಸಿ ಇದರ ಬಗ್ಗೆ ಸಾರ್ವಜನಿಕರಿಗೆ ಹಾಗೂ ಮೀನು ಮಾರಾಟಗಾರರಿಗೆ ಮಾಹಿತಿ ನೀಡಬೇಕು ಎಂದರು.

ಇದನ್ನೂ ಓದಿ: ಚಾಮರಾಜನಗರ ಆಕ್ಸಿಜನ್​ ದುರಂತ ಬೆನ್ನಲ್ಲೇ ಎಚ್ಚೆತ್ತುಕೊಂಡ ಸರ್ಕಾರ: ಕಟ್ಟುನಿಟ್ಟಿನ ಮಾರ್ಗಸೂಚಿ ಪ್ರಕಟ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.