ಪುತ್ತೂರು: ಮಂಗಳೂರು ಬಾಂಬ್ ಷಡ್ಯಂತ್ರವನ್ನು ಬಯಲಿಗೆಳೆಯುವಂತೆ ಆಗ್ರಹಿಸಿ ಎಸ್‌ಡಿಪಿಐ ವತಿಯಿಂದ ಪುತ್ತೂರು ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಲಾಯಿತು.
ಈ ವೇಳೆ ಮಾತನಾಡಿದ ಪಿಎಫ್‌ಐ ಪುತ್ತೂರು ಜಿಲ್ಲಾಧ್ಯಕ್ಷ ಜಾಬಿರ್ ಅರಿಯಡ್ಕ, ಆರ್‌ಎಸ್‌ಎಸ್ ಮತ್ತು ಬಿಜೆಪಿಯ ಭಯೋತ್ಪಾಧನಾ ಕೇಂದ್ರವಾಗುತ್ತಿದೆ. ಈಶ್ವರಮಂಗಲದಲ್ಲಿ ಪತ್ತೆಯಾದ ಸ್ಫೋಟಕ ಸಾಮಾಗ್ರಿ ತಯಾರಿಕೆ ಸೇರಿದಂತೆ ಮಂಗಳೂರಿನಲ್ಲಿ ನಡೆದ ಬಾಂಬ್ ಸ್ಫೋಟ ಯತ್ನ ಎಲ್ಲದರ ಬಗ್ಗೆ ಸಮಗ್ರ ತನಿಖೆಯಾಗಬೇಕಾಗಿದೆ. ಇದರ ಹಿಂದಿರುವ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಸೂಕ್ತ ಕಾನೂನು ಶಿಕ್ಷೆ ನೀಡಬೇಕು. ಹೀಗೇ ಮುಂದುವರಿದಲ್ಲಿ ಪುತ್ತೂರಿಗೆ ಬಹುದೊಡ್ಡ ಅಪಾಯವಾಗುವ ಸಂಭವವಿದೆ ಎಂದರು.
ಪ್ರತಿಭಟನೆಯಲ್ಲಿ ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಇಕ್ಬಾಲ್ ಬೆಳ್ಳಾರೆ, ಪುತ್ತೂರು ವಿಧಾನ ಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಕೆ. ಎ. ಸಿದ್ದೀಕ್, ಉಪಾಧ್ಯಕ್ಷ ಇಬ್ರಾಹಿಂ ಸಾಗರ್, ಕಾರ್ಯದರ್ಶಿ ಅಶ್ರಫ್ ಬಾವು, ಜೊತೆ ಕಾರ್ಯದರ್ಶಿ ಯಹ್ಯಾ ಕೂರ್ನಡ್ಕ, ಪಿಎಫ್‌ಐ ಉಪ್ಪಿನಂಗಡಿ ವಲಯ ಅಧ್ಯಕ್ಷ ಹಮೀದ್ ಮೆಜೆಸ್ಟಿಕ್, ಮುಖಂಡರಾದ ಶಾಕಿರ್ ಅಳಕೆಮಜಲು, ಹಮೀದ್ ಸಾಲ್ಮರ, ಅದ್ದು ಕೊಡಿಪ್ಪಾಡಿ. ಇರ್ಶಾದ್ ಕಾವು ಮತ್ತಿತರರು ಉಪಸ್ಥಿತರಿದ್ದರು.