ETV Bharat / city

ದ.ಕ. ಜಿಲ್ಲೆಯಲ್ಲಿ ಮತ್ತೆ ವರುಣನ ಅಬ್ಬರ: ಯಲ್ಲೋ ಅಲರ್ಟ್ ಘೋಷಣೆ - ಪ್ರವಾಹ ಪೀಡಿತ ಪ್ರದೇಶಗಳಾದ ಚಾರ್ಮಾಡಿ, ಡಿಡುಪೆ, ಪರ್ಲಾಣಿ, ಕೊಳಂಬೆ

ತಿಂಗಳ ನಂತರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಮಳೆ ಆರ್ಭಟಿಸುತ್ತಿದೆ. ನದಿಗಳ ನೀರಿನ ಮಟ್ಟ ಏರಿಕೆಯಾಗಿದೆ. ಮಳೆ ಹಿನ್ನೆಲೆ ನಾಳೆವರೆಗೆ ಜಿಲ್ಲೆಯಾದ್ಯಂತ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಮಳೆ
author img

By

Published : Sep 26, 2019, 2:47 PM IST

Updated : Sep 26, 2019, 2:58 PM IST

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಿಂಗಳ ಕಾಲ ಕೊಂಚ ಬಿಡುವು ಪಡೆದಿದ್ದ ಮಳೆ ನಿನ್ನೆ ಸಂಜೆಯಿಂದ ಮತ್ತೆ ಅಬ್ಬರಿಸುತ್ತಿದೆ. ಇಂದೂ ಕೂಡ ಬೆಳಗ್ಗೆಯಿಂದಲೇ ಮಳೆ ಆರಂಭವಾದ ಪರಿಣಾಮ ಶಾಲೆ, ಕೆಲಸಕ್ಕೆ ಹೋಗುವವರು ತೊಂದರೆ ಅನುಭವಿಸಿದರು.

ನಿನ್ನೆ ಸಂಜೆ ಆರಂಭವಾಗಿರುವ ಮಳೆ ದ.ಕ. ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪ್ರವಾಹ ಪೀಡಿತ ಪ್ರದೇಶಗಳಾದ ಚಾರ್ಮಾಡಿ, ಡಿಡುಪೆ, ಪರ್ಲಾಣಿ, ಕೊಳಂಬೆ ಮುಂತಾದ ಪ್ರದೇಶಗಳಲ್ಲಿ ಇದ್ದಕ್ಕಿದ್ದಂತೆ ಆರ್ಭಟಿಸಿದ್ದು, ನದಿಗಳು ಉಕ್ಕಿಹರಿಯುತ್ತಿವೆ. ಏಕಾಏಕಿ ನೀರಿನ ಪ್ರಮಾಣದಲ್ಲಿ ಏರಿಕೆ‌ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಈ ಪ್ರದೇಶಗಳಲ್ಲಿ ಮತ್ತೆ ಪ್ರವಾಹದ ಭೀತಿ ಎದುರಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಮಳೆ

ಇನ್ನು ಮಳೆ ಹಿನ್ನೆಲೆ ನಾಳೆವರೆಗೆ ಜಿಲ್ಲೆಯಾದ್ಯಂತ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಲ್ಲದೆ ಸಮುದ್ರವೂ ಪ್ರಕ್ಷುಬ್ಧಗೊಂಡಿದ್ದು, ಮೀನುಗಾರರು ಮೀನುಗಾರಿಕೆಗೆ ತೆರಳದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.

Intro:ಮಂಗಳೂರು: ದ.ಕ.ಜಿಲ್ಲೆಯಲ್ಲಿ ತಿಂಗಳ ಕಾಲ ಕೊಂಚ ಬಿಡುವು ಪಡೆದಿದ್ದ ಮಳೆ ನಿನ್ನೆ ಸಂಜೆಯಿಂದ ಮತ್ತೆ ಬಿರುಸು ಪಡೆದಿದ್ದು, ಇಂದೂ ಮುಂದುವರಿದಿದೆ. ಇಂದು ಬೆಳ್ಳಗ್ಗಿನಿಂದಲೇ ಜಿಟಿಜಿಟಿ ಎಂದು ಆರಂಭವಾಗಿರುವ ಮಳೆಯ ಪರಿಣಾಮ ಶಾಲೆಗೆ, ಕೆಲಸಕ್ಕೆ ಹೋಗುವವರು ತೊಂದರೆ ಅನುಭವಿಸಿದರು.

ನಿನ್ನೆ ಸಂಜೆ ಆರಂಭವಾಗಿರುವ ಮಳೆಯ ಪರಿಣಾಮ ಪ್ರವಾಹ ಪೀಡಿತ ದ.ಕ.ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ, ಡಿಡುಪೆ, ಪರ್ಲಾಣಿ, ಕೊಳಂಬೆ ಮುಂತಾದ ಪ್ರದೇಶಗಳಲ್ಲಿ ಇದ್ದಕ್ಕಿದ್ದಂತೆ ಮಳೆ ಬಿರುಸು ಪಡೆದಿರುವುದರಿಂದ ನದಿಗಳು ಉಕ್ಕಿಹರಿಯುತ್ತಿವೆ. ಏಕಾಏಕಿ ನೀರಿನ ಪ್ರಮಾಣದಲ್ಲಿ ಏರಿಕೆ‌ ಕಂಡುಬಿಂದಿರುವುದರಿಂದ ಜಲಸ್ಪೋಟ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಈ ಪ್ರದೇಶಗಳಲ್ಲಿ ಮತ್ತೆ ಪ್ರವಾಹದ ಭೀತಿ ಎದುರಾಗುತ್ತಿದೆ.

Body:ದ.ಕ.ಜಿಲ್ಲೆಯಾದ್ಯಂತ ರಾತ್ರಿಯೂ ಸಾಧಾರಣ ಮಳೆ ಸುರಿದಿದ್ದು, ಇಂದು ಬೆಳಗ್ಗೆಯೂ ಮುಂದುವರಿದಿದೆ. ನಾಳೆವರೆಗೆ ಜಿಲ್ಲೆಯಾದ್ಯಂತ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೆ ಸಮುದ್ರವೂ ಪ್ರಕ್ಷುಬ್ಧಗೊಂಡಿದ್ದು, ಮೀನುಗಾರರು ಮೀನುಗಾರಿಕೆಗೆ ತೆರಳದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.

Reporter_Vishwanath Panjimogaru

Conclusion:
Last Updated : Sep 26, 2019, 2:58 PM IST

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.