ETV Bharat / city

ಕಸ್ತೂರಿ ರಂಗನ್ ವರದಿ ಮತ್ತು ಹುಲಿ ಯೋಜನೆ ಕೈಬಿಡಿ: ಮಾಜಿ ಸಚಿವ ರಮಾನಾಥ ರೈ - ಕರ್ನಾಟಕ ಹುಲಿ ಯೋಜನೆ

ಕೇಂದ್ರ ಸರ್ಕಾರ ಕಸ್ತೂರಿ ರಂಗನ್ ವರದಿ ಮತ್ತು ಹುಲಿ ಯೋಜನೆಯನ್ನು ಕೈಬಿಡುವಂತೆ ಮಾಜಿ ಸಚಿವ ಬಿ.ರಮಾನಾಥ ರೈ ಒತ್ತಾಯಿಸಿದ್ದಾರೆ.

ರಮಾನಾಥ ರೈ
ರಮಾನಾಥ ರೈ
author img

By

Published : Dec 18, 2021, 2:28 PM IST

ಮಂಗಳೂರು: ಪಶ್ಚಿಮ ಘಟ್ಟದ ತಪ್ಪಲಿನ ಜನರ ಹಿತವನ್ನು ಪರಿಗಣಿಸಿ ಕಸ್ತೂರಿ ರಂಗನ್ ವರದಿ ಮತ್ತು ಹುಲಿ ಯೋಜನೆಯನ್ನು ಕೈಬಿಡುವಂತೆ ಮಾಜಿ ಸಚಿವ ಬಿ.ರಮಾನಾಥ ರೈ ಒತ್ತಾಯಿಸಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಅವರು, ನಾನು ಅರಣ್ಯ ಸಚಿವನಿದ್ದಾಗ ಕಸ್ತೂರಿ ರಂಗನ್ ವರದಿ ಜಾರಿ ಮಾಡದಂತೆ ಮತ್ತು ಜಾರಿ ಆಗದ ಹುಲಿ ಯೋಜನೆ ಬಗ್ಗೆ ವಿರೋಧ ವ್ಯಕ್ತಪಡಿಸಲಾಯಿತು. ಕಸ್ತೂರಿ ರಂಗನ್ ವರದಿಯನ್ನು ರದ್ದು ಮಾಡಬೇಕಿರುವುದು ಕೇಂದ್ರ ಸರ್ಕಾರ. ನಾನು ಅರಣ್ಯ ಸಚಿವನಾಗಿದ್ದಾಗ ಇಲ್ಲಿನ ಜನರ ವಿರೋಧವನ್ನು ಪರಿಗಣಿಸಿ ರದ್ದುಪಡಿಸುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು, ದೆಹಲಿಗೆ ತೆರಳಿ ಮಾತುಕತೆ ನಡೆಸಿದ್ದೆ. ಆದರೆ, ಅದನ್ನು ಕೇಂದ್ರ ಸರ್ಕಾರ ರದ್ದು ಪಡಿಸಿಲ್ಲ. ಇದೀಗ ರಾಜ್ಯ ಸರ್ಕಾರ ಮತ್ತೆ ಪತ್ರ ಬರೆದಿರುವುದು ಗಮನಕ್ಕೆ ಬಂದಿದೆ. ಈ ಯೋಜನೆ ಹತ್ತು ರಾಜ್ಯಗಳಿಗೆ ಸಂಬಂಧಪಟ್ಟಿದ್ದು, ಇದನ್ನು ಕೇಂದ್ರ ರದ್ದು ಮಾಡಬೇಕು ಎಂದರು.

ಮಂಗಳೂರಿನಲ್ಲಿ ಮಾತನಾಡಿದ ಮಾಜಿ ಸಚಿವ ರಮಾನಾಥ ರೈ

ನಮ್ಮ ಸರ್ಕಾರ ಇದ್ದಾಗ ವಿರೋಧ ವ್ಯಕ್ತಪಡಿಸಿದವರು ಈಗ ಅಧಿಕಾರದಲ್ಲಿದ್ದಾರೆ. ಕೇಂದ್ರದಲ್ಲಿ ಕೂಡ ಬಿಜೆಪಿ ಅಧಿಕಾರದಲ್ಲಿದೆ. ಕೇಂದ್ರ ಸರ್ಕಾರ ಕಸ್ತೂರಿ ರಂಗನ್ ವರದಿ ರದ್ದುಪಡಿಸಲು ಶ್ರಮಿಸಲಿ ಎಂದು ಒತ್ತಾಯಿಸಿದರು.

ಹುಲಿ ಯೋಜನೆ ಜಾರಿಯಾಗುತ್ತದೆ ಎಂದು ಉಯಿಲೆಬ್ಬಿಸಲಾಯಿತು. ನಮ್ಮ ಸರ್ಕಾರದ ಸಂದರ್ಭದಲ್ಲಿ ಆ ಯೋಜನೆ ಇರಲಿಲ್ಲ. ಇದೀಗ ಕುದುರೆಮುಖ ರಕ್ಷಿತಾರಣ್ಯದಲ್ಲಿ ಹುಲಿ ಯೋಜನೆ ಜಾರಿಗೆ ಬರಲಿದೆ. ಯೋಜನೆ ಇಲ್ಲದಿದ್ದಾಗ ಧ್ವನಿಯೆತ್ತಿದವರು ಈಗ ಮಾತಾಡಲಿ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.