ETV Bharat / city

ಈಶ್ವರಪ್ಪರನ್ನು ವಜಾ ಮಾಡುವುದು ಮಾತ್ರವಲ್ಲ, ಕೊಲೆ ಆರೋಪದಡಿ ಜೈಲಿಗಟ್ಟಬೇಕು: ರಮಾನಾಥ ರೈ - reactions on minister eshwarappa issue

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ಅವರನ್ನು ವಜಾ ಮಾಡುವುದು ಮಾತ್ರವಲ್ಲ, ಕೊಲೆ ಆರೋಪದಡಿ ಜೈಲಿಗೆ ಅಟ್ಟಬೇಕು ಎಂದು ಮಾಜಿ ಸಚಿವ ಬಿ ರಮಾನಾಥ ರೈ ಆಗ್ರಹಿಸಿದ್ದಾರೆ.

Ramanatha rai urges to arrest a minister k s eshwarappa
ಮಾಜಿ ಸಚಿವ ಬಿ ರಮಾನಾಥ ರೈ
author img

By

Published : Apr 13, 2022, 1:12 PM IST

ಮಂಗಳೂರು (ದಕ್ಷಿಣ ಕನ್ನಡ): ಸಚಿವ ಕೆ.ಎಸ್​ ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್​ ಪಾಟೀಲ್​ ಆತ್ಮಹತ್ಯೆ ಮಾಡಿಕೊಂಡ ನಂತರ ಈಶ್ವರಪ್ಪ ವಿರುದ್ಧ ಸಾಕಷ್ಟು ಆಕ್ರೋಶ ವ್ಯಕ್ತವಾಗುತ್ತಿದೆ. ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಒತ್ತಾಯಗಳು ಕೇಳಿಬರುತ್ತಿವೆ. ಇದೀಗ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ಅವರನ್ನು ವಜಾ ಮಾಡುವುದು ಮಾತ್ರವಲ್ಲ, ಕೊಲೆ ಆರೋಪದಡಿ ಜೈಲಿಗೆ ಕಳಿಸಬೇಕು ಎಂದು ಮಾಜಿ ಸಚಿವ ಬಿ ರಮಾನಾಥ ರೈ ಆಗ್ರಹಿಸಿದ್ದಾರೆ.

ಈಶ್ವರಪ್ಪರವರನ್ನು ಬಂಧಿಸಬೇಕೆಂದು ರಮಾನಾಥ ರೈ ಒತ್ತಾಯ

ಇದನ್ನೂ ಓದಿ: ನಮ್ಮ ದೂರಿಗೆ ರಾಜ್ಯಪಾಲರು ಸ್ಪಂದಿಸಿದ್ದಾರೆ; ಈಶ್ವರಪ್ಪ ವಿರುದ್ಧ ಕ್ರಮದ ವಿಶ್ವಾಸ ಮೂಡಿದೆ ಎಂದ ಡಿಕೆಶಿ

ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಸಂತೋಷ್ ಪಾಟೀಲ್ ಶೇ.40 ರಷ್ಟು ಕಮಿಷನ್ ತೆಗೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತನ್ನ ಡೆತ್ ನೋಟ್​ನಲ್ಲಿ ಈಶ್ವರಪ್ಪ ಅವರ ಹೆಸರನ್ನು ಹೇಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವವರು ಡೆತ್ ನೋಟ್​ನಲ್ಲಿ ಸುಳ್ಳು ಹೇಳುವುದಿಲ್ಲ. ಈಶ್ವರಪ್ಪ ವಿರುದ್ಧ ಎಫ್​ಐಆರ್​ ಆಗಿದ್ದು, ಕೂಡಲೇ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.