ETV Bharat / city

ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 11 ವರ್ಷ ಜೈಲು ಶಿಕ್ಷೆ ವಿಧಿಸಿದ ಮಂಗಳೂರು ಕೋರ್ಟ್ - ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಕೇಸ್

ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಬಟ್ಟೆ ಮಳಿಗೆಯ ಮಾಲೀಕನಿಗೆ 11 ವರ್ಷ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು ನೀಡಿದೆ.

ಅತ್ಯಾಚಾರ ಪ್ರಕರಣ
ಅತ್ಯಾಚಾರ ಪ್ರಕರಣ
author img

By

Published : Jun 23, 2022, 8:08 AM IST

ಮಂಗಳೂರು: ಬಟ್ಟೆ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ ಮಾಲೀಕನಿಗೆ ಮಂಗಳೂರಿನ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಹಾಗೂ 2ನೇ ತ್ವರಿತಗತಿ ವಿಶೇಷ ಫೋಕ್ಸೊ ನ್ಯಾಯಾಲಯ 11 ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ಬಜ್ಪೆಯ ಕಂದಾವರ ನಿವಾಸಿ ಅಬ್ದುಲ್ ಲತೀಫ್(41) ಎಂಬಾತ ಶಿಕ್ಷೆಗೊಳಗಾದ ಅಪರಾಧಿ. ಈತನು ಬಜ್ಪೆಯ ಕೈಕಂಬದಲ್ಲಿ ಫಾತಿಮಾ ಡ್ರೆಸ್ ಕಲೆಕ್ಷನ್ ಎಂಬ ಬಟ್ಟೆ ಅಂಗಡಿಯನ್ನು ನಡೆಸುತ್ತಿದ್ದ. 2017ರಲ್ಲಿ ಈತ ತನ್ನ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಬಾಲಕಿಗೆ ಅಮಲು ಪದಾರ್ಥ ಮಿಶ್ರಿತ ಜ್ಯೂಸ್ ನೀಡಿ ಅತ್ಯಾಚಾರ ಎಸಗಿದ್ದನು. ಅಲ್ಲದೇ ಯಾರಲ್ಲಾದರೂ ಈ ವಿಚಾರವನ್ನು ತಿಳಿಸಿದರೆ ಹತ್ಯೆ ಮಾಡುವುದಾಗಿ ಬೆದರಿಕೆ ಒಡ್ಡಿದ್ದನು.

ಈ ವಿಚಾರವನ್ನು ಬಾಲಕಿ ಮನೆಯವರಲ್ಲಿ ತಿಳಿಸಿದ್ದು, ಬಳಿಕ ಬಜ್ಪೆ ಠಾಣೆಗೆ ಪಾಲಕರೊಂದಿಗೆ ಆಗಮಿಸಿ ನೀಡಿರುವ ದೂರಿನಂತೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಆರೋಪಿಯು ಪೊಲೀಸರ ಕೈಗೆ ಸಿಗದೇ ಸುಮಾರು ಎರಡು ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ. ಆದರೆ ಆ ಬಳಿಕ ಪೊಲೀಸರು ಆರೋಪಿಯನ್ನು ಗದಗ ಜಿಲ್ಲೆಯಲ್ಲಿ ಬಂಧಿಸಿದ್ದರು.

ಈ ಪ್ರಕರಣದ ತನಿಖೆ ನಡೆಸಿದ ಬಜ್ಪೆ ಠಾಣೆಯ ಅಂದಿನ ಪೊಲೀಸ್ ಇನ್​​ಸ್ಪೆಕ್ಟರ್ ಕೆ.ಆರ್. ನಾಯ್ಕ್ ಅವರು ನ್ಯಾಯಾಲಯಕ್ಕೆ ದೋಪಾರೋಪಣಾ ಪಟ್ಟಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಧೀಶ ರಾಧಕೃಷ್ಣ ಅವರು ವಾದವನ್ನು ಆಲಿಸಿ ಆರೋಪಿ ಅಬ್ದುಲ್ ಲತೀಫ್ ತಪ್ಪಿತಸ್ಥನೆಂದು ಘೋಷಿಸಿ, 11 ವರ್ಷಗಳ ಜೈಲು ಶಿಕ್ಷೆ ಮತ್ತು 50 ಸಾವಿರ ರೂ ದಂಡ ವಿಧಿಸಿ ಆದೇಶಿಸಿದ್ದಾರೆ.

(ಇದನ್ನೂ ಓದಿ: ಕಡಬ ಶಾಲಾ ಮಕ್ಕಳಿಗೆ ಚಿಕನ್ ಫಾಕ್ಸ್... ಶಾಲೆಗೆ ಒಂದು ವಾರ ರಜೆ ಘೋಷಣೆ)

ETV Bharat Logo

Copyright © 2024 Ushodaya Enterprises Pvt. Ltd., All Rights Reserved.