ಮಂಗಳೂರು: ಕೋವಿಡ್-19 ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸುವ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಪಾಡಲು ಸಾರ್ವಜನಿಕರ ಹಿತದೃಷ್ಟಿಯಿಂದ ದ.ಕ ಜಿಲ್ಲೆಯಾದ್ಯಂತ ಕಾರ್ಯಾಚರಿಸುತ್ತಿರುವ ರಿಕ್ರಿಯೇಷನ್ ಕ್ಲಬ್ಗಳನ್ನು ತಾತ್ಕಾಲಿಕವಾಗಿ ಮುಚ್ವುವಂತೆ ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಆದೇಶಿಸಿದ್ದಾರೆ.
ದ.ಕ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ ಬಂಟ್ವಾಳ, ಬಿ.ಸಿ.ರೋಡ್, ಮೆಲ್ಕಾರ್, ಸಿದ್ಧಕಟ್ಟೆ, ಉಜಿರೆ, ಬೆಳ್ತಂಗಡಿ, ವೇಣೂರು, ಮಡಂತ್ಯಾರು, ಜಾಲ್ಸೂರು, ಪುತ್ತೂರು, ನೆಲ್ಯಾಡಿ ಮುಂತಾದ ಕಡೆಗಳಲ್ಲಿ ರಿಕ್ರಿಯೇಷನ್ ಕ್ಲಬ್ಗಳಲ್ಲಿ ಇಸ್ಪೀಟ್ ಆಡಲಾಗುತ್ತದೆ. ರಿಕ್ರಿಯೇಷನ್ ಕ್ಲಬ್ಗಳಲ್ಲಿ ಇಸ್ಪೀಟ್ ಆಡುವಾಗ ಕನಿಷ್ಠ 1 ಮೀ. ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಾಧ್ಯವಾಗೋದಿಲ್ಲ. ಇಸ್ಪೀಟ್ ಕಾರ್ಡ್ಗಳಲ್ಲಿ ಆಡುವಾಗ ಒಬ್ಬರಿಂದ ಒಬ್ಬರಿಗೆ ಕಾರ್ಡ್ಗಳನ್ನು ಹಂಚುವ ಸಂದರ್ಭ ಸೋಂಕಿತ ವ್ಯಕ್ತಿ ಇದ್ದಲ್ಲಿ ಅವರ ಮೂಲಕ ಸೋಂಕು ಹರಡುವ ಸಾಧ್ಯತೆ ಇರುತ್ತದೆ.
ಅಲ್ಲದೆ ರಿಕ್ರಿಯೇಷನ್ ಕ್ಲಬ್ನಲ್ಲಿ ಆಡುವಾಗ ಮಾಸ್ಕ್, ಸ್ಯಾನಿಟೈಸರ್ ಬಳಕೆ ಸಾಧ್ಯತೆ ಕಡಿಮೆ ಇರುತ್ತದೆ. ಜೊತೆಗೆ ಯಾವುದೇ ರೀತಿಯ ಎಸ್ಒಪಿ ಇಲ್ಲದಿರುವುದರಿಂದ ಸದಸ್ಯರನ್ನು ನಿಯಂತ್ರಣಕ್ಕೆ ಒಳಪಡಿಸಲು ಸಾಧ್ಯವಿಲ್ಲ. ಆದ್ದರಿಂದ ಕೋವಿಡ್-19 ಸೋಂಕು ಸಂಪೂರ್ಣ ನಿಯಂತ್ರಣಕ್ಕೆ ಬರುವ ತನಕ ರಿಕ್ರಿಯೇಷನ್ ಕ್ಲಬ್ಗಳಲ್ಲಿ ಇಸ್ಪೀಟ್ ಆಟಗಳ ಜೊತೆಗೆ ಇತರ ಯಾವುದೇ ಕಾರ್ಯಚಟುವಟಿಗಳು ನಡೆಯದಂತೆ ಕ್ರಮ ಕೈಗೊಳ್ಳಲು ಅಗತ್ಯವಿರುವ ಕಾರಣ ತಾತ್ಕಾಲಿಕವಾಗಿ ರಿಕ್ರಿಯೇಷನ್ ಕ್ಲಬ್ಗಳನ್ನು ಮುಚ್ಚಲು ದ.ಕ ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಆದೇಶಿಸಿದ್ದಾರೆ.