ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದಿನಿಂದ ನಾಳೆ ಬೆಳಗ್ಗೆ ತನಕ ಭಾರಿ ಮಳೆ ಸುರಿಯುವ ಸಾಧ್ಯತೆ ಇರುವ ಕಾರಣ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ಜಿಲ್ಲೆಯಲ್ಲಿ ಐದು ದಿನಗಳಿಂದ ವಿಪರೀತ ಮಳೆ ಸುರಿಯುತ್ತಿರುವ ಕಾರಣ ಇವತ್ತಿನ ತನಕ ಆರೆಂಜ್ ಅಲರ್ಟ್ ಘೋಷಿಸಲಾಗಿತ್ತು. ಇಂದು ಮಧ್ಯಾಹ್ನ 1 ಗಂಟೆಯಿಂದ ನಾಳೆ ಬೆಳಗ್ಗೆ 8.30ರವರೆಗೆ 204.5 ಮಿಲಿ ಮೀಟರ್ಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಅದಾದ ಬಳಿಕ ನಾಳೆ ಬೆಳಗ್ಗೆ 8.30ರಿಂದ ಆಗಸ್ಟ್ 12ರ ಬೆಳಿಗ್ಗೆ 8.30 ರವರೆಗೆ ಆರೆಂಜ್ ಅಲರ್ಟ್ ಮುಂದುವರೆಯಲಿದೆ. ಈ ಸಂದರ್ಭದಲ್ಲಿಯೂ ಭಾರಿ ಮಳೆಯಾಗಲಿದ್ದು, 115.6 ರಿಂದ 204.4 ಮಿಮೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಆಗಸ್ಟ್ 12ರ ಬೆಳಗ್ಗೆ 8.30ರಿಂದ ಆಗಸ್ಟ್ 13ರ ಬೆಳಗ್ಗೆ 8.30ರವರೆಗೆ ಯೆಲ್ಲೋ ಅಲರ್ಟ್ ಇರಲಿದ್ದು, ಆ ಸಂದರ್ಭದಲ್ಲಿ 64 ರಿಂದ 115.5 ಮಿಮೀ ಮಳೆಯಾಗಲಿದೆ ಎಂದು ತಿಳಿಸಿದೆ.