ಮಂಗಳೂರು: ನಗರದಲ್ಲಿ ಆತಂಕಕಾರಿ ಬೆಳವಣಿಗೆ ನಡೆದ ಹಿನ್ನೆಲೆಯಲ್ಲಿ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ಎನ್. ರಾಜು ಅವರ ಮೂಲಕ ಕೇಂದ್ರ ಸರ್ಕಾರಕ್ಕೆ ವರದಿಯೊಂದನ್ನು ಕಳುಹಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರು ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟು ದೇಶದ ಆಂತರಿಕ ಭದ್ರತೆಗೆ ಸವಾಲೊಡ್ಡಿರುವ ಪರಿಣಾಮ ಈ ಕುರಿತು ಸಂಪೂರ್ಣವಾಗಿ ವರದಿ ನೀಡಲು ತಯಾರಿ ನಡೆಯುತ್ತಿದೆ.
ವರದಿಯನ್ನು ನೀಲಮಣಿ ರಾಜು ಅವರಿಗೆ ಸಲ್ಲಿಸಲಾಗುತ್ತದೆ. ಅವರು ರಾಜ್ಯ ಸರ್ಕಾರಕ್ಕೆ ಕಳುಹಿಸಿಕೊಡುತ್ತಾರೆ. ಅಲ್ಲಿಂದ ಕೇಂದ್ರ ಸರ್ಕಾರಕ್ಕೆ ತಲುಪಿಸಲಾಗುತ್ತದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಡಾ. ಪಿ.ಎಸ್.ಹರ್ಷ ಮಾಹಿತಿ ನೀಡಿದ್ದಾರೆ.