ETV Bharat / city

ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್ - ಧರ್ಮಸ್ಥಳಕ್ಕೆ ನಟ ಯಶ್​ ಭೇಟಿ

ಕನ್ನಡ ಚಿತ್ರರಂಗದ ಖ್ಯಾತ ನಟ ಯಶ್ ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಕೆಜಿಎಫ್ 2 ಚಿತ್ರತಂಡದ ಜತೆಯಲ್ಲಿ ಯಶ್ ಕ್ಷೇತ್ರಕ್ಕೆ ಭೇಟಿ ನೀಡಿದ್ದು, ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಚಿತ್ರತಂಡಕ್ಕೆ ಸ್ವಾಗತಿಸಿದ್ದಾರೆ.

rock-star-yash-visited-kukke-subramanya-temple
ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್..
author img

By

Published : Apr 10, 2022, 1:29 PM IST

Updated : Apr 10, 2022, 3:14 PM IST

ಸುಬ್ರಹ್ಮಣ್ಯ(ದಕ್ಷಿಣ ಕನ್ನಡ) : ಕನ್ನಡ ಚಿತ್ರರಂಗದ ಖ್ಯಾತ ನಟ, ರಾಕಿಂಗ್ ಸ್ಟಾರ್ ಯಶ್ ಅವರು ಇಂದು ದಕ್ಷಿಣ ಭಾರತದ ಪ್ರಸಿದ್ಧ ಪುಣ್ಯಕ್ಷೇತ್ರ ಧರ್ಮಸ್ಥಳ ಹಾಗೂ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬಹುನಿರೀಕ್ಷಿತ ಕೆಜಿಎಫ್ ಚಾಪ್ಟರ್​-2 ಚಿತ್ರತಂಡದ ಜೊತೆ ಯಶ್ ದೇವಾಲಯಗಳಿಗೆ ಭೇಟಿ ನೀಡಿದ್ದಾರೆ.

ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್..

ಸುಬ್ರಮಣ್ಯಕ್ಕೆ ಯಶ್ ಭೇಟಿ ಸಮಯದಲ್ಲಿ ಅಭಿಮಾನಿಗಳು ಫೋಟೋ ಕ್ಲಿಕ್ಕಿಸಲು ಮುಗಿಬಿದ್ದಿದ್ದರು. ಅಭಿಮಾನಿಗಳ ನೂಕುನುಗ್ಗಲಿನಿಂದಾಗಿ ಮಾಧ್ಯಮಗಳಿಗೆ ಹೇಳಿಕೆ ನೀಡದೇ ರಾಕಿಂಗ್​ ಸ್ಟಾರ್​ ದೇಗುಲದಿಂದ ತೆರಳಿದ್ದಾರೆ. ಸುಬ್ರಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಚಿತ್ರತಂಡವನ್ನು ಸ್ವಾಗತಿಸಿದರು. ಬಳಿಕ ಯಶ್ ಹಾಗೂ ಸಂಗಡಿಗರು ಕ್ಷೇತ್ರದಲ್ಲಿ ಶ್ರೀ ದೇವರ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ, ಸದಸ್ಯೆ ಶೋಭಾ ಗಿರಿಧರ್, ಎಇಒ ಪುಷ್ಪಲತಾ, ಶಿಷ್ಟಾಚಾರ ಅಧಿಕಾರಿಗಳು ಉಪಸ್ಥಿತರಿದ್ದರು.

rock-star-yash-visited-kukke-subramanya-temple
ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗೆಡೆ ಭೇಟಿ ಮಾಡಿದ ಯಶ್​ ಹಾಗೂ ವಿಜಯ್ ಕಿರಗಂದೂರು

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೂ ಕೂಡ ಭೇಟಿ ನೀಡಿದ್ದ ಯಶ್​, ಮಂಜುನಾಥ ಸ್ವಾಮಿಯ ದರ್ಶನ ಪಡೆದು, ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗೆಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಕೆಜಿಎಫ್ ಚಿತ್ರದ ನಿರ್ಮಾಪಕ ಹೊಂಬಾಳೆ ಫಿಲಂಸ್​​ನ ವಿಜಯ್ ಕಿರಗಂದೂರು ಅವರು ಯಶ್​ ಜೊತೆಗಿದ್ದರು. ಇತ್ತೀಚೆಗಷ್ಟೇ ಯಶ್ ಹಾಗೂ ಕೆಜಿಎಫ್-2 ಚಿತ್ರತಂಡವು ಮುಂಬೈ, ಕೇರಳ, ತಮಿಳುನಾಡು ಸೇರಿದಂತೆ ದೇಶದ ವಿವಿಧ ಭಾಗಗಳಿಗೆ ತೆರಳಿ ಸಿನೆಮಾ ಪ್ರಚಾರ ನಡೆಸಿದೆ.

ಏಪ್ರಿಲ್​ 14ರಂದು ಕೆಜಿಎಫ್ ಚಾಪ್ಟರ್​-2 ಚಿತ್ರವು ವಿಶ್ವಾದ್ಯಂತ ಬಿಡುಗಡೆಯಾಗುತ್ತಿದ್ದು, ಸದ್ಯ ಯಶ್​ ಹಾಗೂ ಇತರರು ದೇಗುಲಗಳಿಗೆ ಭೇಟಿ‌ ನೀಡಿ ಆಶೀರ್ವಾದ ಪಡೆಯುತ್ತಿದ್ದಾರೆ.

ಓದಿ : ಮಾರ್ಟಿನ್ ರಿಲೀಸ್ ಡೇಟ್ ಅನೌನ್ಸ್ : ಸದ್ದಿಲ್ಲದೇ ಸರ್​ಪ್ರೈಸ್​ ಕೊಟ್ಟ ಧ್ರುವ ಸರ್ಜಾ

Last Updated : Apr 10, 2022, 3:14 PM IST

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.