ETV Bharat / city

ಮಂಗಳೂರಲ್ಲಿ ವ್ಯಾಪಕ ವಿರೋಧ: ರೋಹಿತ್ ಚಕ್ರತೀರ್ಥ ಸನ್ಮಾನ ಕಾರ್ಯಕ್ರಮ ರದ್ದು

ವ್ಯಾಪಕ ವಿರೋಧದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಆಯೋಜಿಸಿದ್ದ ರೋಹಿತ್ ಚಕ್ರತೀರ್ಥ ಅವರ ಸನ್ಮಾನ ಕಾರ್ಯಕ್ರಮವನ್ನು ರದ್ದುಪಡಿಸಲಾಗಿದೆ.

ರೋಹಿತ್ ಚಕ್ರತೀರ್ಥ ಸನ್ಮಾನ ಕಾರ್ಯಕ್ರಮ ರದ್ದು
ರೋಹಿತ್ ಚಕ್ರತೀರ್ಥ ಸನ್ಮಾನ ಕಾರ್ಯಕ್ರಮ ರದ್ದು
author img

By

Published : Jun 25, 2022, 8:03 AM IST

ಮಂಗಳೂರು: ಪಠ್ಯಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ಉದ್ಭವಿಸಿದ ವಿವಾದದ ಬಳಿಕ ರೋಹಿತ್ ಚಕ್ರತೀರ್ಥ ಅವರಿಗೆ ಇಂದು ಮಂಗಳೂರಿನಲ್ಲಿ ಆಯೋಜಿಸಿದ್ದ ನಾಗರಿಕ ಸನ್ಮಾನ ಕಾರ್ಯಕ್ರಮವನ್ನು ವ್ಯಾಪಕ ವಿರೋಧದ ಹಿನ್ನೆಲೆಯಲ್ಲಿ ರದ್ದು ಪಡಿಸಲಾಗಿದೆ.

ಸೇವಾಂಜಲಿ ಚಾರಿಟಬಲ್​​ ಟ್ರಸ್ಟ್ ಸಹಕಾರದಿಂದ ಚಿಂತನಾ ಗಂಗಾದಿಂದ ಮಂಗಳೂರಿನ ಡೊಂಗರಕೇರಿಯ ಕೆನರಾ ಹೈಸ್ಕೂಲಿನ ಸಭಾಂಗಣದಲ್ಲಿ ರೋಹಿತ್ ಚಕ್ರತೀರ್ಥ ಅವರಿಗೆ ಇಂದು ನಾಗರಿಕ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ರೋಹಿತ್ ಚಕ್ರತೀರ್ಥ ಅವರಿಂದ ಭರತ ಖಂಡದ ಗತವೈಭವ ಮತ್ತು ಅಳಿಸಿ ಹೋದ ಇತಿಹಾಸದ ಬಗ್ಗೆ ವಿಚಾರ ಮಂಡನೆ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ವಿವಿ ಕುಲಪತಿ ಸುಬ್ರಹ್ಮಣ್ಯ ಯಡಪಡಿತ್ತಾಯ ವಹಿಸಿದ್ದರು.

ರೋಹಿತ್ ಚಕ್ರತೀರ್ಥ ಅವರಿಗೆ ನಾಗರಿಕರ ಹೆಸರಿನಲ್ಲಿ ಸನ್ಮಾನ ಆಯೋಜಿಸಿರುವುದು ಮತ್ತು ಮಂಗಳೂರು ವಿವಿ ಕುಲಪತಿ ಅಧ್ಯಕ್ಷತೆ ವಹಿಸಿರುವುದು ಪ್ರಗತಿಪರರ ಆಕ್ರೋಶಕ್ಕೆ ಕಾರಣವಾಗಿತ್ತು. ಸಾಮಾಜಿಕ ಜಾಲತಾಣದಲ್ಲಿಯೂ ಈ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಈ ಕಾರ್ಯಕ್ರಮ ವಿರೋಧಿಸಿ ದೇಶಪ್ರೇಮಿ ಸಂಘಟನೆ ಒಕ್ಕೂಟದಿಂದ ಕಾರ್ಯಕ್ರಮ ಸ್ಥಳ ಮುತ್ತಿಗೆ ಹಾಕಲು ನಿರ್ಧರಿಸಿತ್ತು. ಈ ವ್ಯಾಪಕ ವಿರೋಧದ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಕಾರ್ಯಕ್ರಮ ರದ್ದುಪಡಿಸಲಾಗಿದೆ.

(ಇದನ್ನೂ ವಿರೋಧಿಸಿ: ಅಪಪ್ರಚಾರದ ಬಗ್ಗೆ ನನಗೆ ಅಪಾರ ದುಃಖ, ಬೇಸರವಿದೆ : ಪಠ್ಯಪುಸ್ತಕ ವಿವಾದ ಕುರಿತು ಚಕ್ರತೀರ್ಥ ವಿವರಣೆ)

ETV Bharat Logo

Copyright © 2024 Ushodaya Enterprises Pvt. Ltd., All Rights Reserved.