ಬಂಟ್ವಾಳ: ಮಂಗವಾರ ಸಂಜೆ ಆರ್ಎಸ್ಎಸ್ ಮುಖಂಡ ಹಾಗೂ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅವರ ಆರೋಗ್ಯದಲ್ಲಿ ಸಣ್ಣಮಟ್ಟಿನ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಡಾ. ಭಟ್ ಚೇತರಿಸಿಕೊಂಡಿದ್ದು, ಯಾರೂ ಗಾಬರಿಗೆ ಒಳಗಾಗುವುದು ಬೇಡ ಎಂದು ಆಪ್ತ ವಲಯಗಳು ತಿಳಿಸಿವೆ.
ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ದಿನವಿಡೀ ಚಟುವಟಿಕೆಯಿಂದಿದ್ದ ಡಾ. ಭಟ್ ಅವರಿಗೆ ಸಂಜೆ ವೇಳೆ ಆರೋಗ್ಯದಲ್ಲಿ ಕೊಂಚ ಏರುಪೇರು ಉಂಟಾಗಿದೆ. ಹಿನ್ನೆಲೆಯಲ್ಲಿ ಕೂಡಲೇ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ತೆರಳಿದ್ದು, ಚಿಕಿತ್ಸೆ ಪಡೆದಿದ್ದಾರೆ. ಸದ್ಯ ಚೇತರಿಸಿಕೊಳ್ಳುತ್ತಿರುವುದಾಗಿ ತಿಳಿದುಬಂದಿದೆ.
ಓದಿ : ಸಿಎಂ ದೆಹಲಿ ಯಾತ್ರೆ; ಇಂದು ನಡ್ಡಾ, ಅಮಿತಾ ಶಾ ಭೇಟಿ, ಸಚಿವ ಸಂಪುಟ ಪುನಾರಚನೆ ಬಗ್ಗೆ ಚರ್ಚೆ ಸಾಧ್ಯತೆ!