ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸ್ಥಾನಕ್ಕೆ ಸಸಿಕಾಂತ್ ಸೆಂಥಿಲ್ ಅವರು ರಾಜೀನಾಮೆ ನೀಡಿದ ದಿನದಂದೇ ಅವರ ಸ್ಥಾನಕ್ಕೆ ಸಿಂಧು ಬಿ ರೂಪೇಶ್ ಅವರನ್ನು ಜಿಲ್ಲಾಧಿಕಾರಿಯಾಗಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ಶುಕ್ರವಾರ ಐಎಎಸ್ ಸೇವೆಗೆ ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆ ಸಿಂಧು ಬಿ ರೂಪೇಶ್ ಅವರನ್ನು ಸರ್ಕಾರ ನೇಮಕ ಮಾಡಿದೆ. ಸಿಂಧು ಬಿ ರೂಪೇಶ್ ಅವರು ಉಡುಪಿ ಜಿಲ್ಲಾ ಪಂಚಾಯತ್ ಸಿಇಓ ಆಗಿ ಕಾರ್ಯನಿರ್ವಹಿಸುತ್ತಿದ್ದರು.