ಸುಬ್ರಹ್ಮಣ್ಯ: ಮಹಿಳೆಯನ್ನು ಲೈಂಗಿಕವಾಗಿ ಬಳಸಿ ಮದುವೆಯಾಗುತ್ತೇನೆ ಎಂದು ನಂಬಿಸಿ 1.70 ಲಕ್ಷ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಕ್ಕೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಸಂತ್ರಸ್ತೆಯ ಪತಿ ತೀರಿಕೊಂಡಿದ್ದು, ತನ್ನ ಮಕ್ಕಳೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಿದ್ದಾರೆ. ಮೇ. 20 ರಂದು ರಾತ್ರಿ 10 ಗಂಟೆಗೆ ಪವನ್ ಎಂಬಾತ ಮದ್ಯಪಾನ ಮಾಡಿಕೊಂಡು ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎನ್ನಲಾಗಿದೆ. ಈ ಕುರಿತು ವಿಧವಾ ಮಹಿಳೆ ಪೊಲೀಸ್ ಠಾಣೆಗೆ ದೂರು ನೀಡುತ್ತೇನೆ ಎಂದು ಹೇಳಿದಾಗ, ನಿನ್ನನ್ನು ಮದುವೆಯಾಗುತ್ತೇನೆ, ಪೊಲೀಸ್ ಕಂಪ್ಲೇಂಟ್ ನೀಡಬೇಡ ಎಂದು ಒತ್ತಾಯಿಸಿದ್ದ ಆರೋಪಿ, ವಕೀಲರ ಮುಖಾಂತರ ಲಿಖಿತ ಒಪ್ಪಿಗೆ ನೀಡಿದ್ದಾನೆ.
ನಂತರ ಮಹಿಳೆಯಿಂದ 1.70 ಲಕ್ಷ ರೂಪಾಯಿ ಹಣ ಪಡೆದುಕೊಂಡು ಈಗ ಮದುವೆಯಾಗುವುದಿಲ್ಲ ಎಂದು ವಂಚಿಸಿದ್ದಾನೆ ಅಂತ ಸುಬ್ರಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಇದನ್ನೂ ಓದಿ: ತಡರಾತ್ರಿ ಪ್ರಿಯಕರನ ಭೇಟಿ ಮಾಡಲು ತೆರಳಿದ್ದ ಪ್ರಿಯತಮೆ.. ಯುವತಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ನಾಲ್ವರು!