ಮಂಗಳೂರು: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಇಡಿ ಇಲಾಖೆ ತೀವ್ರ ವಿಚಾರಣೆ ನಡೆಸುತ್ತಿದ್ದು, ಈ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಿದ್ದರಾಮಯ್ಯ ಡಿ.ಕೆ.ಶಿವಕುಮಾರ್ ವಿರುದ್ಧ ರಾಜಕೀಯ ದುರುದ್ದೇಶದಿಂದ ಇಡಿ ತನಿಖೆ ನಡೆಸಲಾಗುತ್ತಿದೆ. ಕಾನೂನು ಬಿಟ್ಟು ದ್ವೇಷದ ರಾಜಕಾರಣ ಸರಿಯಲ್ಲ. ಇಡಿ, ಐಟಿ ಕಿರುಕುಳ ಕೊಡುತ್ತಿರುವುದನ್ನು ನಿಲ್ಲಿಸಬೇಕು ಎಂದು ಸಿದ್ದು ಆರೋಪಿಸಿದ್ದಾರೆ.