ಬಂಟ್ವಾಳ : ಎಸ್ಎಸ್ಎಲ್ಸಿ ಓದುತ್ತಿದ್ದ ಬಾಲಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಳಿಕೆ ಗ್ರಾಮದ ನೆಕ್ಕಿತಪುಣಿ ಎಂಬಲ್ಲಿ ನಡೆದಿದೆ.
ಗ್ರಾಮದ ನೆಕ್ಕಿತಪುಣಿ ನಿವಾಸಿ ಸವರ್ ಡಿಸೋಜ ಅವರ ಪುತ್ರ ಸಂದೀಪ್ ಅನಿಸಿತ್ ಡಿಸೋಜ (15) ಆತ್ಮಹತ್ಯೆಗೆ ಶರಣಾದ ಬಾಲಕ. ಈತ 10ನೇ ತರಗತಿಯಲ್ಲಿ ಓದುತ್ತಿದ್ದು, ಸರಿಯಾಗಿ ಶಾಲೆಗೆ ಹೋಗುತ್ತಿರಲಿಲ್ಲ.
ನಿನ್ನೆ (ಸೋಮವಾರ) ರಾತ್ರಿ ಕೋಣೆಯಲ್ಲಿ ಮಲಗಿದ್ದ. ಬೆಳಗ್ಗೆ ಮನೆಯವರು ನೋಡಿದಾಗ ಈತನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಆಕಸ್ಮಿಕ ಬೆಂಕಿ: ನಡು ರಸ್ತೆಯಲ್ಲೇ ಹೊತ್ತಿ ಉರಿದ ಮೆಕ್ಕೆಜೋಳ ತುಂಬಿದ ಲಾರಿ - VIDEO