ETV Bharat / city

ಕೊರೊನಾ ಭೀತಿ ನಡುವೆಯೇ SSLC ಪರೀಕ್ಷೆ: ವಿದ್ಯಾರ್ಥಿಗಳಿಗೆ ಮೊಬೈಲ್ ನಿಷೇಧ

ಪರೀಕ್ಷೆ ಬರೆಯಲಿರುವ ಮಕ್ಕಳಿಗೆ ಕುಡಿಯುವ ನೀರು, ಶೌಚಾಲಯದ ವ್ಯವಸ್ಥೆ, ಗಾಳಿಬೆಳಕು ಹಾಗೂ ಪಿಠೋಪಕರಣ ವ್ಯವಸ್ಥೆ ಸೇರಿದಂತೆ ಎಲ್ಲ ಕ್ರಮ ಕೈಗೊಳ್ಳಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಲೋಕೇಶ್​ ತಿಳಿಸಿದರು.

SSLC test amid corona panic
ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಲೋಕೇಶ್​​
author img

By

Published : Mar 21, 2020, 9:37 PM IST

ಪುತ್ತೂರು: ಎಸ್ಎಸ್​​​ಎಲ್​ಸಿ ಪರೀಕ್ಷೆ ಮುಂದೂಡುವ ಗೊಂದಲಕ್ಕೆ ರಾಜ್ಯ ಸರ್ಕಾರ ಇದೀಗ ತೆರೆ ಎಳೆದಿದೆ. ಮಾರ್ಚ್ 27ರಿಂದ ಏಪ್ರಿಲ್ 9ತನಕ ಪರೀಕ್ಷೆ ನಡೆಯಲಿದೆ. ರಾಜ್ಯದಲ್ಲಿ 8 ಲಕ್ಷ ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವುದರಿಂದ ಕೊರೊನಾ ಭೀತಿ ಕಾಡುವ ಆತಂಕವೂ ಎದುರಾಗಿದೆ. ವಿದ್ಯಾರ್ಥಿಗಳು ಗುಂಪಾಗಿ ಬರುವುದು, ಪರೀಕ್ಷೆ ಬರೆಯುವ ಪ್ರಕ್ರಿಯೆ, ಪರೀಕ್ಷಾ ಕೇಂದ್ರದಲ್ಲಿ ಮೇಲ್ವಿಚಾರಕರಾಗಿರುವ ಶಿಕ್ಷಕರ ಪಾಲಿಗೂ ಆತಂಕ ಉಂಟು ಮಾಡಿದೆ.

ಮೊಬೈಲ್ ನಿಷೇಧ: ಮೊದಲ ಬಾರಿಗೆ ಮೊಬೈಲ್ ಸ್ವಾಧೀನಾಧಿಕಾರಿ ನೇಮಕ ಮಾಡಲಾಗಿದೆ. ಯಾವುದೇ ವಿದ್ಯಾರ್ಥಿ ಮೊಬೈಲ್ ತರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಜಿಲ್ಲಾಧಿಕಾರಿ, ಎಸ್​​ಪಿ ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೊರತುಪಡಿಸಿ ಪರೀಕ್ಷಾ ಕೇಂದ್ರದಲ್ಲಿರುವ ಶಿಕ್ಷಕರು, ಅಧಿಕಾರಿಗಳು ಮೊಬೈಲ್ ಬಳಸುವಂತಿಲ್ಲ. ಆದರೆ, ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬರುವಾಗ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿಲ್ಲ.

ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಲೋಕೇಶ್​​

ಸಕಲ ಸಿದ್ಧತೆ: ಪರೀಕ್ಷಾ ವ್ಯವಸ್ಥೆಗೆ ಸಕಲ ಸಿದ್ಧತೆಗಳನ್ನು ಮಾಡಲಾಗಿದೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆಗಳನ್ನು ನೀಡಲು 5 ಮಾರ್ಗಗಳನ್ನು ವ್ಯವಸ್ಥಿತಗೊಳಿಸಲಾಗಿದೆ. 12 ಕೇಂದ್ರಗಳಿಗೆ ತಲಾ ಒಬ್ಬರಂತೆ ತಾಲೂಕು ಮಟ್ಟದ ಅಧಿಕಾರಿಗಳನ್ನು ಈ ಕಾರ್ಯಕ್ಕೆ ನೇಮಿಸಲಾಗಿದೆ.

  • ತಾಲೂಕಿನಲ್ಲಿ ಒಟ್ಟು ಪರೀಕ್ಷಾ ಕೇಂದ್ರಗಳ ಸಂಖ್ಯೆ 12
  • ಈ ಬಾರಿ ಪರೀಕ್ಷೆ ಬರೆಯಲಿರುವ ಮಕ್ಕಳ ಸಂಖ್ಯೆ 4786 (2,413 ಬಾಲಕರು, 2373 ಬಾಲಕಿಯರು)
  • ಪರೀಕ್ಷೆಗಾಗಿ ವ್ಯವಸ್ಥಿತಗೊಂಡಿರುವ ಕೊಠಡಿಗಳ ಸಂಖ್ಯೆ 215
  • ಮೇಲ್ವಿಚಾರಕರಾಗಿ ಕಾರ್ಯ ನಿರ್ವಹಿಸಲಿರುವ ಶಿಕ್ಷಕರ ಸಂಖ್ಯೆ 309
  • ಒಟ್ಟು ಅಳವಡಿಸಿರುವ ಸಿ.ಸಿ.ಕ್ಯಾಮೆರಾಗಳ ಸಂಖ್ಯೆ 251

ETV Bharat Logo

Copyright © 2024 Ushodaya Enterprises Pvt. Ltd., All Rights Reserved.