ಸುಳ್ಯ: ಲಾಕ್ಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವೇಶ ಕಲ್ಪಿಸುವ ಪ್ರಮುಖ ಹೆದ್ದಾರಿ, ಕಡಬ ತಾಲೂಕು ವ್ಯಾಪ್ತಿಯಲ್ಲಿ ಬರುವ, ಮಂಗಳೂರು -ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಚೆಕ್ ಪೋಸ್ಟ್ ನಲ್ಲಿ ತಪಾಸಣಾ ಕೇಂದ್ರ ಆರಂಭಿಸಲಾಗಿದೆ.
ಬೆಂಗಳೂರು ಸೇರಿದಂತೆ ಇತರ ಜಿಲ್ಲೆಗಳಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವೇಶ ಮಾಡುವ ಎಲ್ಲ ವಾಹನಗಳು ಹಾಗೂ ಪ್ರಯಾಣಿಕರನ್ನು ಕಟ್ಟುನಿಟ್ಟಿನ ತಪಾಸಣೆ ಮಾಡಲಾಗುತ್ತಿದ್ದು, ಸಕಲ ಸುರಕ್ಷತಾ ವ್ಯವಸ್ಥೆಗಳನ್ನು ಕೈಗೊಳ್ಳಲಾಗಿದೆ.
ಜಿಲ್ಲಾಡಳಿತದ ನಿರ್ದೇಶನದಂತೆ, ಪುತ್ತೂರು ತಾಲೂಕು ಅಸಿಸ್ಟೆಂಟ್ ಕಮೀಷನರ್ ಯತೀಶ್ ಉಲ್ಲಾಳ್ ಮುಂದಾಳತ್ವದಲ್ಲಿ, ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರ ನೇತೃತ್ವದಲ್ಲಿ ಆರೋಗ್ಯ ತಪಾಸಣೆ ಮತ್ತು ವಾಹನಗಳ ತಪಾಸಣೆ ಮಾಡಲಾಗುತ್ತಿದೆ.
ವಿವಿಧ ಜಿಲ್ಲೆಗಳಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸುವ ಎಲ್ಲ ಜನರನ್ನು ಆರೋಗ್ಯ ತಪಾಸಣೆ ಮಾಡಿ ಅವರ ಮಾಹಿತಿಗಳನ್ನು ಆಯಾ ವಲಯಗಳಲ್ಲಿನ ಅಧಿಕಾರಿಗಳಿಗೆ ರವಾನೆ ಮಾಡಲಾಗುತ್ತಿದೆ. ನಂತರದಲ್ಲಿ ಆಯಾ ಪ್ರದೇಶಗಗಳಲ್ಲೇ ಜನರನ್ನು ಕ್ವಾರೆಂಟೈನ್ ಮಾಡುವ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ. ದಿನದ 24 ಗಂಟೆ ಅಧಿಕಾರಿಗಳು ಗುಂಡ್ಯ ಚೆಕ್ ಪೋಸ್ಟ್ ನಲ್ಲಿ ತಪಾಸಣಾ ಕಾರ್ಯ ನಿರ್ವಹಿಸಲಿದ್ದಾರೆ.