ಮಂಗಳೂರು: ಪತ್ರಕರ್ತರ 35 ನೇ ರಾಜ್ಯ ಸಮ್ಮೇಳನ ಇಂದಿನಿಂದ ಎರಡು ದಿನಗಳ ಕಾಲ ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ.
ಇಂದು ಬೆಳಗ್ಗೆ ಸಿಎಂ ಯಡಿಯೂರಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದ್ದು, ಉಪ ಮುಖ್ಯಮಂತ್ರಿಗಳಾದ ಡಾ.ಸಿ.ಎನ್.ಅಶ್ವತ್ಥನಾರಾಯಣ್, ಗೋವಿಂದ ಕಾರಜೋಳ, ಸಂಸದರಾದ ನಳಿನ್ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ, ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಕೆ.ಎಸ್.ಈಶ್ವರಪ್ಪ, ಸದಾನಂದ ಗೌಡ, ಜೆ.ಸಿ.ಮಾಧುಸ್ವಾಮಿ, ಸುರೇಶ್ ಕುಮಾರ್, ಬಸವರಾಜ ಬೊಮ್ಮಾಯಿ, ಮಾಜಿ ಸಿಎಂಗಳಾದ ಕುಮಾರಸ್ವಾಮಿ, ವೀರಪ್ಪ ಮೊಯ್ಲಿ ಸೇರಿದಂತೆ ಹಲವಾರು ರಾಜಕೀಯ ನಾಯಕರು ಭಾಗವಹಿಸಲಿದ್ದಾರೆ.
ಎರಡು ದಿನಗಳಲ್ಲಿ ಪತ್ರಿಕೋದ್ಯಮ ಸಂಬಂಧಿ ಹಲವಾರು ಗೋಷ್ಠಿಗಳನ್ನು ಹಿರಿಯ, ಕಿರಿಯ ಪತ್ರಕರ್ತರು ನೆರವೇರಿಸಲಿದ್ದಾರೆ. ಒಟ್ಟಿನಲ್ಲಿ ಈ ಎರಡು ದಿನಗಳ ಕಾಲ ಪತ್ರಿಕೋದ್ಯಮದ ಹಲವಾರು ಮಜಲುಗಳ ಬಗ್ಗೆ ಬಹಳಷ್ಟು ಚರ್ಚಾಗೋಷ್ಠಿಗಳು ನಡೆಯಲಿವೆ. ಅಲ್ಲದೆ ಈ ಸಂದರ್ಭದಲ್ಲಿ ವ್ಯಂಗ್ಯಚಿತ್ರ, ಫೋಟೋ ಪ್ರದರ್ಶನ ಇರಲಿದೆ.