ಉಳ್ಳಾಲ: ಮಲತಂದೆಯೋರ್ವ ಅಪ್ರಾಪ್ತ ಮಗಳ ಮೇಲೆಯೇ ಅತ್ಯಾಚಾರವೆಸಗಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಾವೂರು ಎಂಬಲ್ಲಿ ನಡೆದಿದೆ. ಪ್ರಕರಣ ಸಂಬಂಧ ಆರೋಪಿ ಅಶ್ವಥ್ (25) ಎಂಬಾತನನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹೊರ ಜಿಲ್ಲೆಯಿಂದ ಬಂದ ಕುಟುಂಬ ಪಾವೂರಿನಲ್ಲಿ ನೆಲೆಸಿತ್ತು. ಮಹಿಳೆಯ ಪತಿ ಸಾವನ್ನಪ್ಪಿದ ಬಳಿಕ ಅಶ್ವಥ್ ಜತೆಗೆ ಸಂತ್ರಸ್ತ ಬಾಲಕಿಯ ತಾಯಿ ಸಂಸಾರ ನಡೆಸುತ್ತಿದ್ದರು. ಆಕೆ ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾದ ಹಿನ್ನೆಲೆಯಲ್ಲಿ ಅಶ್ವಥ್ ಹಾಗೂ ಬಾಲಕಿ ಮನೆಯಲ್ಲಿದ್ದರು. ಈ ಸಂದರ್ಭದಲ್ಲಿ ಬಾಲಕಿ ಮೇಲೆ ಆರೋಪಿ ಅತ್ಯಾಚಾರವೆಸಗಿದ್ದಾನೆ ಎನ್ನಲಾಗ್ತಿದೆ. ವಿಪರೀತ ರಕ್ತಸ್ರಾವವಾದ ಕಾರಣ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಪಾಂಡೇಶ್ವರದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಇದನ್ನೂ ಓದಿ: ಹೊತ್ತಿ ಉರಿವ ಚಿತೆಯಿಂದ ವ್ಯಕ್ತಿಯ ರುಂಡ ತೆಗೆದು ಮನೆಗೆ ಕೊಂಡೊಯ್ದ ಯುವಕ!