ಮಂಗಳೂರು: ನಗರದಲ್ಲಿ ನಡೆದ ಮೋದಿ ಚುನಾವಣಾ ಪ್ರಚಾರ ಭಾಷಣದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ಜನರಿದ್ದ ಬಸ್ಗೆ ಕಲ್ಲು ತೂರಾಟ ನಡೆಸಿದ ಘಟನೆ ಮಂಗಳೂರು ಹೊರವಲಯದಲ್ಲಿರುವ ಕುತ್ತಾರು ಮದನಿನಗರ ಎಂಬಲ್ಲಿ ನಡೆದಿದೆ.
ಘಟನೆಯಲ್ಲಿ ಇಬ್ಬರಿಗೆ ಗಾಯವಾಗಿದೆ. ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿ ವಾಪಸ್ಸಾಗುತ್ತಿದ್ದ ಈ ಬಸ್ ಮತ್ತು ಬೈಕ್ ನಡುವೆ ಅಪಘಾತ ನಡೆದಿತ್ತು. ಈ ಸಂದರ್ಭ ದುಷ್ಕರ್ಮಿಗಳು ಬಸ್ಸಿಗೆ ಕಲ್ಲು ತೂರಾಟ ನಡೆಸಿದ್ದಾರೆ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲ್ಲು ತೂರಾಟ ನಡೆಸಿದ ದುಷ್ಕರ್ಮಿಗಳನ್ನು ಬಂಧಿಸಬೇಕೆಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಕೊಣಾಜೆ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು. ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡ ಪೊಲೀಸರು ಈಗಾಗಲೇ ಕೆಲವು ಆರೋಪಿಗಳನ್ನು ಬಂಧಿಸಿದ್ದಾರೆ.