ಮಂಗಳೂರು: ಕಾಲೇಜೊಂದರ ಐದು ವಿದ್ಯಾರ್ಥಿಗಳು ವಿದ್ಯಾರ್ಥಿನಿಯೋರ್ವಳನ್ನು ಕಾರಿನಲ್ಲಿ ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಮಾಡಿದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ ಎಂಟು ಮಂದಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.
ಮುರಳೀಧರ (29), ಚಂದ್ರಶೇಖರ ಮಯ್ಯ (47) ಸೇರಿ ಒಟ್ಟು ಎಂಟು ಮಂದಿಯನ್ನು ಬಂಧಿಸಲಾಗಿದೆ.
ಅತ್ಯಾಚಾರ ಮಾಡಿದ ವಿದ್ಯಾರ್ಥಿಯೊಬ್ಬ ಸಾಮೂಹಿಕ ಅತ್ಯಾಚಾರದ ವಿಡಿಯೋವನ್ನು ಆ್ಯಪ್ವೊಂದರಲ್ಲಿ ಸ್ಟೇಟಸ್ ಹಾಕಿಕೊಂಡಿದ್ದ. ಈ ವಿಡಿಯೋವನ್ನು ಅದೇ ಕಾಲೇಜಿನ ಮತ್ತೊಬ್ಬ ವಿದ್ಯಾರ್ಥಿ ಮೋಹಿತ್ ಎಂಬಾತ ಡೌನ್ಲೋಡ್ ಮಾಡಿಕೊಂಡಿದ್ದನಂತೆ. ಇತ್ತೀಚೆಗೆ ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿಗಳ ಚುನಾವಣೆಯಲ್ಲಿ ಅತ್ಯಾಚಾರ ಮಾಡಿದ ತಂಡ ಹಾಗೂ ಮತ್ತೊಂದು ತಂಡದ ನಡುವೆ ವೈಷಮ್ಯ ಬೆಳೆದಿತ್ತು ಎನ್ನಲಾಗಿದೆ. ಅತ್ಯಾಚಾರ ಆರೋಪಿಗಳ ತೇಜೋವಧೆ ಮಾಡುವ ಉದ್ದೇಶದಿಂದ ವಿದ್ಯಾರ್ಥಿಯೊಬ್ಬ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದ ಎನ್ನಲಾಗಿದೆ.