ಮಂಗಳೂರು: ಕೇರಳದ ಕಣ್ಣೂರು ಮತ್ತು ಮಂಗಳೂರು ನಡುವೆ ಪ್ಯಾಸೆಂಜರ್ ರೈಲು(Kerala Kannur to Mangalore passenger train) ಸಂಚಾರವನ್ನು ಪುನಾರಂಭಿಸುವಂತೆ ಎಬಿವಿಪಿ(ABVP) ನೇತೃತ್ವದಲ್ಲಿ (Mangalore Student protest) ವಿದ್ಯಾರ್ಥಿಗಳು ಮಂಗಳೂರು ರೈಲ್ವೆ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿ ಒತ್ತಾಯಿಸಿದರು.
ದಿನನಿತ್ಯ ನಗರಕ್ಕೆ ಕೇರಳದಿಂದ ಸಾವಿರಾರು ವಿದ್ಯಾರ್ಥಿಗಳು ಶಿಕ್ಷಣಕ್ಕಾಗಿ ಬರುತ್ತಿದ್ದು, ಪ್ಯಾಸೆಂಜರ್ ರೈಲು ಇಲ್ಲದೆ ಸಂಕಷ್ಟಕ್ಕೆ ಒಳಗಾಗಿದ್ದಾರೆ. ರೈಲು ಸಂಚಾರ ಸ್ಥಗಿತ ಹಿನ್ನೆಲೆ ಬಸ್ ಅವಲಂಬಿಸಬೇಕಾಗಿದ್ದು, ಪ್ರತಿದಿನ 150ಕ್ಕೂ ಅಧಿಕ ಹಣ ವೆಚ್ಚವಾಗುತ್ತಿದೆ. ಇದರಿಂದಾಗಿ ವಿದ್ಯಾರ್ಥಿಗಳು ವಾರದಲ್ಲಿ ಎರಡು, ಮೂರು ದಿನ ಮಾತ್ರ ವಿದ್ಯಾಭ್ಯಾಸಕ್ಕಾಗಿ ಮಂಗಳೂರಿಗೆ ಬರುವಂತಾಗಿದೆ. ಈ ಹಿನ್ನೆಲೆಯಲ್ಲಿ ಪ್ಯಾಸೆಂಜರ್ ರೈಲು ಪುನಾರಂಭಿಸುಂತೆ ವಿದ್ಯಾರ್ಥಿಗಳು ಆಗ್ರಹಿಸಿದರು.