ETV Bharat / city

ಹಿಂದೂ ಯುವಕನ‌ ಅಂತ್ಯಸಂಸ್ಕಾರ ನಡೆಸಿ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಯುವಕರು - ಕೋಮು ಸೌಹಾರ್ದ

ಅಪಘಾತದಲ್ಲಿ ಮೃತಪಟ್ಟಿದ್ದ ಯುವಕನ ಅಂತ್ಯಸಂಸ್ಕಾರವನ್ನು ಮುಸ್ಲಿಂ ಯುವಕರು ಹಿಂದೂ ಸಂಪ್ರದಾಯದಂತೆ ನಡೆಸಿ ಕೋಮು ಸೌಹಾರ್ದತೆ ಮೆರೆದಿದ್ದಾರೆ.

ಅಂತ್ಯಸಂಸ್ಕಾರ ನೆರವೇರಿಸುತ್ತಿರುವ ಮುಸ್ಲಿಂ ಯುವಕರು
author img

By

Published : Mar 21, 2019, 9:44 AM IST

ಮಂಗಳೂರು: ಕೆಎಸ್​ಆರ್​ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿದ್ದ ಹಿಂದೂ ಯುವಕನ ಮೃತದೇಹವನ್ನು ಮುಸ್ಲಿಂ ಯುವಕರು ಸೇರಿಕೊಂಡು ಸಾರ್ವಜನಿಕರ ನೆರವಿನೊಂದಿಗೆ ಹಿಂದೂ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದಿದೆ.

ಸೋಮವಾರ ಸುಬ್ರಹ್ಮಣ್ಯದಿಂದ ಮಂಗಳೂರಿಗೆ ತೆರಳುತ್ತಿದ್ದ ಕೆಎಸ್​ಆರ್​ಟಿಸಿ ಎಕ್ಸ್‌ಪ್ರೆಸ್ ಬಸ್ ಕಡಬ ಸಮೀಪದ ನೀರಾಜೆ ಎಂಬಲ್ಲಿ ರಸ್ತೆ ಬದಿ ನಿಂತಿದ್ದ ಕಡಬ ತಾಲೂಕಿನ 102 ನೆಕ್ಕಿಲಾಡಿ ಗ್ರಾಮದ ಯುವಕ ಮಣಿಕಂಠ ಎಂಬುವರಿಗೆ ಡಿಕ್ಕಿ ಹೊಡೆದಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಅವರು, ಪುತ್ತೂರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದರು.

ಮೃತ ಮಣಿಕಂಠ ತನ್ನ ಅಕ್ಕನ ಮನೆಯ ಪಕ್ಕದಲ್ಲೇ ಸಣ್ಣ ಗುಡಿಸಲಿನಲ್ಲಿ ವಾಸವಾಗಿದ್ದು, ಅಪಘಾತ ನಡೆದ ಸಮಯದಲ್ಲಿ ಅವರ ಅಕ್ಕ ಕೇರಳದಲ್ಲಿದ್ದರು. ಈ ಹಿನ್ನೆಲೆಯಲ್ಲಿ ಮೃತದೇಹವನ್ನು ಆತನ ಮುಸ್ಲಿಂ ಗೆಳೆಯರೇ ಆಸ್ಪತ್ರೆಯಿಂದ ಮನೆಗೆ ತೆಗೆದುಕೊಂಡು ಹೋಗಿದ್ದರು. ಅಲ್ಲದೆ ಅವರು, ಹಿಂದೂ ಬಾಂಧವರ ಸಹಕಾರದೊಂದಿಗೆ ಕಡಬದ ಸಾರ್ವಜನಿಕ ರುದ್ರ ಭೂಮಿಯಲ್ಲಿ ಹಿಂದೂ ಸಂಪ್ರದಾಯದಂತೆ ಮಣಿಕಂಠನ ಅಂತ್ಯ ಸಂಸ್ಕಾರವನ್ನು ನೆರವೇರಿಸಿ ಕೋಮು ಸೌಹಾರ್ದತೆ ಮೆರೆದಿದ್ದಾರೆ.

Mangaluru File name_Accident Reporter_Vishwanath Panjimogaru ಹಿಂದೂ ಯುವಕನ‌ ಅಂತ್ಯಸಂಸ್ಕಾರ ನಡೆಸಿ ಕೋಮು ಸೌಹಾರ್ದ ಮೆರೆದ ಮುಸ್ಲಿಂ ಯುವಕರು ಮಂಗಳೂರು: ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿದ್ದ ಹಿಂದೂ ಯುವಕನ ಮೃತದೇಹವನ್ನು ಮುಸ್ಲಿಂ ಯುವಕರು ಸೇರಿಕೊಂಡು ಸಾರ್ವಜನಿಕರ ನೆರವಿನೊಂದಿಗೆ ಹಿಂದೂ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದಿದೆ. ಸೋಮವಾರ ಸುಬ್ರಹ್ಮಣ್ಯದಿಂದ ಮಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಎಕ್ಸ್‌ಪ್ರೆಸ್ ಬಸ್ ಕಡಬ ಸಮೀಪದ ನೀರಾಜೆ ಎಂಬಲ್ಲಿ ರಸ್ತೆ ಬದಿ ನಿಂತಿದ್ದ ಕಡಬ ತಾಲೂಕಿನ 102 ನೆಕ್ಕಿಲಾಡಿ ಗ್ರಾಮದ ಯುವಕ ಮಣಿಕಂಠ ಎಂಬವರಿಗೆ ಢಿಕ್ಕಿ ಹೊಡೆದಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಅವರು ಪುತ್ತೂರು ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟಿದ್ದರು. ಮೃತ ಮಣಿಕಂಠ ತನ್ನ ಅಕ್ಕನ ಮನೆಯ ಪಕ್ಕದಲ್ಲೇ ಸಣ್ಣ ಗುಡಿಸಲಿನಲ್ಲಿ ವಾಸವಾಗಿದ್ದು, ಅಪಘಾತ ನಡೆದ ಸಮಯದಲ್ಲಿ ಅವರ ಅಕ್ಕ ಕೇರಳದಲ್ಲಿದ್ದರು. ಈ ಹಿನ್ನೆಲೆಯಲ್ಲಿ ಮೃತದೇಹವನ್ನು ಆತನ ಮುಸ್ಲಿಂ ಗೆಳೆಯರೇ ಆಸ್ಪತ್ರೆಯಿಂದ ಮನೆಗೆ ತೆಗೆದುಕೊಂಡು ಹೋಗಿದ್ದರು. ಅಲ್ಲದೆ ಅಂತ್ಯಸಂಸ್ಕಾರವನ್ನು ಮುಸ್ಲಿಂ ಯುವಕರು ಹಿಂದೂ ಬಾಂಧವರ ಸಹಕಾರದೊಂದಿಗೆ ಕಡಬದ ಸಾರ್ವಜನಿಕ ರುದ್ರ ಭೂಮಿಯಲ್ಲಿ ಹಿಂದೂ ಸಂಪ್ರದಾಯದಂತೆ ಮೃತ ಮಣಿಕಂಠನ ಅಂತ್ಯ ಸಂಸ್ಕಾರವನ್ನು ವಿಧಿವತ್ತಾಗಿ ನೆರವೇರಿಸಿ, ಕೋಮು ಸೌಹಾರ್ದ ಮೆರೆದಿದ್ದರು. Reporter_Vishwanath Panjimogaru
ETV Bharat Logo

Copyright © 2024 Ushodaya Enterprises Pvt. Ltd., All Rights Reserved.