ಮಂಗಳೂರು: ಟೆಂಪೋವೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರೂ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು ಹೊರವಲಯದ ತಲಪಾಡಿ ಚೆಕ್ಪೋಸ್ಟ್ ಬಳಿ ನಡೆದಿದೆ.
ಬೈಕ್ ಸಾಗುತ್ತಿದ್ದ ವೇಳೆ ವೇಗವಾಗಿ ಬಂದ ಟೆಂಪೊ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರರಿಬ್ಬರು ದೂರಕ್ಕೆ ಎಗರಿ ಬಿದ್ದಿದ್ದಾರೆ. ಕೂದಲೆಳೆ ಅಂತರದಲ್ಲಿ ದುರಂತವೊಂದು ತಪ್ಪಿದ್ದು, ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಬೈಕ್ನಲ್ಲಿದ್ದ ಓರ್ವ ಪುರುಷ ಮತ್ತು ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಸಂಬಂಧ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.