ಮಂಗಳೂರು: ಪ್ರಕರಣವೊಂದರ ಆರೋಪಿ 30 ವರ್ಷಗಳಿಂದ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಕಿನ್ಯಾ ಗ್ರಾಮದ ಬೆಳರಿಂಗೆ ನಿವಾಸಿ ಶೇಕಬ್ಬ (50) ಎಂಬಾತನನ್ನು ಉಳ್ಳಾಲ ಪೊಲೀಸರು ದಸ್ತಗಿರಿ ಮಾಡಿದ್ದಾರೆ.
ಪ್ರಕರಣದ ಹಿನ್ನೆಲೆ: ಆರೋಪಿ ಶೇಕಬ್ಬ, ಮೊಹಮ್ಮದ್ ಎಂಬಾತನೊಂದಿಗೆ 1989ರ ನವೆಂಬರ್ 22ರಂದು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕಿನ್ಯಾ ಗ್ರಾಮದ ಕುಕ್ಕುದಕಟ್ಟೆ ಎಂಬಲ್ಲಿ ಫಕೀರ್ ಬ್ಯಾರಿ ಎಂಬವರ ಮೇಲೆ ಹಲ್ಲೆ ನಡೆಸಿದ್ದನು. ಈ ಬಗ್ಗೆ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಶೇಕಬ್ಬ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ.
![ದಸ್ತಗಿರಿ](https://etvbharatimages.akamaized.net/etvbharat/prod-images/4350322_police.jpg)
ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ಅವರು ಜಾರಿಗೆ ತಂದ 'ನನ್ನ ಬೀಟ್ ನನ್ನ ಹೆಮ್ಮೆ'ಯ ಮೂಲಕ ಬೀಟ್ ಗೆ ತೆರಳಿದ್ದ ವೇಳೆ ಪೊಲೀಸರು ಆರೋಪಿಯನ್ನು ದಸ್ತಗಿರಿ ಮಾಡಿದ್ದಾರೆ.