ETV Bharat / city

ಸರ್ಕಾರ ನಿರೀಕ್ಷೆ ಮಟ್ಟದ ಪರಿಹಾರ ಕೊಡುವಲ್ಲಿ ವಿಫಲ: ರಮಾನಾಥ ರೈ - ರಮಾನಾಥ ರೈ

ಈ ಬಾರಿ ದಕ್ಷಿಣ ಕ‌ನ್ನಡ ಜಿಲ್ಲೆಯಲ್ಲಿ ಮಳೆಯಿಂದಾಗಿ ಸಾಕಷ್ಟು ಹಾನಿಯಾಗಿದೆ. ಪ್ರಕೃತಿ ವಿಕೋಪದಿಂದ ತೊಂದರೆಯಾಗಿರುವ ಸಂತ್ರಸ್ತರಿಗೆ ಸರ್ಕಾರ ನಿರೀಕ್ಷೆ ಮಟ್ಟದ ಪರಿಹಾರ ಕೊಡುವಲ್ಲಿ ವಿಫಲವಾಗಿದೆ ಎಂದು ಮಾಜಿ ಸಚಿವ ರಮಾನಾಥ ರೈ ಆರೋಪಿಸಿದರು.

ರಮಾನಾಥ ರೈ
author img

By

Published : Aug 26, 2019, 11:59 PM IST

Updated : Aug 27, 2019, 1:01 PM IST

ಮಂಗಳೂರು: ಈ ಬಾರಿ ದಕ್ಷಿಣ ಕ‌ನ್ನಡ ಜಿಲ್ಲೆಯಲ್ಲಿ ಮಳೆಯಿಂದಾಗಿ ಸಾಕಷ್ಟು ಹಾನಿಯಾಗಿದೆ. ಪ್ರಕೃತಿ ವಿಕೋಪದಿಂದ ತೊಂದರೆಯಾಗಿರುವ ಸಂತ್ರಸ್ತರಿಗೆ ಸರ್ಕಾರ ನಿರೀಕ್ಷೆಯ ಮಟ್ಟದ ಪರಿಹಾರ ಕೊಡುವಲ್ಲಿ ವಿಫಲವಾಗಿದೆ ಎಂದು ಮಾಜಿ ಸಚಿವ ರಮಾನಾಥ ರೈ ಆರೋಪ ಮಾಡಿದ್ದಾರೆ.

ನಗರದ ಮಲ್ಲಿಕಟ್ಟೆಯಲ್ಲಿರುವ ದಕ್ಷಿಣ ಕ‌ನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ಜಿಲ್ಲೆ ಮಾತ್ರವಲ್ಲ ದೇಶದ ಹಲವು ಕಡೆಗಳಲ್ಲಿ ಹಾಗೂ ಕರ್ನಾಟಕದಾದ್ಯಂತ ಪ್ರವಾಹದಿಂದ ಸಾಕಷ್ಟು ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ದೇಶದ ಪ್ರಧಾನಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡದಿರುವುದು ಬಹಳ ಆಶ್ಚರ್ಯಕರ ಸಂಗತಿ. ಕಳೆದ ಬಾರಿ ಭೀಕರ ಪ್ರವಾಹದ ಸಂದರ್ಭ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಅವರು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ಮಾಡಿ, ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿಯವರ ಮನವಿಗೆ ಸ್ಪಂದಿಸಿ ತಕ್ಷಣ ಎರಡು ಸಾವಿರ ಕೋಟಿ ರೂ. ಪರಿಹಾರ ಘೋಷಣೆ ಮಾಡಿದ್ದರು.

ಮಾಜಿ ಸಚಿವ ರಮಾನಾಥ ರೈ

ಆದರೆ ಇಂದಿನ ಕೇಂದ್ರ ಸರಕಾರದ ತಂಡ ಕೇವಲ ವೈಮಾನಿಕ ಸಮೀಕ್ಷೆ ನಡೆಸಿದೆಯೇ ಹೊರತು, ಯಾವುದೇ ಪರಿಹಾರ ಘೋಷಣೆ ಮಾಡಿಲ್ಲ ಎಂದು ಹೇಳಿದರು. ಬಿಜೆಪಿ ರಾಜ್ಯಾಧ್ಯಕ್ಷರಾಗಿ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲು ನೇಮಕಗೊಂಡಿದ್ದಾರೆ. ಇದರಿಂದ ಕಾಂಗ್ರೆಸ್​ಗೆ ಹೊಡೆತ ಬೀಳಬಹುದೇ ಎಂಬ ಸುದ್ದಿಗಾರರ ಪ್ರಶ್ನೆಗೆ ರಮಾನಾಥ್​ ರೈ ಪ್ರತಿಕ್ರಿಯಿಸಿ, ಕಾಂಗ್ರೆಸ್​ಗೆ ಹೊಡೆತ ಇಲ್ಲ ಆದರೆ ಬಿಜೆಪಿಗೆ ಹೊಡೆತ ಬೀಳಬಹುದು ಎಂದು ಉತ್ತರಿಸಿದರು.

ಈ ಸಂದರ್ಭ ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ ಮಾತನಾಡಿ, ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸಂತ್ರಸ್ತರಿಗೆ ಸಾಂತ್ವನ ಹೇಳಲು ಹಾಗೂ ಪರಿಶೀಲನೆ ನಡೆಸಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಸ್ಟ್ 31 ರಂದು ದಕ್ಷಿಣ ಕ‌ನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಅಂದು ಬೆಳಗ್ಗೆ ಮಂಗಳೂರಿಗೆ ಆಗಮಿಸುವ ಅವರು ಪಚ್ಚನಾಡಿಯ ತ್ಯಾಜ್ಯ ಘಟಕ ಕುಸಿದು ತತ್ತರಗೊಂಡ ಮಂದಾರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ಬೆಳ್ತಂಗಡಿ ತಾಲೂಕಿಗೆ ತೆರಳಿ ಪರಿಶೀಲನೆ ನಡೆಸಲಿದ್ದಾರೆ ಎಂದರು.

Intro:ಮಂಗಳೂರು: ಈ ಬಾರಿ ದ.ಕ‌.ಜಿಲ್ಲೆಯಲ್ಲಿ ಮಳೆಯಿಂದಾಗಿ ಸಾಕಷ್ಟು ಹಾನಿಯಾಗಿದೆ. ಪ್ರಕೃತಿ ವಿಕೋಪದಿಂದ ತೊಂದರೆಯಾಗಿರುವ ಸಂತ್ರಸ್ತರಿಗೆ ಸರಕಾರ ನಿರೀಕ್ಷೆಯ ಮಟ್ಟದ ಪರಿಹಾರ ಕೊಡುವಲ್ಲಿ ವಿಫಲವಾಗಿದೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದರು.

ನಗರದ ಮಲ್ಲಿಕಟ್ಟೆಯಲ್ಲಿರುವ ದ.ಕ.ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ಜಿಲ್ಲೆ ಮಾತ್ರವಲ್ಲ ದೇಶದ ಹಲವು ಕಡೆಗಳಲ್ಲಿ ಹಾಗೂ ಕರ್ನಾಟಕದಾದ್ಯಂತ ಪ್ರವಾಹದಿಂದ ಸಾಕಷ್ಟು ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ದೇಶದ ಪ್ರಧಾನಿಯವರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡದ್ದು ಬಹಳ ಆಶ್ಚರ್ಯಕರ ಸಂಗತಿ. ಕಳೆದ ಬಾರಿಯ ಭೀಕರ ಪ್ರವಾಹದ ಸಂದರ್ಭ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಅವರು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ಮಾಡಿ, ವಿಮಾನನಿಲ್ದಾಣ ದಲ್ಲಿ ಮುಖ್ಯಮಂತ್ರಿ ಯವರ ಮನವಿಗೆ ಸ್ಪಂದಿಸಿ ತಕ್ಷಣ 2 ಸಾವಿರ ಕೋಟಿ ರೂ.ಪರಿಹಾರ ಘೋಷಣೆ ಮಾಡಿದ್ದರು. ಆದರೆ ಇಂದಿನ ಕೇಂದ್ರ ಸರಕಾರದ ತಂಡ ಕೇವಲ ವೈಮಾನಿಕ ಸಮೀಕ್ಷೆ ನಡೆಸಿದೆಯೇ ಹೊರತು. ಯಾವುದೇ ಪರಿಹಾರ ಘೋಷಣೆ ಮಾಡಿಲ್ಲ ಎಂದು ಹೇಳಿದರು.

Body:ಬಿಜೆಪಿ ರಾಜ್ಯಾಧ್ಯಕ್ಷರಾಗಿ ದ.ಕ.ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲು ನೇಮಕಗೊಂಡಿದ್ದಾರೆ ಇದರಿಂದ ಕಾಂಗ್ರೆಸ್ ಗೆ ಹೊಡೆತ ಬೀಳಬಹುದೇ ಎಂಬ ಸುದ್ದಿಗಾರರ ಪ್ರಶ್ನೆಗೆ ರಮಾನಾಥ ರೈಯವರು ಪ್ರತಿಕ್ರಿಯಿಸಿ, ಕಾಂಗ್ರೆಸ್ ಗೆ ಹೊಡೆತ ಇಲ್ಲ ಆದರೆ ಬಿಜೆಪಿಗೆ ಹೊಡೆತ ಬೀಳಬಹುದು ಎಂದು ಉತ್ತರಿಸಿದರು.

ಈ ಸಂದರ್ಭ ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ ಮಾತನಾಡಿ, ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸಂತ್ರಸ್ತರಿಗೆ ಸಾಂತ್ವನ ಹೇಳಲು ಹಾಗೂ ಪರಿಶೀಲನೆ ನಡೆಸಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆ.31ರಂದು ದ.ಕ.ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಅಂದು ಬೆಳಗ್ಗೆ ಮಂಗಳೂರಿಗೆ ಆಗಮಿಸುವ ಅವರು ಪಚ್ಚನಾಡಿಯ ತ್ಯಾಜ್ಯ ಘಟಕ ಕುಸಿದು ತತ್ತರಗೊಂಡ ಮಂದಾರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ಬೆಳ್ತಂಗಡಿ ತಾಲೂಕಿಗೆ ತೆರಳಿ ಪರಿಶೀಲನೆ ನಡೆಸಲಿದ್ದಾರೆ. ಅಂದು ಮಧ್ಯಾಹ್ನ 3ಗಂಟೆಗೆ ನಗರದ ಪುರಭವನದಲ್ಲಿ ನಡೆಯುವ ಪಕ್ಷದ ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

Reporter_Vishwanath Panjimogaru

Conclusion:
Last Updated : Aug 27, 2019, 1:01 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.