ಸುಳ್ಯ(ದಕ್ಷಿಣ ಕನ್ನಡ): ಬಿಜೆಪಿ ಯುವ ಮೋರ್ಚಾ ಜಿಲ್ಲಾ ಮುಖಂಡ ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆಯಿಂದಾಗಿ ಜಿಲ್ಲೆಯ ಸುಳ್ಳ, ಕಡಬ ಹಾಗು ಪುತ್ತೂರು ತಾಲುಕುಗಳಲ್ಲಿ ಪರಿಸ್ಥಿತಿ ಬಿಗುವಿನಿಂದ ಕೂಡಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.
ನಿನ್ನೆ ರಾತ್ರಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸ್ಥಳಕ್ಕೆ ಆಗಮಿಸುವ ತನಕವೂ ಮೃತದೇಹವನ್ನು ಕೊಂಡೊಯ್ಯಲು ಬಿಡುವುದಿಲ್ಲ ಎಂದು ಆಸ್ಪತ್ರೆ ಮುಂಭಾಗ ನೆರೆದಿದ್ದ ಸಂಬಂಧಿಕರು ಮತ್ತು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಪಟ್ಟು ಹಿಡಿದಿದ್ದರು. ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಸೋನಾವಣೆ, ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್ ಆಗಮಿಸಿ ಪ್ರತಿಭಟನಾಕಾರರ ಮನವೊಲಿಸುವ ಪ್ರಯತ್ನ ನಡೆಸಿದರೂ ಪ್ರಯೋಜನವಾಗಲಿಲ್ಲ. ತಡರಾತ್ರಿ 1.30 ರ ಸುಮಾರಿಗೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆಗಮಿಸಿ ಪ್ರತಿಭಟನಾಕಾರರ ಜೊತೆ ಮಾತುಕತೆ ನಡೆಸಿದರು.
ದುಷ್ಕೃತ್ಯ ಎಸಗಿದವರನ್ನು ಬಂಧಿಸಿ ಕಠಿಣ ಶಿಕ್ಷೆ ಕೊಡಿಸಲಾಗುವುದು. ಈಗಾಗಲೇ ಪೊಲೀಸ್ ಇಲಾಖೆ ತನಿಖೆಯಲ್ಲಿ ತೊಡಗಿದೆ. ಮೃತರ ಕುಟುಂಬಕ್ಕೆ ಒಂದು ಕೋಟಿ ರೂ ಪರಿಹಾರ ನೀಡಬೇಕೆಂಬ ಮನವಿಯನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಇದಕ್ಕಾಗಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದ ಡಿಸಿ, ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಮನವಿ ಮಾಡಿದರು. ಜಿಲ್ಲಾಧಿಕಾರಿ ನೀಡಿದ ಭರವಸೆಯ ಬಳಿಕ ಪ್ರತಿಭಟನೆ ಹಿಂತೆಗೆದುಕೊಳ್ಳಲಾಯಿತು.
ಪ್ರವೀಣ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪುತ್ತೂರಿನ ಪ್ರಗತಿ ಆಸ್ಪತ್ರೆಯಿಂದ ಪುತ್ತೂರು ಸರಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಬೆಳಗ್ಗೆ 9.30ಕ್ಕೆ ಪುತ್ತೂರು ನಗರದಿಂದ ಪಾರ್ಥಿವ ಶರೀರದ ಮೆರವಣಿಗೆ ಹೊರಟು ದರ್ಬೆ, ಸವಣೂರು ಕಾಣಿಯೂರು, ನಿಂತಿಕಲ್ಲು ಮೂಲಕ ಬೆಳ್ಳಾರೆಗೆ ಪ್ರವೀಣ್ ಮೃತದೇಹವನ್ನು ಕೊಂಡೊಯ್ಯಲು ಹಿಂದೂ ಸಂಘಟನೆಗಳು ಹಾಗೂ ಕುಟುಂಬಸ್ಥರು ನಿರ್ಧರಿಸಿದ್ದಾರೆ.
ಇನ್ನೊಂದೆಡೆ, ಪುತ್ತೂರು, ಸುಳ್ಯ ಹಾಗೂ ಕಡಬ ತಾಲೂಕುಗಳಲ್ಲಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ, ವಾಹನ ಸಂಚಾರ ನಿಲ್ಲಿಸಿ ಬಂದ್ ನಡೆಸಬೇಕೆಂದು ಹಿಂದೂಪರ ಸಂಘಟನೆಗಳು ಕರೆ ನೀಡಿವೆ. ಪೊಲೀಸರು ಮುನ್ನೆಚ್ಚರಿಕೆ ವಹಿಸಿದ್ದು ಬಂದೋಬಸ್ತ್ ಕಲ್ಪಿಸಿದ್ದಾರೆ. ಜಿಲ್ಲಾ ಪೊಲೀಸ್ ಅಧೀಕ್ಷಕ ಋಷಿಕೇಶ್ ಭಗವಾನ್ ಸೋನಾವಣೆ, ಡಿವೈಎಸ್ಪಿ ಡಾ.ಗಾನಾ ಪಿ.ಕುಮಾರ್, ಗ್ರಾಮಾಂತರ ವೃತ್ತ ನಿರೀಕ್ಷಕ ಉಮೇಶ್ ಉಪ್ಪಳಿಕೆ ಹಾಗೂ ಸುಳ್ಯ, ಕಡಬ ಬೆಳ್ಳಾರೆ ಪೊಲೀಸರು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ.
ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ: ಹೇಯ ಕೃತ್ಯವೆಸಗಿದ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನಡಿ ಶಿಕ್ಷಿಸುವುದಾಗಿ ಸಿಎಂ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ. ಜೊತೆಗೆ, ಪ್ರವೀಣ್ ಆತ್ಮಕ್ಕೆ ಶಾಂತಿ ಸಿಗಲಿ, ನೋವು ಭರಿಸುವ ಶಕ್ತಿಯನ್ನು ದೇವರು ಕುಟುಂಬಕ್ಕೆ ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ.
-
ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ. ಇಂಥ ಹೇಯಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು.
— Basavaraj S Bommai (@BSBommai) July 26, 2022 " class="align-text-top noRightClick twitterSection" data="
ಪ್ರವೀಣ ಆತ್ಮಕ್ಕೆ ಶಾಂತಿ ಸಿಗಲಿ, ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ಕರುಣಿಸಲಿ. ಓಂ ಶಾಂತಿಃ pic.twitter.com/kCk3W6hVc5
">ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ. ಇಂಥ ಹೇಯಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು.
— Basavaraj S Bommai (@BSBommai) July 26, 2022
ಪ್ರವೀಣ ಆತ್ಮಕ್ಕೆ ಶಾಂತಿ ಸಿಗಲಿ, ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ಕರುಣಿಸಲಿ. ಓಂ ಶಾಂತಿಃ pic.twitter.com/kCk3W6hVc5ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ. ಇಂಥ ಹೇಯಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು.
— Basavaraj S Bommai (@BSBommai) July 26, 2022
ಪ್ರವೀಣ ಆತ್ಮಕ್ಕೆ ಶಾಂತಿ ಸಿಗಲಿ, ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ಕರುಣಿಸಲಿ. ಓಂ ಶಾಂತಿಃ pic.twitter.com/kCk3W6hVc5
ಇದನ್ನೂ ಓದಿ: ಬಿಜೆಪಿ ಯುವ ಮುಖಂಡನಿಗೆ ಮಾರಣಾಂತಿಕ ಹಲ್ಲೆ.. ಆಸ್ಪತ್ರೆಗೆ ಸಾಗಿಸುವ ಮಧ್ಯೆ ಸಾವು