ಮಂಗಳೂರು: ಕರಾವಳಿಯಲ್ಲಿ ಇಂದಿನಿಂದ ಎಲ್ಲೋ ಅಲರ್ಟ್ ಘೋಷಣೆಯಾಗಿದ್ದರೂ ಬೆಳಗ್ಗಿನಿಂದ ಬಿಸಿಲಿನ ವಾತಾವರಣವಿದ್ದು, ಸಂಜೆ ವೇಳೆಗೆ ಮಳೆ ಸುರಿದಿದೆ. ಏಕಾಏಕಿ ಸುರಿದ ಮಳೆಗೆ ನೀರು ರಸ್ತೆಯಲ್ಲಿಯೇ ಹರಿಯುತ್ತಿದ್ದು, ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ.
ಸಂಜೆಯ ವೇಳೆ ಕೆಲಸದಿಂದ ಹೊರಡುವ ತರಾತುರಿಯಲ್ಲಿದ್ದ ಜನರಿಗೆ ಜೋರಾಗಿ ಸುರಿದ ಮಳೆಯಿಂದ ಅಡ್ಡಿಯುಂಟಾಗಿದೆ. ಅಲ್ಲದೆ ತಗ್ಗು ಪ್ರದೇಶಗಳಿಗೆ ನೀರು ಹರಿದು ರಸ್ತೆಯಲ್ಲಿಯೇ ನಿಂತ ಕಾರಣ ಪಾದಚಾರಿಗಳಿಗೂ ತೊಂದರೆ ಉಂಟಾಗಿದೆ.
ಮುಂಗಾರು ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಕರಾವಳಿ ಭಾಗ ಹಾಗೂ ಮಲೆನಾಡು ಭಾಗಗಳಲ್ಲಿ ಇಂದು ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ದ.ಕ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಎರಡು ದಿನಗಳ ಕಾಲ ಎಲ್ಲೋ ಅಲರ್ಟ್ ಘೋಷಣೆ ಮಾಡಿತ್ತು.