ETV Bharat / city

ವಿಳಂಬಗತಿಯಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ: ಮಂಗಳೂರಿನಲ್ಲಿ ಸಂಚಾರ ದುಸ್ತರ!

ಮಳೆಗಾಲ ಬರುವ ಮುನ್ನ ಮಂಗಳೂರಿನಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಕಾರ್ಯಗಳನ್ನು ಪೂರ್ಣಗೊಳಿಸಬೇಕು ಎಂಬ ನೆಲೆಯಲ್ಲಿ ಏಕಕಾಲದಲ್ಲಿ ಕಾಮಗಾರಿಗಳನ್ನು ಆರಂಭಿಸಲಾಗಿತ್ತು. ಆದರೆ, ಲಾಕ್​ಡೌನ್ ಪರಿಣಾಮ ನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣವಾಗಿಲ್ಲ. ಇದರಿಂದಾಗಿ ಸಂಚಾರ ವ್ಯವಸ್ಥೆಗೆ ಬಾರಿ ಸಮಸ್ಯೆ ಎದುರಾಗಿದೆ.

mangalore
ವಿಳಂಬಗತಿಯಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ
author img

By

Published : Jul 1, 2021, 7:44 AM IST

ಮಂಗಳೂರು: ಕೊರೊನಾ ಲಾಕ್​ಡೌನ್ ಪೂರ್ವದಲ್ಲಿ ನಗರದಲ್ಲಿ ಟ್ರಾಫಿಕ್ ಸಮಸ್ಯೆ ಕಂಡು ಬರುತ್ತಿರಲಿಲ್ಲ. ಮುಂಜಾನೆ ಮತ್ತು ಸಂಜೆಯ ವೇಳೆಗೆ ಕೆಲವು ಪ್ರದೇಶಗಳಲ್ಲಿ ಮಾತ್ರ ಟ್ರಾಫಿಕ್ ಸಮಸ್ಯೆ ಎದುರಾಗುತ್ತಿತ್ತು. ಆದರೆ, ಲಾಕ್​ಡೌನ್ ಸಡಿಲಿಕೆ ಬಳಿಕ ಸಂಪೂರ್ಣ ಟ್ರಾಫಿಕ್ ಸಮಸ್ಯೆ ಸುಳಿಯಲ್ಲಿ ಸಿಲುಕಿಕೊಂಡಿದೆ. ಇದಕ್ಕೆ ಕಾರಣ ನಗರದಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿ.

ವಿಳಂಬಗತಿಯಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ

ಮಳೆಗಾಲ ಬರುವ ಮುನ್ನ ಮಂಗಳೂರಿನಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಕಾರ್ಯಗಳನ್ನು ಪೂರ್ಣಗೊಳಿಸಬೇಕು ಎಂಬ ನೆಲೆಯಲ್ಲಿ ಏಕಕಾಲದಲ್ಲಿ ಕಾಮಗಾರಿಗಳನ್ನು ಆರಂಭಿಸಲಾಗಿತ್ತು. ಆದರೆ, ಲಾಕ್​ಡೌನ್ ಪರಿಣಾಮ ನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣವಾಗಿಲ್ಲ. ಇದೀಗ ಲಾಕ್​ಡೌನ್ ಸಡಿಲಿಕೆ ಆಗುತ್ತಿದ್ದಂತೆ ಕಾಮಗಾರಿಗಳು ಆರಂಭವಾಗಿವೆ. ಆದರೆ, ಇದೇ ವೇಳೆ ವಾಹನ ಸಂಚಾರ ಆರಂಭವಾಗಿರುವುದರಿಂದ ನಗರದ ತುಂಬೆಲ್ಲ ಸಂಚಾರ ದಟ್ಟಣೆ ಉಂಟಾಗಿದೆ.

ಮುಖ್ಯವಾಗಿ ಮಂಗಳೂರಿನ ಪುರಭವನದ ಬಳಿ ನಡೆಯುತ್ತಿರುವ ಅಂಡರ್​ ಪಾಸ್​ ಕಾಮಗಾರಿಯಿಂದ ಒಂದು ರಸ್ತೆ ಮುಚ್ಚಲಾಗಿದೆ. ಎರಡು ರಸ್ತೆಗಳಲ್ಲಿ ಏಕಮುಖವಾಗಿ ಬರುತ್ತಿದ್ದ ವಾಹನ ಸವಾರರು ಇದೀಗ ಒಂದೇ ರಸ್ತೆಯಲ್ಲಿ ಓಡಾಡಬೇಕಾಗಿದೆ.

ಮತ್ತೊಂದೆಡೆ ಮಂಗಳೂರಿನ ಹಂಪನಕಟ್ಟೆಯಿಂದ ಜ್ಯೋತಿ ಸರ್ಕಲ್​ ನಡುವೆ ಬಾವುಟ ಗುಡ್ಡೆಯಲ್ಲಿ ಕಾಂಕ್ರೀಟ್ ಕಾಮಗಾರಿ ನಡೆಯುತ್ತಿರುವುದರಿಂದ ಆ ರಸ್ತೆಯನ್ನು ಮುಚ್ಚಲಾಗಿದೆ. ಇದರ ಪರಿಣಾಮ ಹಂಪಂಕಟ್ಟೆಯಿಂದ ಜ್ಯೋತಿ ಸರ್ಕಲ್​ ನಡುವೆ ಇದ್ದ ಏಕಮುಖ ರಸ್ತೆ ಸಂಚಾರವನ್ನು ದ್ವಿಮುಖ ರಸ್ತೆ ಸಂಚಾರವನ್ನಾಗಿ ಮಾರ್ಪಾಡು ಮಾಡಲಾಗಿದೆ.

ಇಷ್ಟು ಮಾತ್ರವಲ್ಲದೇ ಮಂಗಳೂರು ನಗರದ ವಿವಿಧೆಡೆ ಕಾಮಗಾರಿಗಳಿಗಾಗಿ ರಸ್ತೆಗಳನ್ನು ಮುಚ್ಚಲಾಗಿದೆ. ಮತ್ತೊಂದೆಡೆ ಹಂಪನಕಟ್ಟೆಯಲ್ಲಿ ಈ ಹಿಂದೆ ತೆರವು ಮಾಡಲಾಗಿದ್ದ ಸಿಗ್ನಲ್​ ಮರುಸ್ಥಾಪಿಸಿರುವುದು ಸರಾಗ ಸಂಚಾರ ವ್ಯವಸ್ಥೆಗೆ ತೊಡಕಾಗಿದೆ.

ಇನ್ನು, ದಕ್ಷಿಣಕನ್ನಡ ಜಿಲ್ಲೆಯಲ್ಲಿ ಲಾಕ್​ಡೌನ್​ ಸಡಿಲಿಕೆ ಮಾಡಿದ್ದು, ಮಧ್ಯಾಹ್ನ 2 ಗಂಟೆವರೆಗೆ ಮಾತ್ರ ವ್ಯಾಪಾರ ಚಟುವಟಿಕೆಗಳಿಗೆ ಅನುಮತಿ ಇರುವುದರಿಂದ ಈ ಸಂದರ್ಭದಲ್ಲಿ ಕೆಲಸ ಮುಗಿಸಲು ಒಮ್ಮೆಲೆ ಜನರು ನಗರಕ್ಕೆ ಬರುತ್ತಿರುವುದು ಟ್ರಾಫಿಕ್​ ಸಮಸ್ಯೆ ಮತ್ತಷ್ಟು ಹೆಚ್ಚಿಸಿದೆ. ಇಂದಿನಿಂದ ಖಾಸಗಿ ಬಸ್ ಸಂಚಾರ ಆರಂಭವಾಗಲಿದ್ದು, ಸಂಚಾರ ವ್ಯವಸ್ಥೆ ಮತ್ತಷ್ಟು ಹದಗೆಡುವ ಸಾಧ್ಯತೆ ಇದೆ.

ಇದನ್ನೂ ಓದಿ: ಅಚ್ಚರಿಯಾದ್ರೂ ನಿಜ.. ಹುಲಿಯೂ ತಿನ್ನುತ್ತೆ ಹುಲ್ಲು: Video Viral

ETV Bharat Logo

Copyright © 2024 Ushodaya Enterprises Pvt. Ltd., All Rights Reserved.