ETV Bharat / city

ಕರ್ತವ್ಯದಲ್ಲಿ ಅಶಿಸ್ತು: ಮಂಗಳೂರು ಮಹಿಳಾ ಠಾಣೆಯ ಎಲ್ಲಾ 32 ಪೊಲೀಸ್​ ಸಿಬ್ಬಂದಿ ಎತ್ತಂಗಡಿ

author img

By

Published : Jan 6, 2022, 2:09 PM IST

ಮಂಗಳೂರು ನಗರದ ಮಹಿಳಾ ಠಾಣೆಯಲ್ಲಿ ಕೆಲ ಸಿಬ್ಬಂದಿ ನಡುವೆ ಗುಂಪುಗಾರಿಕೆ, ಭಿನ್ನಾಭಿಪ್ರಾಯ ಇರುವ ಬಗ್ಗೆ ಮಾಹಿತಿ ಬಂದಿರುವ ಹಿನ್ನೆಲೆಯಲ್ಲಿ ಅಲ್ಲಿದ್ದ 32 ಸಂಪೂರ್ಣ ಅಧಿಕಾರಿ, ಸಿಬ್ಬಂದಿಯನ್ನು ವರ್ಗಾವಣೆ ಮಾಡಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದ್ದಾರೆ.

ಮಂಗಳೂರು ಪೊಲೀಸ್ ಕಮಿಷನರ್  ಎನ್. ಶಶಿಕುಮಾರ್
ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್

ಮಂಗಳೂರು: ಅಶಿಸ್ತು, ಗುಂಪುಗಾರಿಕೆ, ಕರ್ತವ್ಯಲೋಪ ಹಿನ್ನೆಲೆಯಲ್ಲಿ ಮಂಗಳೂರು ನಗರದ ಮಹಿಳಾ ಪೊಲೀಸ್ ಠಾಣೆಯ ಎಲ್ಲಾ 32 ಮಂದಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಸಾರಾಸಗಟಾಗಿ ವಿವಿಧ ಠಾಣೆಗಳಿಗೆ ವರ್ಗಾವಣೆ ಮಾಡಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಆದೇಶ ಹೊರಡಿಸಿದ್ದಾರೆ.

ಜುಲೈ ತಿಂಗಳಲ್ಲಿ ಕಂಕನಾಡಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್​ಟೇಬಲ್ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಮೊಬೈಲ್ ಮೂಲಕ ಅನುಚಿತವಾಗಿ ವರ್ತಿಸಿದ್ದ ಎಂದು ದೂರು ದಾಖಲಾಗಿತ್ತು. ಈತನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆ ಆರೋಪಿಯನ್ನು ಅಮಾನತು ಮಾಡಿ ತನಿಖೆ ಕೈಗೊಳ್ಳಲಾಗಿತ್ತು.

ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್

2021ರ ಆಗಸ್ಟ್ 26 ರಂದು ಸಂಜೆ ಮಹಿಳಾ ಪೊಲೀಸ್‌ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿ ಠಾಣೆಯಲ್ಲಿಯೇ ಮದ್ಯದ ಪಾರ್ಟಿ ನಡೆಸಿರುವ ಆರೋಪ ಕೇಳಿ ಬಂದಿತ್ತು. ಈ ದೃಶ್ಯ ಠಾಣೆಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಈ ದೃಶ್ಯಾವಳಿಯನ್ನು ಪರಿಶೀಲನೆ ನಡೆಸಿರುವ ಕೇಂದ್ರ ಉಪ ವಿಭಾಗದ ಎಸಿಪಿ ಅವರು ಸಲ್ಲಿಸಿರುವ ಪ್ರಾಥಮಿಕ ವಿಚಾರಣೆಯಿಂದ ಆರೋಪವು ಮೇಲ್ನೋಟಕ್ಕೆ ದೃಢಪಟ್ಟಿರುತ್ತದೆ. ಈ ಹಿನ್ನೆಲೆಯಲ್ಲಿ ಮದ್ಯಪಾನ ಪಾರ್ಟಿ ಮಾಡಿರುವ ಆರೋಪದಲ್ಲಿ ಮಹಿಳಾ ಪೊಲೀಸ್ ಠಾಣೆಯ ಎಎಸ್‌ಐಗಳಾದ ಬಾಬುನಾಯ್ಕ ಮತ್ತು ದಯಾನಂದ, ಹೆಡ್ ಕಾನ್ ಸ್ಟೇಬಲ್ ರವಿಚಂದ್ರ ಹಾಗೂ ಇಬ್ಬರು ಮಹಿಳಾ ಸಿಬ್ಬಂದಿಯನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಅಲ್ಲದೇ, ಮಹಿಳಾ ಪೊಲೀಸ್‌ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಒಟ್ಟು 32 ಅಧಿಕಾರಿಗಳನ್ನು (ಅಮಾನತು ಗೊಂಡವರನ್ನು ಸೇರಿ) ಬೇರೆ ಬೇರೆ ಠಾಣೆಗೆ ವರ್ಗಾವಣೆಗೊಳಿಸಲಾಗಿರುತ್ತದೆ. ಖಾಲಿಯಾಗಿರುವ ಹುದ್ದೆಗೆ ಹೊಸದಾಗಿ ಇಬ್ಬರು ಪಿಎಸ್ಐ, ಓರ್ವ ಹೆಡ್ ಕಾನ್ಸ್​ಟೇಬಲ್ ಹಾಗೂ 16 ಪಿಸಿಗಳನ್ನು ಮಹಿಳಾ ಪೊಲೀಸ್‌ ಠಾಣೆಗೆ ನಿಯುಕ್ತಿಗೊಳಿಸಲಾಗಿರುತ್ತದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.