ಮಂಗಳೂರು(ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಅಸೈಗೋಳಿಯಲ್ಲಿ ಅಂಬೇಡ್ಕರ್ ಜಯಂತಿಗೆ ಹಾಕಲಾದ ಫ್ಲೆಕ್ಸ್ ಅನ್ನು ಹಾನಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಕೋಣಾಜೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಅಸೈಗೋಳಿಯ ಶರಣ್ (24), ಹರೇಕಳದ ಸುಜಿತ್ (26) ಬಂಧಿತ ಆರೋಪಿಗಳು.
ಇದನ್ನೂ ಓದಿ: ಶ್ರೀರಾಮುಲು ಮನೆ ಬಳಿ ಸಾರಿಗೆ ನೌಕರರಿಂದ ಅಹೋರಾತ್ರಿ ಉಪವಾಸ ಸತ್ಯಾಗ್ರಹ: ಅಧ್ಯಕ್ಷ ಚಂದ್ರಶೇಖರ್
ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ 131ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಆಯೋಜಿಸಿರುವ ದಕ್ಷಿಣಕನ್ನಡ ಜಿಲ್ಲಾ ದಲಿತ್ ಸೇವಾ ಸಮಿತಿ ವಿಟ್ಲ ಸಂಘಟನೆಯು ಮಂಗಳೂರಿನ ಅಸೈಗೋಳಿಯಲ್ಲಿ ಫ್ಲೆಕ್ಸ್ ಅಳವಡಿಸಿದ್ದರು. ಈ ಫ್ಲೆಕ್ಸ್ ಅನ್ನು ಹರಿದು ಹಾನಿ ಮಾಡಿರುವ ಬಗ್ಗೆ ಕೋಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿಗಳಿಬ್ಬರನ್ನು ಬಂಧಿಸಿದ್ದಾರೆ.