ETV Bharat / city

ಉಗ್ರರ ಪರ ಗೋಡೆ ಬರಹ ಪ್ರಕರಣ ; ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿದ ಕೋರ್ಟ್​​ - controversial wall writing case in mangalore

ಶನಿವಾರದಂದು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಪೊಲೀಸ್ ಕಸ್ಟಡಿಗೆ ನೀಡಿದ ನ್ಯಾಯಾಲಯ ಕೋವಿಡ್ ಪರೀಕ್ಷೆಗೆ ಸೂಚಿಸಿತ್ತು. ವರದಿ ನೆಗೆಟಿವ್ ಬಂದ ಕಾರಣ ಇಂದು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು..

controversial-wall-writing
ವಿವಾದಿತ ಗೋಡೆ ಬರಹ
author img

By

Published : Dec 9, 2020, 9:52 PM IST

ಮಂಗಳೂರು : ಉಗ್ರರ ಪರ ಗೋಡೆ ಬರಹ ಬರೆದು ಬಂಧನಕ್ಕೀಡಾಗಿರುವ ಇಬ್ಬರು ಆರೋಪಿಗಳನ್ನು ನ್ಯಾಯಾಲಯ ಪೊಲೀಸ್ ಕಸ್ಟಡಿಗೆ ನೀಡಿದೆ.

ತೀರ್ಥಹಳ್ಳಿ ಮೂಲದ ಮುಹಮ್ಮದ್ ಶಾರೀಕ್ (22), ಮಾಝ್ ಮುನೀರ್ ಅಹ್ಮದ್ (21) ಎಂಬುವರು ಮಂಗಳೂರಿನ ಕದ್ರಿಯ ಅಪಾರ್ಟ್​​ಮೆಂಟ್ ಗೋಡೆ ಮತ್ತು ನ್ಯಾಯಾಲಯದ ಆವರಣದ ಹಳೆಯ ಪೊಲೀಸ್ ಔಟ್ ಪೋಸ್ಟ್​​ ಗೋಡೆ ಮೇಲೆ ಆಕ್ಷೇಪಾರ್ಹ ಬರಹಗಳನ್ನು ಬರೆದಿದ್ದರು.

ಇದನ್ನೂ ಓದಿ...ಮಂಗಳೂರಿನಲ್ಲಿ ವಿವಾದಿತ ಗೋಡೆ ಬರಹ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಶನಿವಾರದಂದು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಪೊಲೀಸ್ ಕಸ್ಟಡಿಗೆ ನೀಡಿದ ನ್ಯಾಯಾಲಯ ಕೋವಿಡ್ ಪರೀಕ್ಷೆಗೆ ಸೂಚಿಸಿತ್ತು. ವರದಿ ನೆಗೆಟಿವ್ ಬಂದ ಕಾರಣ ಇಂದು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಈ ಸಂದರ್ಭದಲ್ಲಿ ಪೊಲೀಸ್ ಕಸ್ಟಡಿಗೆ ನೀಡುವಂತೆ ಪೊಲೀಸರು ಕೋರಿದ್ದು, ಅದರಂತೆ ನ್ಯಾಯಾಲಯವು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ.

ವಿದೇಶದಿಂದ ಕುಮ್ಮಕ್ಕು, ಮತ್ತೋರ್ವ ವಶಕ್ಕೆ: ಉಗ್ರ ಗೋಡೆ ಬರಹ ಪ್ರಕರಣದಲ್ಲಿ ಪ್ರಮುಖ ಆರೋಪಿ ಮುಹಮ್ಮದ್ ಶಾರೀಕ್​ಗೆ ಪ್ರಚೋದನೆ ನೀಡಿದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಗೆ ವಿದೇಶದಿಂದಲೇ ವ್ಯಕ್ತಿಯೊಬ್ಬ ಕುಮ್ಮಕ್ಕು ನೀಡಿದ್ದಾನೆ ಎಂದು ಪೊಲೀಸ್ ತನಿಖೆ ವೇಳೆ ಬೆಳಕಿಗೆ ಬಂದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.