ETV Bharat / city

ದಂಪತಿಯಿಂದ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ: ಮಂಗಳೂರಲ್ಲಿ ಸಿಸಿಬಿ ದಾಳಿ - ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ

ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ದಂಪತಿಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಬಂಧಿಸಿದ್ದಾರೆ.

two arrested for selling drugs to students in Mangalore
ಮಾದಕ ವಸ್ತು ಮಾರಾಟ
author img

By

Published : Jul 16, 2022, 8:55 PM IST

Updated : Jul 16, 2022, 9:38 PM IST

ಮಂಗಳೂರು(ದಕ್ಷಿಣ ಕನ್ನಡ) : ನಗರದ ಸಾರ್ವಜನಿಕರಿಗೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ದಂಪತಿಗಳನ್ನು‌ ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಗರದ ಕಾವೂರಿನ ಶಂಕರನಗರದ ಕೆ ಸಿ ಆಳ್ವ ಲೇಔಟ್​​​ನ ವಿಖ್ಯಾತ್ ಅಲಿಯಾಸ್​ ವಿಕ್ಕಿ ಬಪ್ಪಾಲ್ (28), ಆತನ ಪತ್ನಿ ಅಂಜನಾ (21) ಬಂಧಿತರು.

ಇವರು ನಗರದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಇನ್ಸ್​ಪೆಕ್ಟರ್ ಮಹೇಶ್ ಪ್ರಸಾದ್ ಮತ್ತು ಪಿಎಸ್ಐ ರಾಜೇಂದ್ರ ಬಿ ಅವರ ನೇತೃತ್ವದ ತಂಡ ದಾಳಿ ಮಾಡಿದೆ. ಆರೋಪಿಗಳಿಂದ ಒಟ್ಟು 2 ಕಿಲೋ 200 ಗ್ರಾಂ ತೂಕದ 22 ಸಾವಿರ ರೂ. ಮೌಲ್ಯದ ಗಾಂಜಾ, 1,500 ರೂ. ನಗದು, ಒಂದು ಮೊಬೈಲ್ ಮತ್ತು ಡಿಜಿಟಲ್ ತೂಕ ಮಾಪನ ವಶಪಡಿಸಿಕೊಂಡಿದ್ದಾರೆ.

ಮಾದಕ ವಸ್ತು ಮಾರಾಟ ಮಾಡುತ್ತಿದ್ದ ದಂಪತಿಗಳ ಬಂಧನ

ಈ ಗಾಂಜಾ ಮಾರಾಟ ಜಾಲದಲ್ಲಿ ಭಾಗಿಯಾಗಿರುವ ಇನ್ನೂ ಹಲವು ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ. ಆರೋಪಿಗಳನ್ನು ಮಾದಕ ವಸ್ತುಗಳ ಸೇವನೆ ಬಗ್ಗೆ ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಆರೋಪಿ ವಿಖ್ಯಾತ್ ಎಂಬಾತನ ವಿರುದ್ಧ ಈ ಹಿಂದೆ 13 ಪ್ರಕರಣಗಳು ದಾಖಲಾಗಿದ್ದವು. ಆರೋಪಿಗಳ ವಿರುದ್ಧ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

ಇದನ್ನೂ ಓದಿ : ತಾಯಿ ಮೇಲೆ ಮಗನ ಕ್ರೌರ್ಯ: ಶೌಚಕ್ಕಾಗಿ ನಿರ್ಮಿಸಿದ ಗುಂಡಿಗೆ ತಳ್ಳಿದ ಕ್ರೂರಿ!

Last Updated : Jul 16, 2022, 9:38 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.