ಉಳ್ಳಾಲ(ದಕ್ಷಿಣ ಕನ್ನಡ): ಸೋಮವಾರ ರಾತ್ರಿ ಸುರಿದ ಭಾರಿ ಮಳೆಗೆ ಶಿಥಿಲಾವಸ್ಥೆಯಲ್ಲಿದ್ದ ಶಾಲೆಯ ಕಟ್ಟಡ ಕುಸಿದು ಬಿದ್ದಿರುವ ಘಟನೆ ಕಿನ್ಯಾ ಬೆಳರಿಂಗೆಯಲ್ಲಿ ನಡೆದಿದೆ. ಕಿನ್ಯಾ ಬೆಳರಿಂಗೆಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಹಳೇ ಕಟ್ಟಡ ಕುಸಿದುಬಿದ್ದಿದೆ.
ಸಮೀಪದಲ್ಲೇ ಹೊಸತಾದ ಕಟ್ಟಡ ನಿರ್ಮಿಸಲಾಗಿದ್ದು, ಅದರಲ್ಲಿ ತರಗತಿಗಳು ನಡೆಯುತ್ತಿದ್ದುದರಿಂದ ತರಗತಿ ನಡೆಸಲು ಅಡಚಣೆಯಾಗಿಲ್ಲ. ಆದರೆ ರಾತ್ರಿ ವೇಳೆ ಕಟ್ಟಡ ಕುಸಿದುಬಿದ್ದಿರುವುದರಿಂದ ಸಂಭಾವ್ಯ ಅನಾಹುತ ತಪ್ಪಿದೆ.
ಹಳೇ ಕಟ್ಟಡ ಕೆಡವಲು ಗ್ರಾಮ ಪಂಚಾಯತ್ನಿಂದ ಶಿಕ್ಷಣ ಇಲಾಖೆಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ, ಅನುಮತಿ ನೀಡದ ಹಿನ್ನೆಲೆಯಲ್ಲಿ ಕೆಡವಲು ಸಾಧ್ಯವಾಗಿಲ್ಲ ಎಂದು ಗ್ರಾಮ ಪಂಚಾಯತ್ ಸದಸ್ಯ ಸಿರಾಜ್ ಕಿನ್ಯಾ ತಿಳಿಸಿದ್ದಾರೆ.
ಇದನ್ನೂ ಓದಿ: ಬಾಲಿವುಡ್ನಲ್ಲಿ ಅದೃಷ್ಟ ಪರೀಕ್ಷೆಗೆ ಮುಂದಾದ 'ಗಬ್ಬರ್ ಸಿಂಗ್'.. ಬಿಗ್ ಬಜೆಟ್ ಚಿತ್ರಕ್ಕಾಗಿ ಧವನ್ ತಯಾರಿ